ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪರನ್ನು ನೋಡಿದರೆ ಅಯ್ಯೋ ಎನಿಸುತ್ತಿದೆ: ಸಿದ್ದರಾಮಯ್ಯ

|
Google Oneindia Kannada News

Recommended Video

ಯಡಿಯೂರಪ್ಪ ನವರಿಗೆ ಧೈರ್ಯ ಇಲ್ಲ- ಸಿದ್ದರಾಮಯ್ಯ | Siddaramaiah | Oneindia Kannada

ಬೆಂಗಳೂರು, ಸೆಪ್ಟೆಂಬರ್ 30: ಪ್ರವಾಹ ಪರಿಸ್ಥಿತಿಯಿಂದ ನಲುಗಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ಬಿಡಿಗಾಸಿನ ಸಹಾಯ ಮಾಡಿಲ್ಲ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ರೆಕ್ಕೆಪುಕ್ಕಗಳನ್ನು ಬಿಜೆಪಿ ಹೈಕಮಾಂಡ್ ಕತ್ತರಿಸಿ ಬಿಟ್ಟಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮಂಜೂರು ಮಾಡಲಾಗಿದ್ದ ಅನುದಾನದಲ್ಲಿ ಕಡಿತ ಮಾಡಲಾಗಿದೆ. ಯಡಿಯೂರಪ್ಪ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಒಂದೆಡೆ ಆರೋಪಿಸಿರುವ ಸಿದ್ದರಾಮಯ್ಯ, ಇನ್ನೊಂದೆಡೆ ಯಡಿಯೂರಪ್ಪ ಅವರಿಗೆ ಸ್ವಪಕ್ಷೀಯರೇ ಕಿರುಕುಳ ನೀಡುತ್ತಿದ್ದಾರೆ. ಅವರನ್ನು ನೋಡಿದರೆ ಅಯ್ಯೋ ಎನಿಸುತ್ತದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ನುಡಿದ ಭವಿಷ್ಯ ನಿಜವಾಗುವುದೇ?ಉಪಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ನುಡಿದ ಭವಿಷ್ಯ ನಿಜವಾಗುವುದೇ?

ಆನಂದ್ ಸಿಂಗ್‌ಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಳ್ಳಾರಿಯನ್ನು ವಿಭಜಿಸಿ ಪ್ರತ್ಯೇಕ ಜಿಲ್ಲೆ ಮಾಡಲು ಮುಂದಾಗಿದ್ದಾರೆ. ಬಳ್ಳಾರಿಯನ್ನು ವಿಭಜಿಸುವ ಅಗತ್ಯವಿಲ್ಲ ಎಂದಿದ್ದಾರೆ. ನೆರೆಪರಿಹಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಲು ಯಡಿಯೂರಪ್ಪ ಅವರಿಗೆ ಧೈರ್ಯವಿಲ್ಲ ಎಂದು ಟೀಕಿಸಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ಧರಾಮಯ್ಯ, ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.

ಯಡಿಯೂರಪ್ಪಗೆ ಧೈರ್ಯವಿಲ್ಲ

ಯಡಿಯೂರಪ್ಪಗೆ ಧೈರ್ಯವಿಲ್ಲ

ಚಂದ್ರಯಾನ-2 ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ದಿನ ಬೆಂಗಳೂರಿಗೆ ಆಗಮಿಸಿದ್ದ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದಿದ್ದೆವು, ಆದರೆ ಭೇಟಿಗೆ ಅವಕಾಶ ನೀಡಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಮೋದಿಯವರ ಬಳಿ ಮಾತನಾಡುವ ಧೈರ್ಯವಿಲ್ಲ. ರಾಜ್ಯದ ಸಮಸ್ಯೆ ಬಗೆಹರಿಯುವುದು ಹೇಗೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿಎಸ್‌ವೈ ನೋಡಿದರೆ ಅಯ್ಯೋ ಎನಿಸುತ್ತದೆ

ಬಿಎಸ್‌ವೈ ನೋಡಿದರೆ ಅಯ್ಯೋ ಎನಿಸುತ್ತದೆ

ಯಡಿಯೂರಪ್ಪನವರ ರೆಕ್ಕೆ ಪುಕ್ಕವನ್ನು ಬಿಜೆಪಿ ಹೈಕಮಾಂಡ್ ಕತ್ತರಿಸಿ ಬಿಟ್ಟಿದೆ. ಪ್ರತಿ ದಿನವೂ ಅವರಿಗೆ ಸ್ವಪಕ್ಷದವರೇ ಕಿರುಕುಳ ನೀಡುತ್ತಿದ್ದಾರೆ. ರಾಜ್ಯದ ಸಮಸ್ಯೆ ಬಗ್ಗೆ ಮಾತನಾಡಲು ಅವರಿಗೆ ಅವಕಾಶವನ್ನು ಸಹ ನೀಡುತ್ತಿಲ್ಲ. ಪಾಪ, ಯಡಿಯೂರಪ್ಪನವರನ್ನು ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಖರ್ಗೆ ನಾಡಿನಲ್ಲಿ ಕುರುಬ ಸಮಾವೇಶ: ಇದೇನು ಸಿದ್ದರಾಮಯ್ಯ ಶಕ್ತಿ ಪ್ರದರ್ಶನವೋ?ಖರ್ಗೆ ನಾಡಿನಲ್ಲಿ ಕುರುಬ ಸಮಾವೇಶ: ಇದೇನು ಸಿದ್ದರಾಮಯ್ಯ ಶಕ್ತಿ ಪ್ರದರ್ಶನವೋ?

ಎಲ್ಲಿ ವಾಸಿಸಬೇಕು?

ಎಲ್ಲಿ ವಾಸಿಸಬೇಕು?

ಪ್ರವಾಹದಿಂದ ಅತಿ ಹೆಚ್ಚು ಹಾನಿಗೀಡಾಗಿರುವುದು ಬೆಳಗಾವಿ ಜಿಲ್ಲೆ, ನಂತರ ಬಾಗಲಕೋಟೆ, ರಾಯಚೂರು, ಗದಗ ಹೀಗೆ ಸಾಕಷ್ಟು ನಷ್ಟಕ್ಕೆ ಈಡಾಗಿವೆ ಪ್ರತಿ ತಿಂಗಳು ಸಂತ್ರಸ್ತರಿಗೆ ಮನೆ ಬಾಡಿಗೆ ರೂಪದಲ್ಲಿ ರೂ.5000 ಕೊಡಲಾಗುತ್ತಿದೆ. ಹಳ್ಳಿಗಳಲ್ಲಿ ಮನೆ ಬಾಡಿಗೆಗೆ ಸಿಗುತ್ತದೆಯೇ? ಮನೆ ಕಳೆದುಕೊಂಡವರು ಮುಂದಿನ ಹತ್ತು ತಿಂಗಳು ಎಲ್ಲಿ ವಾಸಿಸಬೇಕು?

ಬಳ್ಳಾರಿ ವಿಭಜನೆ ಅಗತ್ಯವಿದೆಯೇ?

ಬಳ್ಳಾರಿ ವಿಭಜನೆ ಅಗತ್ಯವಿದೆಯೇ?

ಆನಂದ್ ಸಿಂಗ್ ಅವರಿಗೆ ಅನುಕೂಲವಾಗಲಿ ಎಂದು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಲು ಹೊರಟಿದ್ದಾರೆ, ಇದು ಸರಿಯಲ್ಲ. ಬಳ್ಳಾರಿಗೆ ಹೋಲಿಸಿದರೆ ಬೆಳಗಾವಿ ತೀರಾ ದೊಡ್ಡದು. ಬೆಳಗಾವಿಯಲ್ಲಿ ಹದಿನೆಂಟು ವಿಧಾನಸಭಾ ಕ್ಷೇತ್ರಗಳಿವೆ. ಅಷ್ಟು ದೊಡ್ಡ ಜಿಲ್ಲೆಯನ್ನೇ ವಿಭಜಿಸದೆ ಇರುವಾಗ ಬರೀ ಹತ್ತು ವಿಧಾನಸಭಾ ಕ್ಷೇತ್ರವಿರುವ ಬಳ್ಳಾರಿಯ ವಿಭಜನೆಯ ಅಗತ್ಯವಿದೆಯೇ?

ಇನ್ನೆರೆಡು ದಿನದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ನೆರೆ ಪರಿಹಾರ: ಯಡಿಯೂರಪ್ಪಇನ್ನೆರೆಡು ದಿನದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ನೆರೆ ಪರಿಹಾರ: ಯಡಿಯೂರಪ್ಪ

ಯಡಿಯೂರಪ್ಪ ದ್ವೇಷ ರಾಜಕಾರಣ

ಯಡಿಯೂರಪ್ಪ ದ್ವೇಷ ರಾಜಕಾರಣ

ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ನೀಡಿದ್ದ ಅನುದಾನವನ್ನು ಯಡಿಯೂರಪ್ಪ ಅವರು ಕಡಿತ ಮಾಡಿದ್ದಾರೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ನಿಗದಿ ಮಾಡಿದ್ದ ಅನುದಾನವನ್ನೂ ವಾಪಸ್ ಪಡೆದಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಇಂತಹ ದ್ವೇಷದ ರಾಜಕೀಯ ಸರಿಯಲ್ಲ.

English summary
Congress leader Siddaramaiah said, the BJP high command has clipped the wings of CM BS Yediyurappa. I feel sad for him after seeing his situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X