ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈಕೋರ್ಟ್ ಸಿಜೆ ರಿತುರಾಜ್ ಅವಸ್ಥಿ ನಿವೃತ್ತಿ, ಆತ್ಮೀಯ ಬೀಳ್ಕೊಡುಗೆ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಜುಲೈ 01; ಸುಮಾರು 9 ತಿಂಗಳು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಶನಿವಾರ ನಿವೃತ್ತರಾಗಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಅವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.

ವಾಸ್ತವವಾಗಿ ರಿತುರಾಜ್ ಅವಸ್ಥಿ ಶನಿವಾರ ನಿವೃತ್ತರಾಗಲಿದ್ದಾರೆ. ಆದರೆ ಶನಿವಾರ ಹೈಕೋರ್ಟ್‌ಗೆ ರಜೆ ಇರುವ ಕಾರಣ ಶುಕ್ರವಾರವೇ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ಕರ್ನಾಟಕ ರಾಜ್ಯ ವಕೀಲರ ಪರಿಷತ್ ಮತ್ತು ಬೆಂಗಳೂರು ವಕೀಲರ ಸಂಘದಿಂದ ಪ್ರತ್ಯೇಕ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

ಹೈಕೋರ್ಟ್ ಹಂಗಾಮಿ ಸಿಜೆಯಾಗಿ ನ್ಯಾ.ಅಲೋಕ್ ಅರಾಧೆ ನೇಮಕ ಹೈಕೋರ್ಟ್ ಹಂಗಾಮಿ ಸಿಜೆಯಾಗಿ ನ್ಯಾ.ಅಲೋಕ್ ಅರಾಧೆ ನೇಮಕ

44 ಸಾವಿರ ಕೇಸ್ ವಿಲೇವಾರಿ: ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ರಿತುರಾಜ್ ಅವಸ್ಥಿ, "ನ್ಯಾಯಮೂರ್ತಿಯಾಗಿ ಸೇವೆ ಮಾಡಿದ್ದಕ್ಕೆ ಹೋಲಿಕೆ ಮಾಡಿದರೆ ವಕೀಲಿಕೆ ವೃತ್ತಿ ಅನುಭವಿಸಿದ್ದು, ಸಾಕಷ್ಟು ತೃಪ್ತಿ ಪಡೆದಿದ್ದೇನೆ" ಎಂದರು.

ಪಿಎಸ್‌ಐ ನೇಮಕ ಹಗರಣ: ಸಮರ್ಪಕ ತನಿಖೆಗೆ ಹೈಕೋರ್ಟ್ ಆದೇಶಪಿಎಸ್‌ಐ ನೇಮಕ ಹಗರಣ: ಸಮರ್ಪಕ ತನಿಖೆಗೆ ಹೈಕೋರ್ಟ್ ಆದೇಶ

"2009ರಲ್ಲಿ ಅಲಾಹಾಬಾದ್ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಆಗುವವರೆಗೆ 22 ವರ್ಷಗಳ ಕಾಲ ವಕೀಲನಾಗಿ ಕೆಲಸ ಮಾಡಿದ್ದೇನೆ. ಎಲ್ಲ ಯುವ ವಕೀಲರಂತೆ ಸಾಕಷ್ಟು ಶ್ರಮವಹಿಸಿ ಅಲಾಹಾಬಾದ್ ಹೈಕೋರ್ಟ್ ವಕೀಲರ ವೃಂದ ಮತ್ತು ನ್ಯಾಯಮೂರ್ತಿಗಳಿಂದ ಸಾಕಷ್ಟು ಕಲಿತಿದ್ದೇನೆ" ಎಂದು ನೆನಪಿಸಿಕೊಂಡರು.

Justice Ritu Raj Awasthi

"ಅಲಹಾಬಾದ್ ಹೈಕೋರ್ಟ್ ಮತ್ತು ಇಲ್ಲಿನ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇರಿ ಒಟ್ಟು 44 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಿದ್ದೇನೆ. 500ಕ್ಕೂ ಹೆಚ್ಚು ಪ್ರಕರಣಗಳು ಬಹುಮುಖ್ಯ ಕಾನೂನಿನ ಪ್ರಶ್ನೆಗಳನ್ನು ಒಳಗೊಂಡಿವೆ ಎಂದು ಪರಿಗಣಿಸಲ್ಪಟ್ಟಿವೆ" ಎಂದು ಹೇಳಿದರು.

