ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು: ಕುಮಾರಸ್ವಾಮಿ ಗಂಭೀರ ಟ್ವೀಟ್

|
Google Oneindia Kannada News

ಬೆಂಗಳೂರು, ಡಿ 26: ನೂತನ ಕೃಷಿ, ಎಪಿಎಂಸಿ ನೀತಿಯನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಟ್ವೀಟ್ ಮಾಡಿದ್ದಾರೆ.

Recommended Video

Modi- ರೈತರ ಮಹತ್ವದ ಮಾತು ಕಥೆ !! | Oneindia Kannada

ದೇಶದ ರೈತರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, "ನೂತನ ಕಾಯಿದೆಯಿಂದ ಕನಿಷ್ಠ ಬೆಂಬಲ ಬೆಲೆ ಮತ್ತು ಎಪಿಎಂಸಿ ವ್ಯವಸ್ಥೆ ರದ್ದಾಗುತ್ತದೆ ಎಂದು ವಿರೋಧ ಪಕ್ಷಗಳು ನಿಮಗೆ ತಪ್ಪು ಮಾಹಿತಿ ನೀಡುತ್ತಿವೆ"ಎಂದು ಪ್ರಧಾನಿ ಹೇಳಿಕೆ ನೀಡಿದ ನಂತರ ಕುಮಾರಸ್ವಾಮಿ 'ಮೋದಿ ಹೆಸರಿಗೆ ಕಪ್ಪುಚುಕ್ಕೆಯಾಗಬಹುದು' ಎಂದು ಈ ರೀತಿ ಟ್ವೀಟ್ ಮಾಡಿದ್ದಾರೆ.

ಮಾತುಕತೆಗೆ ಮೋದಿ ಕರೆ; ರೈತರ ಮುಂದಿನ ನಡೆಯೇನು?ಮಾತುಕತೆಗೆ ಮೋದಿ ಕರೆ; ರೈತರ ಮುಂದಿನ ನಡೆಯೇನು?

"ಕಾಯ್ಡೆಯ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಮಾತುಗಳು ಭರವಸೆ ಮೂಡಿಸುವಂತಿದೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ. "ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ".

ರೈತರ ಪ್ರತಿಭಟನೆ: ಹೋಟೆಲ್‌ನ ಹಿಂಬಾಗಿಲಿನಿಂದ ಹೆದರಿ ಜಾರಿಕೊಂಡ ಬಿಜೆಪಿ ಮುಖಂಡರುರೈತರ ಪ್ರತಿಭಟನೆ: ಹೋಟೆಲ್‌ನ ಹಿಂಬಾಗಿಲಿನಿಂದ ಹೆದರಿ ಜಾರಿಕೊಂಡ ಬಿಜೆಪಿ ಮುಖಂಡರು

"ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ. ಭಾರತ ಗಳಿಸಿಕೊಂಡ ಖ್ಯಾತಿ, ಸ್ಥಾನಮಾನಗಳಿಗೆ ಈ ಹೊಸ ಕಾಯ್ದೆಗಳು, ಅದರ ವಿರುದ್ಧ ನಡೆಯುತ್ತಿರುವ ಹೋರಾಟಗಳು ಚ್ಯುತಿಯುಂಟು ಮಾಡಬಾರದು ಎಂಬುದು ನನ್ನ ಅಭಿಲಾಷೆ".

ಮೋದಿ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು: ಕುಮಾರಸ್ವಾಮಿ ಗಂಭೀರ ಟ್ವೀಟ್

ಮೋದಿ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು: ಕುಮಾರಸ್ವಾಮಿ ಗಂಭೀರ ಟ್ವೀಟ್

"ಮೋದಿ ತಾವು ಪ್ರಧಾನಿಯಾದ ನಂತರ ಸ್ವತಃ ತಾವು ಗಳಿಸಿಕೊಂಡ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು ಎಂಬುದನ್ನು ಅವರು ಗಮನಿಸಬೇಕು. ಅದೇ ಹೊತ್ತಲ್ಲೇ ರೈತರಿಗೆ ಅನಾನುಕೂಲವೂ ಆಗಬಾರದು. ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ" - ಕುಮಾರಸ್ವಾಮಿ ಟ್ವೀಟ್.

ರಾಜನಾಥ್ ಸಿಂಗ್ ಮಾತು ಭರವಸೆ ಮೂಡಿಸುವಂತಿದೆ

ರಾಜನಾಥ್ ಸಿಂಗ್ ಮಾತು ಭರವಸೆ ಮೂಡಿಸುವಂತಿದೆ

"ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ. ಕಾಯ್ದೆ ಬಗ್ಗೆ ಕೇಂದ್ರ ಸಚಿವ @rajnathsingh ಮಾತುಗಳು ಭರವಸೆ ಮೂಡಿಸುವಂತಿವೆ" - ಕುಮಾರಸ್ವಾಮಿ ಟ್ವೀಟ್.

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ

"ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು" - - ಕುಮಾರಸ್ವಾಮಿ ಟ್ವೀಟ್.

ಕೃಷಿರಂಗ ವಿಷವರ್ತುಲದಲ್ಲಿದೆ

ಕೃಷಿರಂಗ ವಿಷವರ್ತುಲದಲ್ಲಿದೆ

"ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

English summary
Farmers Protest In Delhi Border: Former CM HD Kumaraswamy Tweet, Referred PM Modi In Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X