ಹಿಜಾಬ್ ಧರಿಸಿ ಪಿಯು ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯರ ಮನವಿ
ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿದ್ದಾರೆ.
ಬೆಂಗಳೂರು, ಮಾರ್ಚ್ 2: ಮಾರ್ಚ್ 9 ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಹಿಜಾಬ್ ಧರಿಸಿ ಬರೆಯಲು ಅನುಮತಿ ಕೋರಿ ವಿವಿಧ ಕಾಲೇಜು ಪ್ರಾಂಶುಪಾಲರು ಮುಸ್ಲಿಂ ಹುಡುಗಿಯರಿಂದ ವಿನಂತಿಗಳನ್ನು ಸ್ವೀಕರಿಸುತ್ತಿದ್ದಾರೆ.
ಆದರೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಇಂತಹ ಮನವಿಗಳನ್ನು ಪರಿಗಣಿಸದಂತೆ ಸೂಚನೆಗಳನ್ನು ನೀಡಿದೆ. ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿದ್ದಾರೆ.

ಹಿಜಾಬ್ ಕುರಿತ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ ಪರೀಕ್ಷೆಯ ಸಮಯದಲ್ಲಿ ಹಿಜಾಬ್ ಅನ್ನು ಅನುಮತಿಸುವ ಪ್ರಶ್ನೆಯೇ ಇಲ್ಲ. ಈ ಹಿಜಾಬ್ ಕಾರಣದಿಂದ ಯಾವುದೇ ವಿದ್ಯಾರ್ಥಿಯು ಪರೀಕ್ಷೆಗಳನ್ನು ಬಿಟ್ಟುಬಿಡುತ್ತಾರೆ ಎಂದು ನಾವು ಭಾವಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ ಸಿ ನಾಗೇಶ್ ಅವರು ತಿಳಿಸಿದ್ದಾರೆ.
ಕಳೆದ ವರ್ಷ ಮಾರ್ಚ್‌ನಲ್ಲಿ ಕರ್ನಾಟಕ ಹೈಕೋರ್ಟ್ ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗವಾಗಿಲ್ಲ ಎಂದು ಹೇಳಿತ್ತು. ಶಾಲಾ ಸಮವಸ್ತ್ರದ ಪ್ರಿಸ್ಕ್ರಿಪ್ಷನ್ ಸಾಂವಿಧಾನಿಕವಾಗಿ ಅನುಮತಿಸುವ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಇದನ್ನು ವಿದ್ಯಾರ್ಥಿಗಳು ವಿರೋಧಿಸಲು ಸಾಧ್ಯವಿಲ್ಲ. ಫೆಬ್ರವರಿ 5, 2022 ರಂದು ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರವನ್ನು ಧರಿಸಬೇಕೆಂಬ ಸರ್ಕಾರದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿರುವ ಬಗ್ಗೆ ದಕ್ಷಿಣ ಕನ್ನಡದ ಕಾಲೇಜೊಂದರ ಪ್ರಾಂಶುಪಾಲರು ಮಾತನಾಡಿ, "ಕಳೆದ ಒಂದು ವಾರದಲ್ಲಿ, ಪರೀಕ್ಷೆಯನ್ನು ಹಿಜಾಬ್ ಧರಿಸಿ ಬರೆಯಲು ಅನುಮತಿ ಕೋರಿ ನಮಗೆ ಎರಡು ವಿನಂತಿಗಳು ಬಂದಿವೆ. ನಾವು ಅವರನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದೇವೆ. ನಾವು ಎಲ್ಲಾ ವಿದ್ಯಾರ್ಥಿಗಳಿಗೆ ನಿಯಮಗಳನ್ನು ಅನುಸರಿಸಲು ಸೂಚಿಸಿದ್ದೇವೆ ಎಂದಿದ್ದಾರೆ ಎಂದು ಡಿಎಚ್ ವರದಿ ಮಾಡಿದೆ.
ಶಿಕ್ಷಣ ಅಧಿಕಾರಿಯೊಬ್ಬರು ಹಿಜಾಬ್ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶವಿದೆ. ವಿದ್ಯಾರ್ಥಿಗಳು ಮತ್ತು ಕಾಲೇಜುಗಳು ಏಕರೂಪದ ನೀತಿಯನ್ನು ಪಾಲಿಸಬೇಕು. ಎಷ್ಟು ವಿದ್ಯಾರ್ಥಿಗಳು ತಪ್ಪಿಸಿಕೊಂಡಿದ್ದಾರೆ ಎಂಬ ಬಗ್ಗೆ ಇಲಾಖೆಯಿಂದ ಯಾವುದೇ ಮಾಹಿತಿ ಇಲ್ಲ. ಕಳೆದ ವರ್ಷ ನಡೆದ ಪರೀಕ್ಷೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಲಾಗಿತ್ತು ಎಂದು ಅಧಿಕಾರಿ ಹೇಳಿದರು.
ನಾವು ಪರೀಕ್ಷೆಗೆ ಗೈರುಹಾಜರಾದವರ ಬಗ್ಗೆ ಜಾತಿ ಅಥವಾ ಧರ್ಮದ ಆಧಾರದ ಮೇಲೆ ದತ್ತಾಂಶವನ್ನು ಸಂಗ್ರಹಿಸಿಲ್ಲ. ಯಾವುದೇ ಸಂದರ್ಭದಲ್ಲಿ ಗೈರುಹಾಜರಿಯು ಖಂಡಿತವಾಗಿಯೂ ಹಿಜಾಬ್ ವಿವಾದದೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಅಧಿಕಾರಿ ತಿಳಿಸಿದರು. ತರಗತಿಯೊಳಗೆ ಹಿಜಾಬ್‌ನ ನಿಷೇಧವು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಇದು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ನೋಂದಣಿಗಳ ಮೇಲೆ ಪರಿಣಾಮ ಬೀರಿದೆ. ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅನುಮತಿಸದ ಕಾರಣ ಪರೀಕ್ಷೆಯನ್ನು ಬರೆಯುವುದನ್ನೆ ಬಿಟ್ಟಿದ್ದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications