'ಮುಡಾ' ಲೋಕಾಯುಕ್ತ ತನಿಖಾಧಿಕಾರಿಗಳ ವಿರುದ್ಧವೇ ರಾಜ್ಯಪಾಲರಿಗೆ ದೂರು: ಪ್ರಕರಣ ಮತ್ತೊಂದು ಹಂತಕ್ಕೆ..

ಬೆಂಗಳೂರು, ಅಕ್ಟೋಬರ್ 16: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ತನಿಖೆ ಶುರುವಾಗಿದೆ. ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತನಿಖೆಗೆ ಸೂಚನೆ ನೀಡಿತ್ತು. ಈ ಪ್ರಕರಣ ಒಂದಷ್ಟು ರಾಜಕೀಯ ಬೆಳವಣಿಗೆಗೂ ಕಾರಣವಾಗಿತ್ರತು. ಇದೀಗ ಸಿಎಂ ವಿರುದ್ಧ ತನಿಖೆ ನಡೆಸ ಲೋಕಾಯುಕ್ತ ತನಿಖಾಧಿಕಾರಿಗಳ ವಿರುದ್ಧವೇ ರಾಜ್ಯಪಾಲರಿಗೆ ದೂರು ದಾಖಲಾಗಿದೆ.

ಹೌದು, ಈ ಹಿಂದೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ದಾಖಲಾಗಿತ್ತು. ಇದೀಗ ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಸರ್ಕಾರದ ಜೊತೆಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಇದು ಪ್ರಕರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿರೀಕ್ಷೆ ಇದೆ.

Filed Complaint Against Lokayukta Officers in Governor Who Probe on CM siddaramaiah muda Case

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ 1,000 ಸಾವಿರ ಪುಟಗಳ ಸಾಕ್ಷ್ಯ ಸಂಗ್ರಹಿಸಿದ್ದರೂ ದಾಳಿ ನಡೆಸದ ಲೋಕಾಯುಕ್ತ ಅಧಿಕಾರಿಗಳು ಸರ್ಕಾರದ ಜತೆ ಶಾಮೀಲಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದಾರೆ. ತನಿಖಾಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ.

ಕಚೇರಿಯಲ್ಲಿ ಸಿಸಿಟಿವಿ ಅಳವಡಿಕೆಗೆ ಮನವಿ
ಲೋಕಾಯುಕ್ತ ಕಚೇರಿಯಲ್ಲಿ ಎಸ್‌ಪಿ ಟಿ.ಜೆ.ಉದೇಶ್ ಅವರನ್ನು ಭೇಟಿ ಮಾಡಿ ಪ್ರಕರಣದ ತನಿಖೆ ಸಂಬಂಧ ಅಗತ್ಯ ದಾಖಲೆಗಳನ್ನು ನೀಡಿದರು. ಲೋಕಾಯುಕ್ತ ಕಚೇರಿಯಲ್ಲಿ ಸಿಸಿಟಿವಿ ಇಲ್ಲ. ಸುಪ್ರೀಂ ಕೋರ್ಟ್ ಸೂಚನೆಯಂತೆ ಲೋಕಾಯುಕ್ತ ಕಚೇರಿಯಲ್ಲಿ ಸಿಸಿ ಟಿವಿ ಅಳವಡಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಸಿಎಂ ವಿಚಾರಣೆಗೆ ಒಳಪಡಿಸುವಂತೆ ಆಗ್ರಹ

ಪದೇ ಪದೇ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿದ್ದಾರೆ. ಇದು ಹಲವು ಅನುಮಾನಗಳಿಗ ಎಡೆಮಾಡಿಕೊಡುತ್ತದೆ. ಲೋಕಾಯುಕ್ತ ಅಧಿಕಾರಿಗಳ ಮೇಲೆ ಪ್ರಭಾವ ಬಿರುತ್ತಿದ್ದಾರೆ ಎಂದನಿಸುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಸಹ ಕೂಡ ಹೋದ ಕಡೆ ಪ್ರಚಾರಗಳಲ್ಲಿ ಪ್ರಚೋದನೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದ ನನಗೆ, ನನ್ನ ಕುಟುಂಬಕ್ಕೆ ಭಯವಿದೆ, ಆದ್ದರಿಂದ ಆದಷ್ಟು ಬೇಗ ಸಿಎಂ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಕೆಲ ದಾಖಲೆಗಳನ್ನು ನೀಡಲಾಗಿದೆ. ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ಸಲ್ಲಿಸಿರುವ ರಿಟ್ ಅರ್ಜಿಯ ಅಂಶಗಳನ್ನು ಉಲ್ಲೇಖ ಮಾಡಿ ಮಾಹಿತಿ ನೀಡಿದ್ದೇನೆ. ಸುಮಾರು 25 ಪುಟಗಳ ಮಾಹಿತಿ ಕೊಟ್ಟಿದ್ದೇನೆ. ಹೈಕೋರ್ಟ್ನಲ್ಲಿ ಸಿಎಂ ಕೆಲ ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಅವೆಲ್ಲಾ ಅಂಶಗಳನ್ನು ನಾನು ಹೇಳಿದ್ದೇನೆ. ವೈಟನರ್‌ ಹಾಕಿರುವ ಪುಟದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕೋರ್ಟ್‌ಗೆ ಮಾಹಿತಿ ಕೊಟ್ಟಿಲ್ಲ. ಈ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.

ಸದ್ಯ ಈವರೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ, ಅವರಿಂದ ರಾಜ್ಯ ಸರ್ಕಾರ ಉರುಳಾಗಿದ್ದ ಈ ಮುಡಾ ಪ್ರಕರಣ, ಇದೀಗ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರಿಗೆ ಉರುಳಾಗಬಹುದು ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+