ಕಾವೇರಿ ನದಿ ನೀರಿಗಾಗಿ ಹೋರಾಟ: ರೈತರಿಗೆ ಬೆಂಬಲ ಸೂಚಿಸಿದ ಚಂದನವನದ ಖ್ಯಾತ ನಟರು
ಬೆಂಗಳೂರು ಸೆಪ್ಟೆಂಬರ್ 21: ಕಾವೇರಿ ನದಿ ನೀರು ಬಿಡುವ ವಿಚಾರವಾಗಿ ರಾಜ್ಯದಲ್ಲಿ ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಇದಕ್ಕೆ ಸ್ಯಾಂಡಲ್‌ವುಡ್ ಖ್ಯಾತ ನಟರು ಮೌನ ಮುರಿದು ಕೊನೆಗೂ ಮಾತನಾಡಿದ್ದಾರೆ. ಕಾವೇರಿ ನೀರು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ನಡೆದ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ರೈತರ ಪರ ನಿಂತ ನಟರ ಪೈಕಿ ಹಿರಿಯ ನಟ ಅನಂತ ನಾಗ್ ಕೂಡ ಒಬ್ಬರು.
ಸಾಮಾಜಿಕ ಜಾಲತಾಣದಲ್ಲಿ ಕಾವೇರಿ ಹೋರಾಟದ ಬಗ್ಗೆ ಸುಧೀರ್ಘವಾಗಿ ಮಾತನಾಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ತಮಿಳುನಾಡು ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ. ಅರವತ್ತು ವರ್ಷಗಳಿಂದ ತಮಿಳುನಾಡು ನೀರಿಗಾಗಿ ಖ್ಯಾತೆ ತೆಗೆಯುವುದನ್ನು ನಾನು ನೋಡುತ್ತಾ ಬಂದಿದ್ದೇನೆ. ಈ ದ್ರಾವಿಡ ಪಕ್ಷಗಳು ಪದೇ ಪದೇ ಅಲ್ಲಿನ ಜನರನ್ನು ಕಾವೇರಿ ವಿಷಯದಲ್ಲಿ ತಪ್ಪು ದಾರಿಗೆ ಎಳೆಯುತ್ತಿವೆ ಎಂದು ಕಟು ಶಬ್ದಗಳಲ್ಲಿ ಟೀಕಿಸಿದ್ದಾರೆ.

ದ್ರಾವಿಡ ಪಕ್ಷಗಳು ಕರ್ನಾಟಕವನ್ನು ಪಾಕಿಸ್ತಾನದಂತೆ ನೋಡುತ್ತಿದ್ದಾರೆ- ಅನಂತ್‌ನಾಗ್
ಆದರೆ ನಾವು ಪ್ರತೀ ವರ್ಷಕ್ಕಿಂತ ಅಗತ್ಯಕ್ಕಿಂತ ಹೆಚ್ಚು ನೀರನ್ನು ಕೊಡುತ್ತಲೇ ಇದ್ದೇವೆ. ದ್ರಾವಿಡ ಪಕ್ಷಗಳು ಕರ್ನಾಟಕವನ್ನು ಪಾಕಿಸ್ತಾನ, ಶ್ರೀಲಂಕಾದಂತೆ ನೋಡುತ್ತಿವೆ. ಅವರು ಒಟ್ಟಾಗಿ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಾರೆ. ನಮ್ಮಲ್ಲಿ ಹಾಗೆ ಆಗುತ್ತಿಲ್ಲ. ಈ ಕೆಲಸ ನಾವು ಮಾಡಬೇಕಿದೆ ಎಂದು ಹೇಳಿದರು.
ಹಿರಿಯ ನಟ ಅನಂತ್‌ನಾಗ್ ಜೊತೆಗೆ ಕಾವೇರಿ ಹೋರಾಟಕ್ಕೆ ಚಂದನವನದ ಹಲವಾರು ಖ್ಯಾತ ನಟರು ಒಟ್ಟಾಗಿ ಬೆಂಬಲ ಸೂಚಿಸಿದ್ದಾರೆ. ಕನ್ನಡ ನಾಡು, ನುಡಿ, ಜಲದ ಬಗ್ಗೆ ಸದಾ ಅಪಾರ ಗೌರವವನ್ನು ಇಟ್ಟುಕೊಂಡು ಬಂದಿರುವ ಡಾ. ರಾಜಕುಮಾರ್ ಕುಟುಂಬ ಕೂಡ ಕಾವೇರಿ ಕುರಿತಂತೆ ಪ್ರತಿಕ್ರಿಯೆ ನೀಡಿದೆ. ಈ ಬಗ್ಗೆ ರಾಘವೇಂದ್ರ ರಾಜಕುಮಾರ್ ಹಾಗೂ ಶಿವರಾಜ್ ಕುಮಾರ್ ಕೂಡ ಪ್ರತಿಕ್ರೆಯೆ ನೀಡಿದ್ದಾರೆ.

ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು- ಶಿವರಾಜ್ ಕುಮಾರ್
ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದ್ದು, ರೈತ ಆಗಲೇ ಸಂಕಷ್ಟದಲ್ಲಿದ್ದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಎಂದು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ರಕ್ತ ಬೇಕಾದ್ರೂ ಕೊಟ್ಟೇವು ಕಾವೇರಿ ನೀರು ಕೊಡಲ್ಲ-ನಟ ದೊಡ್ಡಣ್ಣ
ರಕ್ತ ಬೇಕಾದ್ರೂ ಕೊಟ್ಟೇವು, ಕಾವೇರಿ ನೀರು ಮಾತ್ರ ಕೊಡಲ್ಲ. ಇದಕ್ಕೆ ನಾವು ಬದ್ಧರಾಗಿದ್ದು ಏನೇ ಆದರೂ ಕಾವೇರಿಯನ್ನು ಬಿಟ್ಟು ಕೊಡಲ್ಲ. ಏಕೆಂದರೆ ನಮಗೆ ಕುಡಿಯಲು ನೀರು ಇಲ್ಲದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ ಎಂದು ನಟ ದೊಡ್ಡಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮ ಹಕ್ಕಿಗಾಗಿ ಸದಾ ಹೋರಾಡೋಣ-ನಟ ಧನಂಜಯ್
ಮಳೆಯ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕಾವೇರಿ ಕೃಷ್ಣ ನದಿಗಳ ಹೋರಾಟ ನಮ್ಮ ಎಲ್ಲರ ಕರ್ತವ್ಯ . ನಮ್ಮ ರೈತರಿಗೆ ಸಿಗಬೇಕಾದ ಪಾಲು ಸಿಗಲೇಬೇಕು. ನಮ್ಮ ಹಕ್ಕಿಗಾಗಿ ಸದಾ ಹೋರಾಡೋಣ. ಕಾವೇರಿ ಸಂಘರ್ಷ ಬೇಗ ಅಂತ್ಯವಾಗಲಿ ಎಂದು ನಟ ಧನಂಜಯ್ ರೈತರ ಹೋರಾಟಕ್ಕೆ ಬೆಂಬ ನೀಡಿದ್ದಾರೆ.

ರೈತರ ಜೊತೆ ನಿಲ್ಲುವುದು ಎಲ್ಲರ ಜವಾಬ್ದಾರಿ- ರಿಷಬ್ ಶೆಟ್ಟಿ
ಇನ್ನೂ ನಟ ರಿಷಬ್ ಶೆಟ್ಟಿ ಕೂಡ ಈ ವರ್ಷ ಮಳೆಯ ಅಭಾವದಿಂದ ನಾಡು ಬರಪೀಡಿತವಾಗಿದೆ. ಈ ಸಂದರ್ಭದಲ್ಲಿ ನಮ್ಮ ರೈತರ ಜೊತೆ ನಿಲ್ಲುವುದು ಎಲ್ಲರ ಜವಾಬ್ದಾರಿ. ಸರ್ಕಾರಗಳು ಕಾವೇರಿ ವಿಚಾರದಲ್ಲಿ ಆದಷ್ಟು ಬೇಗ ನ್ಯಾಯಯುತ ನಿರ್ಣಯಕ್ಕೆ ಬರಲಿ. ರೈತರಿಗೆ ನ್ಯಾಯ ಸಿಗಲಿ ಎಂದು ಪ್ರತಿಕ್ರಿಯಿಸಿದ್ದಾರೆ.
ಜೊತೆಗೆ ಮಂಡ್ಯ ರೈತರು ಕಾವೇರಿ ನದಿ ನೀರಿಗಾಗಿ ನಿರಂತರ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇದಕ್ಕೆ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಅವರು ರೈತರ ಪರವಾಗಿ ನಿಂತಿದ್ದಾರೆ.
ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ೦ ದರ್ಶನ್
ಇನ್ನೂ ದಿ ಬಾಸ್ ದರ್ಶನ್ ಕೂಡ ಟ್ವೀಟ್ ಮಾಡಿ ' ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ, ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ' ಎಂದು ಬರೆದಿದ್ದಾರೆ.

ನಮ್ಮ ಕಾವೇರಿ ನಮ್ಮ ಹಕ್ಕು-ಸುದೀಪ್
ಇನ್ನೂ ಸುದೀಪ್ ಕೂಡ್ ಟ್ವೀಟ್ ಮಾಡಿದ್ದು 'ಸ್ನೇಹಿತರೇ, ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ, ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕಡುನಾಡನ್ನು ಕಾಪಾಡಲಿ' ಎಂದು ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.
ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ: ದುನಿಯಾ ವಿಜಯ್ ಟ್ವೀಟ್
ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು, ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು. ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ. ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ .ನ್ಯಾಯಕ್ಕಾಗಿ ಕೈಚಾಚುತ್ತಿಲ್ಲ ಒಕ್ಕೊರಲಿನಿಂದ ಕೈಮುಗಿಯುತ್ತಿದ್ದೇವೆ ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿ
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications