ಪೋಷಕರೇ ಹೆಚ್ಚಿನ ಫೀಸ್ ಕಟ್ಟಲು ಸಿದ್ದರಾಗಿ: ಪದವಿ ಕೋರ್ಸ್ಗಳ ಶುಲ್ಕ ಶೇ10ರಷ್ಟು ಏರಿಕೆ!
ದುಬಾರಿ.. ದುಬಾರಿ.. ಎಲ್ಲವೂ ದುಬಾರಿ... ವಿಶೇಷ ದಿನಗಳಲ್ಲಿ ಹಣ್ಣು, ಪೂಜಾ ಸಾಮಾಗ್ರಿಗಳು ದುಬಾರಿ. ಅಕ್ಕಿಯಿಂದ ಆಹಾರ ಪದಾರ್ಥಗಳು ದುಬಾರಿ. ಮನೆಯಿಂದ ಹೊರಗಡೆ ಕಾಲಿಟ್ಟರೆ ಕಡಿಮೆ ಅಂದರೂ ಐದರಿಂದ ಒಂದು ಸಾವಿರ ರೂಪಾಯಿ ಬೇಕು. ಇಂತಹ ದುಬಾರಿ ದುನಿಯಾದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವುದು ಪೋಷಕರಿಗೆ ಸವಾಲಿನ ಕೆಲಸ.
ಹೀಗಿರುವಾಗ ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಿ ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆಯ ಬರೆ ಎಳೆದಿದ್ದ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಶಾಕ್ ಕೊಟ್ಟಿದೆ.

ಹೀಗಿರುವಾಗ ಪದವಿ ಕೋರ್ಸ್ಗಳ ಶುಲ್ಕ ಶೇ10ರಷ್ಟು ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ. ಇದು ಬಡ ಪೋಷಕರಿಗೆ ಆರ್ಥಿಕ ಹೊರೆಯನ್ನು ಹೆಚ್ಚಿಸಿದೆ. ಪಿಯುಸಿ ಮುಗಿಸಿ ಉನ್ನತ ಶಿಕ್ಷಣ ಪಡೆಯುವ ಕನಸ್ಸು ಕಾಣುವ ವಿದ್ಯಾರ್ಥಿಗಳ ಮೇಲೆ ಇದು ಪರಿಣಾಮ ಬೀರಲಿದೆ.
ಬಿಕಾಂ, ಬಿಎ, ಬಿಎಸ್‌ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ.10ರಷ್ಟು ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದರಿಂದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಹಾಗೂ ಯೂನಿವರ್ಸಿಟಿಗಳಲ್ಲಿ ಶುಲ್ಕವನ್ನು ಏರಿಕೆ ಮಾಡಬಹುದು.
ವಿಶ್ವವಿದ್ಯಾಲಯಗಳ ಆದಾಯ ಕೊರತೆನ್ನು ಎದುರಿಸುತ್ತಿವೆ. ಇದರಿಂದಾಗಿ ಪ್ರಸಕ್ತ ವರ್ಷದಲ್ಲಿ ಶೇ.10ರಷ್ಟು ಶುಲ್ಕ ಹೆಚ್ಚಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಈ ವರ್ಷ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಬಿಸಿ ತಟ್ಟಲಿದೆ. ಈ ಪರಿಷ್ಕೃತ ಶುಲ್ಕ ಪಟ್ಟಿಯನ್ನು ಯೂನಿವರ್ಸಿಟಿಗಳಿಗೆ ನೀಡಿ ಈ ಬಗ್ಗೆ ಸಿದ್ಧತೆಗೆ ಸರ್ಕಾರ ಸೂಚನೆ ನೀಡಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಪಂಚ ಗ್ಯಾರಂಟಿಗಳಿಂದಾಗಿ ಜನ ಸಾಮಾನ್ಯರ ಆರ್ಥಿಕ ಹೊರೆ ಕಡಿಮೆ ಆಗಿದೆ. ಉಚಿತ ವಿದ್ಯುತ್, ಉಚಿತ ಪ್ರಯಾಣ ಹಾಗೂ ಗೃಹ ಲಕ್ಷ್ಮಿ ಯೋಜನೆಯಿಂದ ಮನೆ ಒಡತಿಗೆ ತಿಂಗಳಿಗೆ ಇಂತಿಷ್ಟು ಹಣವನ್ನು ನೀಡಲಾಗುತ್ತಿದೆ. ಆದರೆ ಈ ಗ್ರಾರಂಟಿಗಳ ಹಣವನ್ನು ತೂಹಿಸಲು ತೆರಿಗೆ ಏರಿಕೆ ಮಾಡಲಾಗಿದೆ. ಇರ ಬಳಿಕ ಕರೆಂಟ್ ಬಿಲ್ ಏರಿಕೆಯಾಯ್ತು, ಮದ್ಯದ ಬೆಲೆ ಕೂಡ ಏರಿಕೆ ಮಾಡಲಾಗಿದೆ. ಈಗ ಕಾಲೇಜು ಶುಲ್ಕ ಏರಿಕೆ ಮಾಡುತ್ತಿರುವುದು ಪೋಷಕರ ಕೆಂಗಣ್ಣಿಗೆ ಗುರಿಯಾಗಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications