ಬೆಂಗಳೂರಿನಲ್ಲಿ ಸುರಂಗ ಯೋಜನೆ: ಇಬ್ಬರು ಸಚಿವರ ನಡುವೆ ಫೈಟ್: ಸ್ಫೋಟಕ ಹೇಳಿಕೆ ನೀಡಿದ ಮಾಜಿ ಸಿಎಂ

ಬೆಂಗಳೂರು, ಡಿಸೆಂಬರ್‌ 30: ಬೆಂಗಳೂರಿನಲ್ಲಿ ಸುರಂಗ ನಿರ್ಮಾಣ ಮಾಡುವ ಯೋಜನೆಗಾಗಿ ಇಬ್ಬರು ಸಚಿವರ ನಡುವೆ ಫೈಟ್ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಈ ಸುರಂಗ ಯೋಜನೆಗೆ 80,000 ಕೋಟಿ ರೂ. ವೆಚ್ಚ ಆಗುತ್ತದೆ ಎಂದು ಸರಕಾರ ಹೇಳಿದೆ. ಆದರೆ, ಈ ಯೋಜನೆಯನ್ನು ಯಾವಾಗ ಪೂರ್ಣ ಮಾಡುತ್ತೇವೆ ಎಂದು ಸರಕಾರ ಹೇಳುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಮಿನ್ಸ್ ರಸ್ತೆಯಿಂದ ಹೆಬ್ಬಾಳದವರಿಗೆ ಸುರಂಗ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ್ದೆ. ಅದಕ್ಕೆ ಅಂತಿಮ ಹಂತದ ಅನಿಮೋದನೆಯನ್ನೂ ಕೊಡಲಾಗಿತ್ತು. ಆದರೆ, ಅಷ್ಟರಲ್ಲಿ ನನ್ನ ಸರಕಾರ ಹೋಯಿತು. ಆ ಯೋಜನೆ ಅಲ್ಲಿಗೇ ನಿಂತು ಹೋಯಿತು ಎಂದು ಕುಮಾರಸ್ವಾಮಿ ಹೇಳಿದರು.

Fight Between Two Ministers Over Tunnel Construction Project In Bengaluru Said HD Kumaraswamy

ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎಸ್ಟೆಲ್ಲಾ ಕೊಳ್ಳೆ ಹೊಡೆಯಬೇಕೋ ಅಷ್ಟನ್ನೂ ಮಾಡಲು ಈ ಸರಕಾರ ಹೊರಟಿದೆ. ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಪ್ರತಿ ಚದರ ಅಡಿಗೆ 100 ರೂಪಾಯಿ ವಸೂಲಿ ಮಾಡುವುದರಲ್ಲಿ ಇವರು ಬ್ಯುಸಿ ಇದ್ದಾರೆ. ಜನರ ಬಗ್ಗೆ ಆಲೋಚನೆ ಮಾಡುವುದಕ್ಕೆ ಇವರಿಗೆ ಸಮಯ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ಸರಕಾರದ ಯೋಗ್ಯತೆಗೆ ಸರಕಾರಿ ಶಾಲೆಗಳನ್ನು ಸ್ವಚ್ಛ ಮಾಡಲು ಹಣವೂ ಇಲ್ಲ, ಸಿಬ್ಬಂದಿಯೂ ಇಲ್ಲ. ಶಿಕ್ಷಕರು ಮಕ್ಕಳಿಂದ ಸ್ವಚ್ಚತಾ ಕಾರ್ಯ ಮಾಡಿಸುತ್ತಾರೆ. ತಪ್ಪು ಸರಕಾರದ್ದು, ಶಿಕ್ಷೆ ಶಿಕ್ಷಕರಿಗೆ. ಎಲ್ಲರನ್ನೂ ಸಮಾನವಾಗಿ ನೋಡಬೇಕು ಎನ್ನುತ್ತಿದೆ ಸರಕಾರ. ಆದರೆ, ಸಮಾಜ ಕಲ್ಯಾಣ ಇಲಾಖೆಯಿಂದ 11 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲಾಗಿದೆ. ಶಾಲೆಗಳಲ್ಲಿ ಚಾಕ್ ಪೀಸ್, ಡಸ್ಟರ್ ತರಲಿಕ್ಕೂ ಶಿಕ್ಷಕರೇ ಹಣ ಖರ್ಚು ಮಾಡಬೇಕು. ರಾಜ್ಯದಲ್ಲಿ 17 ಸಾವಿರ ಶಾಲೆಗಳಿಗೆ ಕಟ್ಟಡವೇ ಇಲ್ಲ. ಕಟ್ಟಡ ಇರುವ ಕಡೆ ಟೀಚರ್ ಇರಲ್ಲ. ಟೀಚರ್ ಇರುವ ಕಡೆ ಕಟ್ಟಡ ಇಲ್ಲ. ಇದು ಸರಕಾರದ ಶಿಕ್ಷಣ ನೀತಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಕೋಲಾರದಲ್ಲಿ ಮಾಧ್ಯಮದವರನ್ನು ಹೊರಗೆ ಹಾಕಿ ಕೆಡಿಪಿ ಮೀಟಿಂಗ್ ಮಾಡಿದ್ದೀರಿ. ಅಲ್ಲಿ ರಾಜಕೀಯ ಮಾಡಲು ಹೋಗಿದ್ದರು ಮುಖ್ಯಮಂತ್ರಿ. ಜನರ ಜೇವನ ಏನಾದರೂ ಆಗಲಿ, ಇವರಿಗೆ ರಾಜಕೀಯ ಮುಖ್ಯ. ಈಗ ಹೊಸದಾಗಿ ಉದ್ಯೋಗ ಮೇಳ ಮಾಡುತ್ತೇವೆ ಎಂದು ಹೊರಟಿದ್ದಾರೆ. ಉದ್ಯೂಗ ಮೇಳ ಇರಲಿ, ಮೊದಲು ಸರಕಾರದಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಿ ಎಂದರು.

Fight Between Two Ministers Over Tunnel Construction Project In Bengaluru Said HD Kumaraswamy

ರಾಜ್ಯದಲ್ಲಿ ನೇಕಾರರ ಪರಿಸ್ಥಿತಿ ದಯನೀಯವಾಗಿದೆ. ದಿನಪೂರ್ತಿ ಇಡೀ ಕುಟುಂಬ ದುಡಿದರೂ 500 ರೂಪಾಯಿ ಸಂಪಾದನೆ ಮಾಡುವುದು ಕಷ್ಟವಾಗಿದೆ. ರಾಜ್ಯದ 39 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅವರಲ್ಲಿ 22 ಮಂದಿ ಬೆಳಗಾವಿ ಜಿಲ್ಲೆಯವರು ಎಂಬ ಸುದ್ದಿಯನ್ನು ಪತ್ರಿಕೆಯಲ್ಲಿ ಓದಿದೆ. ಇವರಿಗೆ ಗ್ಯಾರಂಟಿ ಹಣ ತಲುಪುಲ್ಲ. ಅದಕ್ಕೆ ಸರಕಾರ ಏನು ಮಾಡಿದೆ ಎಂದು ಹೇಳಿದರು.

ಹಿಂದಿನ ಬಿಜೆಪಿ ಸರಕಾರದಲ್ಲಿ ಕೋವಿಡ್ ನಲ್ಲಿ 40,000 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಡಿರುವ ಆರೋಪದಿಂದ ಕಾಂಗ್ರೆಸ್ ರಕ್ಷಣೆ ಪಡೆಯುತ್ತಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು. ಬಿಜೆಪಿಯಲ್ಲಿರುವ ರಾಜಕೀಯ ಭಿನ್ನಾಭಿಪ್ರಾಯಗಳಿಂದ ಇಂತಹ ಮಾತುಗಳು ಕೇಳಿ ಬರುತ್ತಿವೆ. ಇದೇ ಕಾಂಗ್ರೆಸ್ ಗೆ ಹೊಸ ಅಸ್ತ್ರವಾಗಿಬಿಟ್ಟಿದೆ. ಪರಮೇಶ್ವರ್, ಎಂ.ಬಿ.ಪಾಟೀಲ್ ಅವರು ನೀಡುತ್ತಿರುವ ಹೇಳಿಕೆಗಳೇ ಇದಕ್ಕೆ ಸಾಕ್ಷಿ. ಇಷ್ಟು ದೊಡ್ಡ ಅಕ್ರಮ ನಡೆದಿದೆ ಎಂದರೆ ನಂಬಲಾಗುತ್ತಿಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+