ಪೊಲೀಸರ ಚುನಾವಣಾ ಭತ್ಯೆ ಹೆಚ್ಚಳ: ಹಣಕಾಸು ಇಲಾಖೆ ಗ್ರೀನ್ ಸಿಗ್ನಲ್
ಬೆಂಗಳೂರು, ಅಕ್ಟೋಬರ್ 12: ಚುನಾವಣೆ ಸಂದರ್ಭದಲ್ಲಿ ಪೊಲೀಸರಿಗೆ ನೀಡುವ ಭತ್ಯೆಯನ್ನು ಹೆಚ್ಚಳ ಮಾಡಲು ಹಣಕಾಸು ಇಲಾಖೆ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಸಬ್ಇನ್ಸ್ಪೆಕ್ಟರ್, ಎಎಸ್ಐ ಹಾಗೂ ಪೇದೆಗಳ ದಿನದ ಗೌರವ ಸಂಭಾವನೆಯನ್ನು 250ರೂನಿಂದ 350ರೂ.ಗೆ ಏರಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ. 2018 ವಿಧಾನಸಭಾ ಚುನಾವಣೆ ವೇಳೆ ಕರ್ತವ್ಯ ನಿರ್ವಹಿಸಿದ್ದ ಯವುದೇ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಚುನಾವಣಾ ಭತ್ಯೆ ಬಿಡುಗಡೆ ಮಾಡಿರಲಿಲ್ಲ. ಈಗ ದರ ಏರಿಸಿ ಪರಿಷ್ಕರಿಸಿ ಆದೇಶ ಹೊರಡಿಸಿದ್ದಾರೆ. ಶೀಘ್ರದಲ್ಲಿ ಹಣ ಅಧಿಕಾರಿ ಮತ್ತು ಸಿಬ್ಬಂದಿ ಕೈ ಸೇರಲಿದೆ.
ಚುನಾವಣೆಯೂ ಯಾವುದೇ ಗೊಂದಲ, ಗಲಬೆಗಳಿಲ್ಲದೆ ಸುಸೂತ್ರವಾಗಿ ನಡೆಯಬೇಕಾದರೆ ಪೊಲೀಸರ ಪಾತ್ರ ಬಹಳ ಮುಖ್ಯವಾಗುತ್ತದೆ. ಎಲೆಕ್ಷನ್ ಡ್ಯೂಟಿ ನಿರ್ವಹಿಸುವ ಬೇರೆ ಎಲ್ಲಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಗೌರವ ಧನ ಪರಿಷ್ಕರಿಸಲಾಗಿದೆ. ಅದೇ ರೀತಿ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೂ ಸಂಭಾವನೆ ದರ ಪರಿಷ್ಕರಿಸುವಂತೆ ಡಿಜಿಪಿ ನೀಲಮಣಿ ರಾಜು ಸಲ್ಲಿಸಿದ್ದ ಪ್ರಸ್ತಾವನೆ ಮೇರೆಗೆ ಆರ್ಥಿಕ ಇಲಾಖೆ ದರ ಏರಿಸಲು ನಿರ್ಧರಿಸಿದೆ.

ಡಿಐಎಸ್ಪಿ, ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗೆ 1500ರೂ.ನಿಂದ 5 ಸಾವಿರ ರೂ.ಗೆ ಏರಿಕೆ, ಪೊಲೀಸ್ ಇನ್ಸ್ಪೆಕ್ಟರ್ಗಳಿಗೆ ಒಂದು ದಿನಕ್ಕೆ 350ರಿಂದ 500ರೂಗೆ ಹೆಚ್ಚಳ, ಸಬ್ಇನ್ಸ್ಪೆಕ್ಟರ್ ಹಾಗೂ ಎಎಸ್ಐಗಳಿಗೆ ಒಂದು ದಿನಕ್ಕೆ 250ರೂ.ನಿಂದ 350ರೂ.ಗೆ ಏರಿಕೆ, ಮುಖ್ಯಪೇದೆ ಹಾಗೂ ಪೇದೆಗಳಿಗೆ ಒಂದು ದಿನಕ್ಕೆ 250ರೂ.ನಿಂದ 350ರೂಗೆ ಏರಿಕೆ ಮಾಡಲಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications