ದುಷ್ಕರ್ಮಿಗಳ ಗುಂಡಿಗೆ ಗುಲ್ಬರ್ಗದಲ್ಲಿ ವ್ಯಾಪಾರಿ ಬಲಿ
ಗುಲ್ಬರ್ಗ, ಅ.10 : ಗುಲ್ಬರ್ಗದಲ್ಲಿ ದುಷ್ಕರ್ಮಿಗಳು ರಸಗೊಬ್ಬರ ಅಂಗಡಿ ವ್ಯಾಪಾರಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ, ಹಣದ ಚೀಲದೊಂದಿಗೆ ಪರಾರಿಯಾಗಿದ್ದಾರೆ. ರಸಗೊಬ್ಬರ ಅಂಗಡಿಗಳ ವರ್ತಕರು ಕೊಲೆ ಖಂಡಿಸಿ ಶುಕ್ರವಾರ ಗುಲ್ಬರ್ಗ ಬಂದ್ಗೆ ಕರೆ ನೀಡಿದ್ದಾರೆ.
ಮೃತಪಟ್ಟ ರಸಗೊಬ್ಬರ ಅಂಗಡಿ ಮಾಲೀಕನನ್ನು ಶಿವಶರಣಪ್ಪ ಹೊಸ್ಮನಿ (42) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಅಂಗಡಿ ಮುಚ್ಚಿಕೊಂಡು ಮನೆಗೆ ದ್ವಿಚಕ್ರ ವಾಹನದಲ್ಲಿ ಶಿವಶರಣಪ್ಪ ಹೋಗುತ್ತಿದ್ದಾಗ, ಬೈಕ್ನಲ್ಲಿ ಬಂದ ದುಷ್ಕರ್ಮಿಗಳ ನಾಡ ಬಂದೂಕಿನಿಂದ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಎದೆಗೆ ನೇರವಾಗಿ ಗುಂಡು ಬಿದ್ದ ಕಾರಣ ಸ್ಥಳದಲ್ಲಿಯೇ ಶಿವಶರಣಪ್ಪ ಮೃತಪಟ್ಟಿದ್ದು, ಅವರ ಕೈಯಲಿದ್ದ ಹಣದ ಚೀಲದೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಅಮಿತ್ ಸಿಂಗ್ ಆಗಮಿಸಿ ಪರಿಶೀಲನೆ ನಡೆಸಿದರು. ಜೇವರ್ಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರವೆದಿದೆ.
ಬಂದ್ಗೆ ಕರೆ : ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಮತ್ತು ಶಿವಶರಣಪ್ಪ ಕೊಲೆಯನ್ನು ಖಂಡಿಸಿ ರಸಗೊಬ್ಬರ ವ್ಯಾಪಾರಿಗಳು ಶುಕ್ರವಾರ ಗುಲ್ಬರ್ಗ ಬಂದ್ಗೆ ಕರೆ ನೀಡಿದ್ದಾರೆ. ನಗರದ ಎಲ್ಲಾ ರಸಗೊಬ್ಬರ ಅಂಗಡಿಗಳನ್ನು ಮುಚ್ಚಲಾಗಿದೆ.
ಪ್ರತ್ಯೇಕ ರಾಜ್ಯದ ಧ್ವಜಾರೋಹಣ : ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಜಾರಿಗೊಳಿಸಲಾದ ವಿಶೇಷ ಸ್ಥಾನಮಾನದಿಂದ ಉಪಯೋಗವಾಗುತ್ತಿಲ್ಲ ಎಂಬುದು ಸಾಬೀತಾಗಿರುವುದರಿಂದ ಹೈ-ಕ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯವೇ ಅಗತ್ಯವಾಗಿದ್ದು, ನವೆಂಬರ್ 1ರಂದು ನಗರದ ಸಾರ್ವಜನಿಕ ಸ್ಥಳಗಳಲ್ಲಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡಲಾಗುವುದು ಎಂದು ಹೈ-ಕ ಯುವ ಹೋರಾಟ ಸಮಿತಿ ಅಧ್ಯಕ್ಷ ಡಾ.ರಾಜು ಕುಳಗೇರಿ ತಿಳಿಸಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications