ಚಿತ್ರರಂಗದ ಹಿರಿಯ ನಟ ದ್ವಾರಕೀಶ್‌ಗೆ ಗೌರವ ಡಾಕ್ಟರೇಟ್‌

ಬೆಂಗಳೂರು, ನವೆಂಬರ್‌ 25: ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್‌ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಘೋಷಿಸಿದೆ. ಸ್ಯಾಂಡಲ್‌ವುಡ್‌ನ ಹಿರಿಯ ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.

ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬರೋಬ್ಬರಿ 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಜನಪ್ರಿಯರು.

ಈಗ ಅವರ ಕಲಾಸೇವೆ ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ತನ್ನ 57ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಅನ್ನು ಪ್ರದಾನ ಮಾಡಲಿದೆ. ಚಲನಚಿತ್ರ ವಿಭಾಗದಲ್ಲಿ ದ್ವಾರಕೀಶ್‌, ಕಾನೂನು ಅಟಾರ್ನಿ ಹಾಗೂ ನ್ಯಾಯ ಸಲಹೆಗಾರರು ವಿಭಾಗ ಅಮರನಾಥ ಗೌಡ, ವರ್ಣ ಚಿತ್ರಕಾರರ ವಿಭಾಗ ಡಾ.ಟಿ. ಅನಿಲ್‌ಕುಮಾರ್‌ ಸೇರಿದಂತೆ ಗೌರವ ಡಾಕ್ಟರೇಟ್‌ ಅನ್ನು ಡಿಸೆಂಬರ್‌ 5ರಂದು ಜ್ಞಾನಭಾರತಿ ಆಡಿಟೋರಿಯಂನಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುತ್ತದೆ.

Film actor Dwarakish receives honorary doctorate from Bangalore University

ದ್ವಾರಕೀಶ್ ಆಗಸ್ಟ್ 19 1942 ಹುಣಸೂರಿನಲ್ಲಿ ಶಮಾರಾವ್ ಮತ್ತು ಜಯಮ್ಮ ದಂಪತಿಗೆ ಜನಿಸಿದ್ದರು. ಮೈಸೂರಿನ ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ ಸಿಪಿಸಿ ಪಾಲಿಟೆಕ್ನಿಕ್‌ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದ್ದರು. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದ್ದ ದ್ವಾರಕೀಶ್‌ 1963 ರಲ್ಲಿ ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+