ಕರ್ನಾಟಕದಲ್ಲಿ ಭ್ರೂಣ ಹತ್ಯೆ ಪ್ರಕರಣಗಳ ತನಿಖೆ ಎಲ್ಲಿಗೆ ಬಂತು? ಆರ್.ಅಶೋಕ್ ಆರೋಪವೇನು?
ಬೆಂಗಳೂರು, ಜನವರಿ 10: ಕರ್ನಾಟಕದಲ್ಲಿ ಕೆಲವು ದಿನಗಳ ಹಿಂದೆ ಸಾವಿರಾರು ಹೆಣ್ಣು ಭ್ರೂಣ ಹತ್ಯೆ (Female feticide) ಪ್ರಕರಣವು ಭಾರೀ ಸಂಚಲನ ಸೃಷ್ಟಿಸಿತ್ತು. ಸದ್ಯ ಇವುಗಳ ತನಿಖೆ, ತನಿಖೆಯ ಪ್ರಗತಿ, ಸತ್ಯಾಸತ್ಯತೆ ಕುರಿತು ವಿಪಕ್ಷ ನಾಯಕರು ಪ್ರಶ್ನೆ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಬುಧವಾರ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಅವರು, ಸಾವಿರಾರು ಹೆಣ್ಣು ಕಂದಮ್ಮಗಳ ಹತ್ಯೆಯ ಹಿಂದಿರುವ ಭ್ರೂಣ ಲಿಂಗ ಪತ್ತೆ ಜಾಲವನ್ನ ಬೇಧಿಸಲು ಹಿಂದೇಟು ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ ಯಾರನ್ನು ರಕ್ಷಣೆ ಮಾಡಲು ಹೊರಟಿದೆ? ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಒತ್ತಾಯ ಮೀರಿ ಕೇಸ್ ಸಿಐಡಿಗೆ
ಕಳೆದ ತಿಂಗಳು ಈ ಜಾಲ ಬೆಳಕಿಗೆ ಬಂದಾಗ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಜಾಲವನ್ನ ಪತ್ತೆ ಹಚ್ಚಿ ದುಷ್ಕರ್ಮಿಗಳನ್ನು ಬಂಧಿಸಲು ವಿಶೇಷ ತನಿಖಾ ತಂಡ (SIT) ರಚನೆ ಮಾಡಬೇಕು. ಆರೋಪಿಗಳನ್ನು ತ್ವರಿತವಾಗಿ ವಿಚಾರಣೆ ಮಾಡಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲು ವಿಶೇಷ ಕೋರ್ಟ್ ರಚಿಸಬೇಕು ಎಂದು ಬೆಳಗಾವಿ ಅಧಿವೇಶದಲ್ಲಿ ನಮ್ಮ ಬಿಜೆಪಿ ಪಕ್ಷವು ಒತ್ತಾಯಿಸಿತ್ತು.
ಆದರೆ ಬಿಜೆಪಿ ಎಷ್ಟೇ ಪ್ರಯತ್ನ ಪಟ್ಟರು ಸಹಿತ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (CID) ತನಿಖೆಗೆ ಒಪ್ಪಿಸಿತು ಎಂದು ಅವರು ತಿಳಿಸಿದರು.
ಪ್ರಕರಣದಲ್ಲಿ ಕಾಂಗ್ರೆಸ್ ಯಾರನ್ನೋ ರಕ್ಷಿಸುತ್ತಿದೆ?
ಭ್ರೂಣ ಪತ್ತೆ - ಹತ್ಯೆಯ ಜಾಲ ಸಿಐಡಿ ತನಿಖೆಗೆ ಒಪ್ಪಿಸಿ ಈಗ ಒಂದು ತಿಂಗಳು ಕಳೆದರೂ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಂಡು ಬಂದಿಲ್ಲದಿರುವುದನ್ನು ಗಮನಿಸಿದರೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಯಾರನ್ನೋ ರಕ್ಷಣೆ ಮಾಡುತ್ತಿದೆ. ಪ್ರಕರಣವನ್ನು ಮುಚ್ಚಿ ಹಾಕಲು ಹೊಂಚು ಹಾಕುತ್ತಿರುವಂತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.

