ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭಾ ಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಬಿರುಸು

By ಒನ್ಇಂಡಿಯಾ ಪ್ರತಿನಿಧಿ
|
Google Oneindia Kannada News

ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮ ಪತ್ರಗಳನ್ನು ಸಲ್ಲಿಸುವ ಕಾರ್ಯ ಬಿರುಸಿನಿಂದ ಸಾಗಿದೆ. ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಲಿಂಗಸುಗೂರು, ಮಸ್ಕಿಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಗಳ ಮೂಲಕ ಆಗಮಿಸಿ ಗುರುವಾರ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ: ಚಿತ್ರಗಳಲ್ಲಿ ಉಪಚುನಾವಣೆ ರಂಗು ನಾಮಪತ್ರ ಸಲ್ಲಿಕೆ: ಚಿತ್ರಗಳಲ್ಲಿ ಉಪಚುನಾವಣೆ ರಂಗು

ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ

ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ

ಬಾಗಲಕೋಟೆಯಲ್ಲಿ ಮಾಜಿ ಶಾಸಕ ವೀರಣ್ಣ ಚರಂತಿಮಠ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

23ರಂದು ಸಾರ್ವಜನಿಕರು ಹಾಗೂ ಅಪಾರ ಬೆಂಬಲಿಗರೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೀಳೂರು ಗುರುಬಸವ ಮಂದಿರದಿಂದ ಆರಂಭಗೊಂಡ ಮೆರವಣಿಗೆ ಟೀಕಿನಮಠ ರಸ್ತೆ , ಅಡತ ಬಜಾರ, ಬಸವೇಶ್ವರ ವೃತ್ತದವರೆಗೆ ಸಾಗಲಿದೆ. ಅಂದು ರಾಜ್ಯ ಪ್ರಮುಖ ನಾಯಕರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್ </a> | <a class=ಬಿಜೆಪಿ | ಜೆಡಿಎಸ್ " title="ಕಾಂಗ್ರೆಸ್ | ಬಿಜೆಪಿ | ಜೆಡಿಎಸ್ " />ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಲಕ್ಷ್ಮಿ ಹೆಬ್ಬಾಳಕರ, ಆನಂದ ಚೋಪ್ರಾ ಮತ್ತಿತರರಿಂದ ಸಲ್ಲಿಕೆ

ಲಕ್ಷ್ಮಿ ಹೆಬ್ಬಾಳಕರ, ಆನಂದ ಚೋಪ್ರಾ ಮತ್ತಿತರರಿಂದ ಸಲ್ಲಿಕೆ

ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಲಕ್ಷ್ಮಿ ಹೆಬ್ಬಾಳಕರ ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಹಿಂಡಲಗಾ ಗಣೇಶ ಮಂದಿರದಲ್ಲಿ ಪೂಜೆ ಸಲ್ಲಿಸಿ ಬಳಿಕ ಸಿಪಿಎಡ ಮೈದಾನದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಬೆಳಗಾವಿ ತಹಸೀಲ್ದಾರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.


ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಸವದತ್ತಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಆನಂದ ಚೋಪ್ರಾ ನಾಮಪತ್ರ ಸಲ್ಲಿಸಿದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಶ್ವಾಸ ವೈದ್ಯ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಟಿಕೆಟ್ ಗಾಗಿ ಆನಂದ ಚೋಪ್ರಾ ಮತ್ತು ವಿಸ್ವಾಸ ವೈದ್ಯ ನಡೆವೆ ಪೈಪೋಟಿ ನಡೆದಿತ್ತು.


ಖಾನಾಪೂರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ ಸಾವಿರಾರು ಕಾರ್ಯಕರ್ತರೊಂದಿಗೆ ಪಾದ ಯಾತ್ರೆ ಮೂಲಕ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಯಿಂದ ಸಲ್ಲಿಕೆ

ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಯಿಂದ ಸಲ್ಲಿಕೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಸಿದ್ದು ವಾಯ್.ಬಂಡಿ ಚುನಾವಣಾಧಿಕಾರಿ ರೇಣುಕಾಪ್ರಸಾದ್'ಗೆ ನಾಮಪತ್ರ ಸಲ್ಲಿಸಿದರು.

ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ರಾಜಾ ಸೋಮನಾಥ ನಾಯಕ ಚುನಾವಣಾಧಿಕಾರಿ ಡಾ.ಚೇತನಾ ಪಾಟೀಲ್'ಗೆ ನಾಮಪತ್ರ ಸಲ್ಲಿಸಿದರು.

ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಂಪನಗೌಡ ಬಾದರ್ಲಿ ಚುನಾವಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿಗೆ ನಾಮಪತ್ರ ಸಲ್ಲಿಸಿದರು.

ಅರಗ ಜ್ಞಾನೇಂದ್ರ, ಮಂಜುನಾಥ ಗೌಡ, ಹಾಲಪ್ಪ ಸಲ್ಲಿಕೆ

ಅರಗ ಜ್ಞಾನೇಂದ್ರ, ಮಂಜುನಾಥ ಗೌಡ, ಹಾಲಪ್ಪ ಸಲ್ಲಿಕೆ

ಭಾರತೀಯ ಜನತಾ ಪಕ್ಷದ ವತಿಯಿಂದ ಮಾಜಿ ಶಾಸಕ ಆರಗ ಜ್ಞಾನೇಂದ್ರರವರು ಇಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಹೊಸನಗರ ಮಾಜಿ ಶಾಸಕ ಬಿ. ಸ್ವಾಮಿರಾವ್, ಶಂಕರನಾರಾಯಣ ಐತಾಳ್, ನಾಗರಾಜಶೆಟ್ಟಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಂದೇಶಜವಳಿ, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆರ್.ಎಂ ಮಂಜುನಾಥ ಗೌಡರು ವಿವಿಧ ದೇವಸ್ಥಾನ, ಮಸೀದಿ, ಚರ್ಚ್‌ಗಳಿಗೆ ಭೇಟಿ ನೀಡಿ, ಅಪಾರ ಬೆಂಬಲಿಗರೊಂದಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಆರ್. ಎಂ ಮಂಜುನಾಥ ಗೌಡರ ಪತ್ನಿ ಆಶಾ ಮುಂತಾದವರಿದ್ದರು.

ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರು ಸಾಗರದ ಉಪವಿಭಾಗ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಟಿ ಡಿ ಮೇಘರಾಜ್, ಸಾಗರ ತಾಲೂಕು ಬಿಜೆಪಿ ಅಧ್ಯಕ್ಷ ಪ್ರಸನ್ನ ಕೆರೆಕೈ, ನಗರ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ಮತ್ತಿತರರು ಇದ್ದರು.

ಹಿರಿಯೂರಿನಲ್ಲಿ ಜೆಡಿಎಸ್ ಯಶೋಧ

ಹಿರಿಯೂರಿನಲ್ಲಿ ಜೆಡಿಎಸ್ ಯಶೋಧ

ಹಿರಿಯೂರು ವಿಧಾನಸಭಾ ಕ್ಷೇತ್ರದ ಸ್ಥಳೀಯ ಜೆಡಿಎಸ್ ಅಭ್ಯರ್ಥಿ ಡಿ.ಯಶೋಧರ ಅವರು ಶ್ರೀ ತೇರುಮಲ್ಲೇಶ್ವರ ದೇವಾಸ್ಥಾನದಲ್ಲಿ ಪೂಜೆ ಮುಗಿಸಿ ನಂತರ ಅಪಾರ ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಪಾದಯಾತ್ರೆ ಮೂಲಕ ತೆರಳಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

English summary
Karnataka Assembly Elections 2018: Shimoga, Bagalkot, Belgaum, Raichur, BJP, congress, jds candidates filed their nomination for assembly election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X