FDA, SDA ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಗುಡ್ ನ್ಯೂಸ್‌; ಅರ್ಜಿ ಸಲ್ಲಿಕೆಗೆ ಡೆಡ್‌ಲೈನ್ ವಿಸ್ತರಣೆ!

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯುವ ನಿರೀಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್ ನ್ಯೂಸ್ ನೀಡಿದೆ. ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು (FDA) ಹಾಗೂ ದ್ವಿತೀಯ ದರ್ಜೆ ಸಹಾಯಕರು (SDA) ಸೇರಿದಂತೆ ಒಟ್ಟು 5,431 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಹಿಂದೆ ನಿಗದಿಪಡಿಸಿದ್ದ ಗಡುವನ್ನು ಇದೀಗ ನವೆಂಬರ್ 30ರವರೆಗೆ ಹೆಚ್ಚಿಸಲಾಗಿದ್ದು, ಇದರಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಸಿಕ್ಕಂತಾಗಿದೆ.

ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನವೆಂಬರ್ 24ರಂದು ಆದೇಶ ಹೊರಡಿಸಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಅಭ್ಯರ್ಥಿಗಳ ಮನವಿಯನ್ನು ಪರಿಗಣಿಸಿ ಅರ್ಜಿ ಸಲ್ಲಿಕೆ ಮತ್ತು ಪರೀಕ್ಷಾ ಶುಲ್ಕ ಪಾವತಿಗೆ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

FDA SDA Recruitment 2026 KEA Extends Application Deadline Till November 30 departments for 5 431 Vacancies

ಅರ್ಜಿ ಸಲ್ಲಿಕೆ ಗಡುವು ಏಕೆ ವಿಸ್ತರಣೆ ಮಾಡಲಾಗಿದೆ?

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಕ್ಟೋಬರ್ 30ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಿತ್ತು. ಆರಂಭದಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು. ಇನ್ನು ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ನವೆಂಬರ್ 26ರವರೆಗೆ ಅವಕಾಶ ನೀಡಲಾಗಿತ್ತು.

ಆದರೆ, ರಾಜ್ಯದ ವಿವಿಧ ಭಾಗಗಳಿಂದ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಗಡುವನ್ನು ವಿಸ್ತರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಕೊನೆಯ ದಿನಾಂಕ ಸಮೀಪಿಸುತ್ತಿದ್ದಂತೆ ಅರ್ಜಿ ಸಲ್ಲಿಸಲು ಹೆಚ್ಚಿನ ಸಮಯ ನೀಡಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು. ಅಭ್ಯರ್ಥಿಗಳ ಮನವಿಗೆ ಸ್ಪಂದಿಸಿರುವ ಕೆಇಎ ಇದೀಗ ಅರ್ಜಿ ಸಲ್ಲಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಿದೆ. ಹೀಗಾಗಿ ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದವರು, ಅರ್ಜಿ ಪ್ರಕ್ರಿಯೆಯನ್ನು ಅರ್ಧಕ್ಕೆ ನಿಲ್ಲಿಸಿರುವವರು ಹಾಗೂ ಶುಲ್ಕ ಪಾವತಿ ಬಾಕಿ ಉಳಿಸಿಕೊಂಡಿರುವ ಅಭ್ಯರ್ಥಿಗಳಿಗೆ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಲು ಹೆಚ್ಚುವರಿ ಅವಕಾಶ ದೊರೆತಿದೆ.

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ FDA, SDA ಸೇರಿ ಒಟ್ಟು 5,431 ಹುದ್ದೆಗಳಿಗೆ ಒಂದೇ ಪರೀಕ್ಷೆ, KEA ಹೊಸ ನಿಯಮ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ FDA, SDA ಸೇರಿ ಒಟ್ಟು 5,431 ಹುದ್ದೆಗಳಿಗೆ ಒಂದೇ ಪರೀಕ್ಷೆ, KEA ಹೊಸ ನಿಯಮ

ನವೆಂಬರ್ 30ರೊಳಗೆ ಅರ್ಜಿ ಮತ್ತು ಶುಲ್ಕ ಪಾವತಿ ಕಡ್ಡಾಯ

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಕೆಲವು ಪ್ರಮುಖ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಅಭ್ಯರ್ಥಿಗಳು ನವೆಂಬರ್ 30ರೊಳಗೆ ತಮ್ಮ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬೇಕು. ಅಷ್ಟೇ ಅಲ್ಲದೆ, ನಿಗದಿಪಡಿಸಿರುವ ಪರೀಕ್ಷಾ ಶುಲ್ಕವನ್ನೂ ಇದೇ ದಿನಾಂಕದೊಳಗೆ ಪಾವತಿಸಬೇಕು ಎಂದು ಕೆಇಎ ತಿಳಿಸಿದೆ.

ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಪ್ರಕ್ರಿಯೆ ಪೂರ್ಣಗೊಂಡಂತಾಗುವುದಿಲ್ಲ. ನಿಗದಿತ ಪರೀಕ್ಷಾ ಶುಲ್ಕ ಪಾವತಿಸುವುದೂ ಕಡ್ಡಾಯವಾಗಿದೆ. ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಶುಲ್ಕ ಪಾವತಿ ಯಶಸ್ವಿಯಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು.

ಕೊನೆಯ ದಿನದವರೆಗೆ ಕಾಯುವುದರಿಂದ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಒತ್ತಡ ಉಂಟಾಗಿ ಸರ್ವರ್ ಸಮಸ್ಯೆ ಅಥವಾ ತಾಂತ್ರಿಕ ತೊಂದರೆ ಎದುರಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕೆಇಎ ಸಲಹೆ ನೀಡಿದೆ.

ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 4,635 ಎಫ್‌ಡಿಎ, ಎಸ್‌ಡಿಎ ನೇಮಕಾತಿಗೆ ಶೀಘ್ರವೇ ಅಧಿಸೂಚನೆ
ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 4,635 ಎಫ್‌ಡಿಎ, ಎಸ್‌ಡಿಎ ನೇಮಕಾತಿಗೆ ಶೀಘ್ರವೇ ಅಧಿಸೂಚನೆ

ಲಿಖಿತ ಪರೀಕ್ಷೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ

ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿರುವುದರಿಂದ ನೇಮಕಾತಿ ಪ್ರಕ್ರಿಯೆಯ ಎಲ್ಲ ದಿನಾಂಕಗಳೂ ಬದಲಾಗಿವೆ ಎಂದು ಅಭ್ಯರ್ಥಿಗಳು ಭಾವಿಸಬಾರದು. ಕೆಇಎ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಮಾತ್ರ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ. ಉಳಿದಂತೆ ನೇಮಕಾತಿ ನಿಯಮಗಳು ಹಾಗೂ ಈಗಾಗಲೇ ನಿಗದಿಪಡಿಸಿರುವ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ದಿನಾಂಕದಂದೇ ಲಿಖಿತ ಪರೀಕ್ಷೆ ನಡೆಯಲಿದೆ. ಹೀಗಾಗಿ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆಯಾಗಿದೆ ಎಂಬ ಕಾರಣಕ್ಕೆ ಪರೀಕ್ಷಾ ಸಿದ್ಧತೆಯಲ್ಲಿ ನಿರ್ಲಕ್ಷ್ಯ ವಹಿಸಬಾರದು. ಪರೀಕ್ಷೆಗೆ ಸಂಬಂಧಿಸಿದ ಅಧಿಕೃತ ಸೂಚನೆಗಳು ಮತ್ತು ವೇಳಾಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪರಿಶೀಲಿಸುತ್ತಿರಬೇಕು.

33 ಸರ್ಕಾರಿ ಇಲಾಖೆಗಳಲ್ಲಿ 5,431 ಹುದ್ದೆಗಳ ಭರ್ತಿ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಒಟ್ಟು 5,431 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ರಾಜ್ಯದ 33 ಇಲಾಖೆಗಳಲ್ಲಿ ಖಾಲಿ ಇರುವ ಎಫ್‌ಡಿಎ ಮತ್ತು ಎಸ್‌ಡಿಎ ಸೇರಿದಂತೆ ವಿವಿಧ ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ.

ಸರ್ಕಾರಿ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವ ಪದವೀಧರರು ಹಾಗೂ ಇತರ ಅರ್ಹ ಅಭ್ಯರ್ಥಿಗಳಿಗೆ ಈ ನೇಮಕಾತಿ ಮಹತ್ವದ ಅವಕಾಶವಾಗಿದೆ. ಈಗಾಗಲೇ ಸಾವಿರಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದು, ಗಡುವು ವಿಸ್ತರಣೆಯಿಂದ ಇನ್ನೂ ಹೆಚ್ಚಿನ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ದೊರೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+