ಕಾವೇರಿಗಾಗಿ ಹೋರಾಟ; ರಾಜಿ ಪ್ರಶ್ನೆಯೇ ಇಲ್ಲ: ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 21: ಕರ್ನಾಟಕದಲ್ಲಿ ಕಾವೇರಿಗಾಗಿ ಕೂಗು ಜೋರಾಗಿದೆ. ಕಾವೇರಿ ನೀರಿಗಾಗಿ ತಮಿಳುನಾಡು ಪದೇ ಪದೇ ಖ್ಯಾತೆ ತೆಗೆಯುತ್ತಿದ್ದು, ವಾಡಿಕೆಯಂತೆ ಈ ವರ್ಷ ರಾಜ್ಯದಲ್ಲಿ ಮಳೆಯಾದ ಹಿನ್ನೆಲೆ ರಾಜ್ಯದ ರೈತರ ಕಾವೇರಿಗಾಗಿ ಕೆಲ ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದು, ಇದೀಗ ಸ್ಯಾಂಡಲ್‌ವುಡ್ ಖ್ಯಾತ ನಟರು ಕೂಡ ಸಾಥ್ ನೀಡಿದ್ದಾರೆ.
ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯ ಕಾಂಗ್ರೆಸ್ ಸರಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.1/3
— Nikhil Kumar (@Nikhil_Kumar_k) September 21, 2023
ಕಾವೇರಿ ನದಿ ನೀರು ಬಿಡುವ ವಿಚಾರವಾಗಿ ರಾಜ್ಯದಲ್ಲಿ ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಕಾವೇರಿ ನೀರು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ನಡೆದ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ರೈತರ ಪರ ನಟ ಹಾಗೂ ರಾಜಕಾರಣ ನಿಖಿಲ್ ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯ ಕಾಂಗ್ರೆಸ್ ಸರಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನೀರಿನ ಕೊರತೆ ಇದೆ ಮಳೆ ಕೈಕೊಟ್ಟಿದೆ. ಜಲಾಶಯಗಳು ಬರಿದಾಗಿವೆ. ಆದರೂ ತಮಿಳುನಾಡಿಗೆ ರಾಜ್ಯ ಸರಕಾರ ಏಕಪಕ್ಷೀಯವಾಗಿ ನೀರು ಹರಿಸಿದ್ದು ಅಕ್ಷಮ್ಯ. ಬ್ರಿಟೀಷರ ಕಾಲದಲ್ಲಿಯೇ ಶುರುವಾದ ಅನ್ಯಾಯದ ಪರಂಪರೆಯನ್ನು ನಮ್ಮ ರಾಜ್ಯ ಸರಕಾರವೇ ಮುಂದುವರಿಸಿದೆ.
ಸ್ವಾತಂತ್ರ್ಯ ನಂತರವೂ ಮುಂದುವರಿದಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾವೇರಿ ಎನ್ನುವುದು ರಾಜಕೀಯ ಲಾಭದ ವಸ್ತುವಂತೆ ಆಗಿರುವುದು ನೋವಿನ ಸಂಗತಿ. ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು. ಆರೂವರೆ ಕೋಟಿ ಕನ್ನಡಿಗರ ದನಿಯೇ ನನ್ನ ದನಿ. ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ ಎಂದು ಹೇಳಿದರು.












Click it and Unblock the Notifications