ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಸಗಿ ಶಾಲೆಗಳಿಗೆ ಶೀಘ್ರವೇ ಶುಲ್ಕ ನಿಗದಿ: ಶಾಲಿನಿ ರಜನೀಶ್

|
Google Oneindia Kannada News

ಬೆಂಗಳೂರು, ಏಪ್ರಿಲ್ 21: ಖಾಸಗಿ ಶಾಲೆಗಳ ಪ್ರವೇಶ ಶುಲ್ಕವನ್ನು ನಿಗದಿ ಮಾಡಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ . ಚುನಾವಣಾ ನೀತಿ ಸಂಹಿತೆ ಇರುವುದರಿಂದ ಆದೇಶ ಹೊರಡಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದರು.

ಹೊಸ ಶಾಲೆಗಳನ್ನು ತೆರೆಯುವುದು ಇನ್ನುಮುಂದೆ ಸುಲಭವಲ್ಲ! ಹೊಸ ಶಾಲೆಗಳನ್ನು ತೆರೆಯುವುದು ಇನ್ನುಮುಂದೆ ಸುಲಭವಲ್ಲ!

ಈಗಾಗಲೇ ಶುಲ್ಕ ನಿಗದಿ ಮಾಡಲಾಗಿದ್ದು, ಕಾನೂನು ಇಲಾಖೆ ಒಪ್ಪಿಗೆಯನ್ನೂ ಪಡೆಯಲಾಗಿದೆ. ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಹೊಸ ಶುಲ್ಕ ನಿಗದಿಯಾಗಲಿದೆ. ಶಿಕ್ಷಣ ಹಕ್ಕು ಕಾಯ್ದೆ ಅಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ನೀಡುವುದು ಶಾಲಾ ಆಡಳಿತ ಮಂಡಳಿ ಜವಾಬ್ದಾರಿ. ಇದಕ್ಕಾಗಿ ಪಾಲಕರಿಂದ ಹೆಚ್ಚುವರಿ ಶುಲ್ಕ ಪಡೆಯಬಾರದು ಎಂದು ಎಚ್ಚರಿಕೆ ನೀಡಿದರು.

Fees fixation rule for private schools ready!

ರಾಜ್ಯ ಪಠ್ಯಕ್ರಮ ಬೋಧನೆ ಮಾಡುತ್ತಿರುವ ಶಾಲೆಗಳಿಗೆ ಆಯಾ ಶಿಕ್ಷಣ ಸಂಸ್ಥೆಗಳೇ ಉಚಿತವಾಗಿ ಪಠ್ಯಪುಸ್ತಕ ಮತ್ತು ಸಮವಸ್ತ್ರ ನೀಡಬೇಕು ಎಂದು ಸ್ಪಷ್ಟವಾಗಿ ಹೇಳಿದೆ. ಶೀಘ್ರದಲ್ಲೇ ಈ ಸಂಬಂಧ ಸುತ್ತೋಲೆ ಹೊರಡಿಸಲಾಗುವುದು. ಇದನ್ನು ಎಲ್ಲ ಶಾಲೆಗಳು ಪಾಲಿಸಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಡೇರಾ ಸಮಿತಿಗೆ ದೂರು ನೀಡಬಹುದು ಎಂದರು.

English summary
State government has prepared a rule of fees fixation in private educational institutions in the state. After completion of the state assembly poll the order will be issued, said primary education principal secretary Shalini Rajneesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X