ಪೊಲೀಸ್ ಇಲಾಖೆಯ 16, 838 ಹುದ್ದೆ ಭರ್ತಿ ಮಾಡಿ: ಹೈಕೋರ್ಟ್

ಬೆಂಗಳೂರು, ಜುಲೈ 21 : ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 16, 838 ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ರಾಜ್ಯದ ಜನಸಂಖ್ಯೆಗೆ ಅನುಗುಣವಾಗಿ ಎಷ್ಟು ಪೊಲೀಸರ ಅವಶ್ಯಕತೆ ಇದೆ ಎಂದು ವರದಿ ನೀಡುವಂತೆಯೂ ಸೂಚನೆ ನೀಡಿದೆ.

ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲು ಮಾಡಿಕೊಂಡಿರುವ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎಚ್. ಟಿ. ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಸರ್ಕಾರಕ್ಕೆ ಆದೇಶ ನೀಡಿದೆ.

Fill 16, 838 post in police department orders High Court

ಸರ್ಕಾರಿ ವಕೀಲ ಡಿ. ನಾಗರಾಜ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ನ್ಯಾಯಾಲಯಕ್ಕೆ ವಿವರ ನೀಡಿದರು. ಖಾಲಿ ಇರುವ 16, 838 ಹುದ್ದೆಗಳನ್ನು ಈ ವರ್ಷದ ಅಂತ್ಯದೊಳಗೆ ಭರ್ತಿ ಮಾಡಬೇಕು ಎಂದು ನ್ಯಾಯಾಲಯ ಸೂಚನೆ ನೀಡಿತು.

ಸರ್ಕಾರಿ ವಕೀಲ ಡಿ. ನಾಗರಾಜ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ನ್ಯಾಯಾಲಯಕ್ಕೆ ವಿವರ ನೀಡಿದರು. ಖಾಲಿ ಇರುವ 16, 838 ಹುದ್ದೆಗಳನ್ನು ಈ ವರ್ಷದ ಅಂತ್ಯದೊಳಗೆ ಭರ್ತಿ ಮಾಡಬೇಕು ಎಂದು ನ್ಯಾಯಾಲಯ ಸೂಚನೆ ನೀಡಿತು.

1,223 ಸಬ್ ಇನ್‌ಸ್ಟೆಕ್ಟರ್ ಮತ್ತು 13, 185 ಕಾನ್ಸ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ ಎಂದು ವಕೀಲ ಡಿ. ನಾಗರಾಜ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಇಲಾಖೆಯಲ್ಲಿ ಮಂಜೂರಾದ ಒಟ್ಟು ಹುದ್ದೆಗಳ ಸಂಖ್ಯೆ 65, 214 ಇವುಗಳ ಪೈಕಿ 48, 376 ಹುದ್ದೆ ಭರ್ತಿಯಾಗಿವೆ. 16, 838 ಹುದ್ದೆ ಖಾಲಿ ಇವೆ. ಕಾನ್ಸಸ್ಟೇಬಲ್ ಶ್ರೇಣಿಯ 9146 ಹುದ್ದೆಗಳು ಖಾಲಿ ಇವೆ ಎಂದು ನ್ಯಾಯಾಲಯಕ್ಕೆ ವಿವರಣೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+