ಮಹಿಳಾ ಸಬಲೀಕರಣ ಅಂದರೆ ಚುನಾವಣೆ ಗೆಲ್ಲಲು, ಮಹಿಳೆಯರ ವೋಟು ಪಡೆಯಲು ಹೆಣ್ಣು ಮಕ್ಕಳ ಮೂಗಿಗೆ ತುಪ್ಪ ಸವರುವ ಗ್ಯಾರೆಂಟಿ ನೀಡುವುದಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ?. ಹೆಣ್ಣು ಮಕ್ಕಳ ಬದುಕಿಗೆ ಮೊದಲು ಗ್ಯಾರೆಂಟಿ ನೀಡಿ ಎಂದು ಅವರು ಆಗ್ರಹಿಸಿದರು.
ಪ್ರಕರಣ ಬೇಧಿಸಲು ಬಿಜೆಪಿ ಆಗ್ರಹ
ರಾಜ್ಯದಲ್ಲಿ ಹೆಣ್ಣು ಕಂದಮ್ಮಗಳು ಭೂಮಿಗೆ ಕಾಲಿಡುವ ಮುನ್ನವೇ ಜೀವ ತೆಗೆಯುವ, ಕಣ್ಣು ಬಿಡುವ ಮುನ್ನವೇ ಪ್ರಾಣ ಕಸಿಯುವ ಭ್ರೂಣ ಪತ್ತೆ-ಹತ್ಯೆ ಜಾಲವನ್ನ ಬೇಧಿಸಿ ಈ ದಂಧೆಯನ್ನ ನಿಲ್ಲಿಸುವ ಕೆಲಸ ಮಾಡಿ ಎಂದು ಒತ್ತಾಯಿಸಿದ್ದಾರೆ.
ಪ್ರಕರಣ ಬೆಳಕಿಗೆ ಬಂದುತಿಂಗಳುಗಳ ಕಳೆಯುತ್ತಾ ಬಂದರೂ ಸಹಿತ ಪ್ರಕರಣದ ತನಿಖೆ ಎಲ್ಲಿಗೆ ಬಂತು ಎಂಬುದರ ಅಪ್ಡೇಟ್ ಇಲ್ಲ. ಹಳ್ಳ ಹಿಡಿಯಿತೇ? ಎಂಬ ಅನುಮಾನಗಳನ್ನು ವಿಪಕ್ಷಗಳು ವ್ಯಕ್ತಪಡಿಸಿವೆ. ಸಿಐಡಿಗೆ ವಹಿಸಿ ಒಂದೂವರೆ ತಿಂಗಳಾದರೂ ಸಹಿತ ತನಿಖೆಯಲ್ಲಿ ಪ್ರಗತಿ ಕಂಡಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.
ಮಂಡ್ಯ, ಮೈಸೂರು, ಬೆಂಗಳೂರು ಭಾಗದಲ್ಲಿ ಹೆಚ್ಚು ಕೇಸ್
ಕರ್ನಾಟಕದಲ್ಲಿ ಇತ್ತೀಚೆಗೆ ಹೆಣ್ಣು ಭ್ರೂಣ ಹತ್ಯೆಯ ಪ್ರಕರಣಗಳು ಭಾರೀ ಸದ್ದು ಮಾಡಿದವು. ಮಂಡ್ಯೂ, ಮೈಸೂರು, ಬೆಂಗಳೂರು ಸೇರಿದಂತೆ ಕರ್ನಾಟಕದ ನಾನಾ ಭಾಗಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿತ್ತು. ಸಂಬಂಧಿಸಿದ ಅಧಿಕಾರಿಗಳು ಆಯಾ ವೈದ್ಯಕೀಯ ಆಸ್ಪತ್ರೆಗಳ ಮೇಲೆ ದಾಳಿ ಮಾಡಿದ್ದರು. ಪ್ರಕರಣ ತೀವ್ರ ಸ್ವರೂಪ ಪಡೆದಿತ್ತು. ಚಳಿಗಾಲ ಅಧಿವೇಶನದಲ್ಲೂ ಪ್ರಕರಣದ ತನಿಖೆ, ಸತ್ಯಾಸತ್ಯತೆ ಬಗ್ಗೆ ಕೂಗು ಕೇಳಿ ಬಂದಿತ್ತು.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications