ಪರಿಷ್ಕೃತ ವೇತನ ಬಾಕಿ ಪಾವತಿಗೆ ಸೂಚನೆ
ಬೆಂಗಳೂರು ಮೇ 10: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನದ ಬಾಕಿ ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಿ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ಅಪರ ಮುಖ್ಯ ಐಎನ್‌ಎಸ್ ಪ್ರಸಾದ್ ಸೂಚಿಸಿದ್ದಾರೆ.
2018ರ ಏಪ್ರಿಲ್ ನಂತರದಲ್ಲಿ ಪರಿಷ್ಕೃತ ವೇತನ ಶ್ರೇಣಿ ನಿಗದಿಪಡಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ. ಕೇಂದ್ರ ಚುನಾವಣಾ, ಆಯೋಗದ ಅನುಮೋದನೆಯೊಂದಿಗೆ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಿಸುವ ಸಂಬಂಧ ನಿಯಮ ಮತ್ತು ಆದೇಶ ಹೊರಡಿಸಲಾಗಿತ್ತು.

ಆದರಂತೆ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ 2017 ಜುಲೈ 1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿ ಆರ್ಥಿಕ ಲಾಭವನ್ನು 2018 ಏ.1ರಿಂದ ಪಾವತಿಸಲು ಆರ್ಥಿಕ ಇಲಾಖೆ ಆದೇಶಿಸಿತ್ತು. ಜತೆಗೆ ರಾಜ್ಯ ಸರ್ಕಾರಿ ನೌಕರರ ವೇತನವನ್ನು 2018 ಜೂನ್ 30ರೊಳಗಾಗಿ ನಿಗದಿಪಡಿಸಲು ಇಲಾಖೆ ಮುಖ್ಯಸ್ಥರಿಗೆ ಆರ್ಥಿಕ ಇಲಾಖೆ ನಿರ್ದೇಶನ ನೀಡಿದೆ.












Click it and Unblock the Notifications