ಹಿಜಾಬ್ ವಿವಾದ; ವಿದ್ಯಾರ್ಥಿನಿಯರಿಗೆ ಡಿಸಿ ಕಾನೂನು ಪಾಠ ಹಿಜಾಬ್ ವಿವಾದ; ವಿದ್ಯಾರ್ಥಿನಿಯರಿಗೆ ಡಿಸಿ ಕಾನೂನು ಪಾಠ

"ವಕೀಲರ ಬದುಕು ಸವಾಲಿನಿಂದ ಕೂಡಿರುತ್ತದೆ. ವಕೀಲನಾಗಿ ಶ್ರಮವಹಿಸಿದ್ದು ಮತ್ತು ನನಗೆ ಸಿಕ್ಕ ಅವಕಾಶಗಳಿಂದ ಸಾಕಷ್ಟು ತೃಪ್ತಿ ಪಡೆದಿದ್ದೇನೆ. ನ್ಯಾಯಮೂರ್ತಿಯಾಗಿ ಸೇವೆ ಮಾಡಿದ್ದಕ್ಕೆ ಹೋಲಿಕೆ ಮಾಡಿದರೆ ವಕೀಲಿಕೆ ವೃತ್ತಿಯನ್ನು ಅನುಭವಿಸಿದ್ದು, ಸಾಕಷ್ಟು ತೃಪ್ತಿ ಪಡೆದಿದ್ದೇನೆ. ಹಲವು ಪ್ರಮುಖ ಮತ್ತು ಸವಾಲಿನ ಪ್ರಕರಣಗಳಲ್ಲಿ ವಾದ ಮಂಡಿಸಿದ್ದೇನೆ" ಎಂದು ಅವರು ಹಿಂದಿನ ದಿನಗಳನ್ನು ನೆನಪಿಸಿಕೊಂಡರು.

"ವಕೀಲಿಕೆ ಆರಂಭಿಸಿದಾಗ ನಾನು ಯಾರಿಗೂ ಗೊತ್ತಿರಲಿಲ್ಲ. 2009ರಲ್ಲಿ ನಾನು ನ್ಯಾಯಮೂರ್ತಿಯಾಗಿ ನೇಮಕವಾಗಿ ಚೇಂಬರ್ ಬಿಟ್ಟಾಗ 5 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ ಇದ್ದವು. ವಕೀಲನಾಗಿ ಎಲ್ಲವನ್ನೂ ನೋಡಿದ್ದೇನೆ" ಎಂದು ರಿತುರಾಜ್ ಅವಸ್ಥಿ ವಿವರಿಸಿದರು.

ಉತ್ತಮ ಹೈಕೋರ್ಟ್; "ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಲಭಿಸಿದ್ದು ಸುವರ್ಣಾವಕಾಶವೆಂದು ಪರಿಗಣಿಸಿದ್ದೇನೆ. ಕರ್ನಾಟಕ ಹೈಕೋರ್ಟ್ ದೇಶದ ಅತ್ಯುತ್ತಮ ಹೈಕೋರ್ಟ್‌ಗಳಲ್ಲಿ ಒಂದು. ಈ ರಾಜ್ಯದ ಹಲವು ಜಿಲ್ಲೆಗಳಿಗೆ ಕಳೆದ 8-9 ತಿಂಗಳಲ್ಲಿ ಭೇಟಿ ನೀಡಿದ್ದು, ಅಲ್ಲಿನ ವೈವಿಧ್ಯತೆಯನ್ನು ಗಮನಿಸಿದ್ದೇನೆ. ಹೀಗಾಗಿ, ಒಂದು ರಾಜ್ಯ, ಹಲವು ದೇಶ ಎಂಬ ಸೂಕ್ತಿಯು ಇಲ್ಲಿಗೆ ಹೊಂದುತ್ತದೆ. ಕರ್ನಾಟಕದ ಜನರ ಪ್ರೀತಿ ವಿಶ್ವಾಸ ಎಂದಿಗೂ ಹೊರಗಿನವನು ಎನಿಸಿಲ್ಲ. ಸಾಕಷ್ಟು ನೆನಪುಗಳನ್ನು ಇಲ್ಲಿಂದ ನಾನು ಹೊತ್ತೊಯ್ಯುತ್ತೇನೆ" ಎಂದರು.

Recommended Video

HD Devegowdaರ ಸಾವು ಬಯಸಿ ನಾಲಗೆ ಹರಿಬಿಟ್ಟ KN Rajanna | Oneindia Kannada

ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ಧರಿಸುವುದಕ್ಕೆ ಸಂಬಂಧಿಸಿದ ಅರ್ಜಿಯನ್ನು ಸುಮಾರು 11 ದಿನ ವಿಚಾರಣೆ ನಡೆಸಿ ತೀರ್ಪು ನೀಡಿದ್ದ ಸಾಂವಿಧಾನಿಕ ಪೀಠದಲ್ಲಿ ರಿತುರಾಜ್ ಅವಸ್ಥಿ ಮುಖ್ಯ ಪಾತ್ರವಹಿಸಿದ್ದನ್ನು ನೆನಪು ಮಾಡಿಕೊಳ್ಳಬಹುದು.

English summary
Karnataka high court one of the best high court in the country said Karnataka High Court Chief Justice Ritu Raj Awasthi in his farewell speech on Friday, July 1st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X