ರೈತರ ಸಾಲ ಮನ್ನಾ ವಿಚಾರದಲ್ಲಿ ಸರ್ಕಾರದ ಮುಂದಿನ ಹೆಜ್ಜೆ ಏನು? ಸವದಿ ಸ್ಪಷ್ಟನೆ

ಬೆಂಗಳೂರು: ರೈತರ ಸಾಲ ಮನ್ನಾ ವಿಚಾರವಾಗಿಯೂ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ. ಮುಂಗಾರು ಮಳೆ ಕೊರತೆಯಿದ್ದರೂ ಹಿಂಗಾರು ಸಂಪೂರ್ಣವಾಗಿ ಮುಗಿದಿಲ್ಲ. ಹೀಗಾಗಿ ಪರಿಸ್ಥಿತಿ ಇನ್ನೂ ಆಶಾದಾಯಕವಾಗಿದೆ ಎಂದು ಅವರು ಹೇಳಿದ್ದಾರೆ.

ಹಿಂಗಾರು ಹಂಗಾಮು ಮುಗಿದ ಬಳಿಕ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆಗಳು ಪರಿಸ್ಥಿತಿಯ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದೆ. ಮೂರು ಇಲಾಖೆಗಳ ವರದಿ ಬಂದ ನಂತರ ಮುಖ್ಯಮಂತ್ರಿ ಅವರು ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸವದಿ ತಿಳಿಸಿದ್ದಾರೆ.ಇದೇ ವೇಳೆ, ರಾಜ್ಯದ ಹಲವು ಭಾಗಗಳ ರೈತರು ಬಹಳ ದಿನಗಳಿಂದ ಮೋಡ ಬಿತ್ತನೆ ಕೈಗೊಳ್ಳುವಂತೆ ಬೇಡಿಕೆ ಇಡುತ್ತಿದ್ದಾರೆ. ಈ ವಿಚಾರದಲ್ಲಿಯೂ ಮುಖ್ಯಮಂತ್ರಿ ಅವರು ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸವದಿ ಹೇಳಿದ್ದಾರೆ.

Farmer Loan Waiver Lakshman Savadi Says Cabinet Decision After 3 Departments Reports

ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಈ ಕುರಿತು ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು, ಸಕ್ಕರೆ ದಾಸ್ತಾನು ಕಡಿಮೆಯಾಗಿರುವುದೇ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ. ಸಕ್ಕರೆ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ದೇಶದಲ್ಲಿ ಇನ್ನಷ್ಟು ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸುವ ಅಗತ್ಯವಿದೆ. ಇದರಿಂದ ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಸಕ್ಕರೆ ದರ ಹೆಚ್ಚಳದಿಂದ ಕಬ್ಬು ಬೆಳೆಗಾರರಿಗೆ ಲಾಭವಾಗಲಿದೆ ಎಂದು ಹೇಳಿದ ಲಕ್ಷ್ಮಣ ಸವದಿ, ಜನರು 100 ರೂ. ಕೊಟ್ಟು ನೀರಿನ ಬಾಟಲಿ ಖರೀದಿಸುತ್ತಾರೆ. 50 ರೂ. ಕೊಟ್ಟು ಸಕ್ಕರೆ ಖರೀದಿಸಿದರೆ ಏನೂ ಆಗುವುದಿಲ್ಲ.
ಸಕ್ಕರೆ ಬೆಲೆ ಏರಿಕೆಯಾಗಿರುವುದು ಗ್ರಾಹಕರಿಗೆ ಹೊರೆಯಾದರೂ, ಕಬ್ಬು ಬೆಳೆಗಾರರಿಗೆ ಇದು ಅನುಕೂಲಕರವಾಗಿದೆ. ರೈತರಿಗೆ ಉತ್ತಮ ಬೆಲೆ ಸಿಗಬೇಕಾದರೆ ಸಕ್ಕರೆ ಉದ್ಯಮವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಅಧಿವೇಶನದ ಪೂರ್ವದಲ್ಲೇ ಪ್ರತಿಪಕ್ಷದವರು ಬರದ ಬಗ್ಗೆ ತಂಡಗಳನ್ನು ರಚಿಸಿ ಅಧ್ಯಯನ ಮಾಡಿ, ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿಕೊಂಡು ಓಡಾಡುತ್ತಿದ್ದರು. ಆದರೆ, ಈಗ ನಾಲೈದು ದಿನಗಳಿಂದ ಅಧಿವೇಶನದಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಸಚಿವ ಬಿ.ನಾಗೇಂದ್ರ ತೇಜೋವಧೆಯನ್ನು ಮಾಡಲಾಗುತ್ತಿದೆ. ಈಗಾಗಲೇ ಲೋಕಾಯುಕ್ತ ಸಂಸ್ಥೆಯು ಅವರನ್ನು ಆರೋಪಮುಕ್ತರನ್ನಾಗಿ ಮಾಡಿದೆ.

ಪ್ರತಿಪಕ್ಷದವರಲ್ಲಿ ಬೇರೆ ಏನಾದರೂ ದಾಖಲೆಗಳು ಇದ್ದರೆ, ಸದನದಲ್ಲಿ ಮಂಡಿಸಿ ಚರ್ಚೆ ಮಾಡಬೇಕು. ಅದಕ್ಕೆ ಸರ್ಕಾರದಿಂದ ಉತ್ತರ ಪಡೆದುಕೊಳ್ಳಬೇಕು. ಅದನ್ನು ಬಿಟ್ಟು ಕೇವಲ ಕಾಲಹರಣ ಮಾಡುತ್ತಿದ್ದಾರೆ. ಅಲ್ಲದೇ, ಒಬ್ಬ ವ್ಯಕ್ತಿಯ ವಿಷಯವನ್ನು ಮುಂದಿಟ್ಟುಕೊಂಡು ಹೋರಾಟ ಮಾಡುವುದನ್ನು ನೋಡಿದರೆ, ಪ್ರತಿಪಕ್ಷವಾಗಿ ತನ್ನ ಜವಾಬ್ದಾರಿಯನ್ನು ಅರಿತುಕೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು, ರಾಜ್ಯದಲ್ಲಿ ಸಹಕಾರಿ ಇಲಾಖೆಯನ್ನು ಇನ್ನಷ್ಟು ಬಲಪಡಿಸುತ್ತೇನೆ. ಕೇಂದ್ರದಲ್ಲಿ ಪ್ರತ್ಯೇಕವಾಗಿ ಸಹಕಾರ ಇಲಾಖೆಯು ರಚನೆಯ ನಂತರದಲ್ಲಿ ರಾಜ್ಯಕ್ಕೆ ಯಾವುದೇ ವಿಶೇಷವಾದ ಯೋಜನೆ ಬಂದಿರುವ ಉದಾಹರಣೆ ಇಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ. ಆನಂತರದಲ್ಲಿ ರಾಜ್ಯಕ್ಕೆ ಏನು ಸಿಗಲಿದೆ ಎಂಬುದು ಗೊತ್ತಾಗಲಿದೆ ಎಂದು ಸವದಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+