ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ದ್ವೇಷ ರಾಜಕೀಯಕ್ಕೆ ಉದಾಹರಣೆ ಕೊಟ್ಟ ಎಚ್‌ಡಿಕೆ

|
Google Oneindia Kannada News

Recommended Video

ಯಡಿಯೂರಪ್ಪ ಮಾಡಿದ ದ್ವೇಶದ ರಾಜಕಾರಣ ಏನು ಗೊತ್ತಾ..? | H.D.Kumaraswamy

ಬೆಂಗಳೂರು, ಸೆಪ್ಟೆಂಬರ್ 18 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರ ದ್ವೇಷ ರಾಜಕಾರಣಕ್ಕೆ ಎಚ್. ಡಿ. ಕುಮಾರಸ್ವಾಮಿ ಉದಾಹರಣೆ ನೀಡಿದ್ದಾರೆ. ಜೀವ ವೈವಿಧ್ಯ ತಾಣ ರೋರಿಚ್ ಎಸ್ಟೇಟಿನಲ್ಲಿ ಫಿಲಂ ಸಿಟಿ ನಿರ್ಮಿಸುವ ಪ್ರಸ್ತಾಪವನ್ನು ಅವರು ವಿರೋಧಿಸಿದ್ದಾರೆ.

ಎಫ್‌ಕೆಸಿಸಿಐ ಸಂಸ್ಥಾಪಕರ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, "ಕನಕಪುರ ರಸ್ತೆಯಲ್ಲಿರುವ ಸುಮಾರು 700 ಎಕರೆ ವಿಸ್ತೀರ್ಣದ ರೋರಿಚ್ ಎಸ್ಟೇಟ್‌ನಲ್ಲಿ ಅಂತರರಾಷ್ಟ್ರೀಯ ಮಟ್ಟದ ಚಿತ್ರನಗರಿ ನಿರ್ಮಿಸಲು ತೀರ್ಮಾನಿಸಲಾಗಿದೆ" ಎಂದು ಹೇಳಿದ್ದರು.

ಡಿ.ಕೆ. ಶಿವಕುಮಾರ್ ಪರ ಪ್ರತಿಭಟನೆ : ಎಚ್‌ಡಿಕೆ ಗೈರಾಗಿದ್ದು ಏಕೆ?ಡಿ.ಕೆ. ಶಿವಕುಮಾರ್ ಪರ ಪ್ರತಿಭಟನೆ : ಎಚ್‌ಡಿಕೆ ಗೈರಾಗಿದ್ದು ಏಕೆ?

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಯಡಿಯೂರಪ್ಪ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು. ಬುಧವಾರ ಈ ಕುರಿತು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಯಡಿಯೂರಪ್ಪ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಯಡಿಯೂರಪ್ಪ ಬೆಂಗಳೂರು ಪ್ರದಕ್ಷಿಣೆ ನಾಟಕ: ಎಚ್‌ಡಿಕೆಯಡಿಯೂರಪ್ಪ ಬೆಂಗಳೂರು ಪ್ರದಕ್ಷಿಣೆ ನಾಟಕ: ಎಚ್‌ಡಿಕೆ

"ಬೆಂಗಳೂರು ಹೊರವಲಯದಲ್ಲಿ ಅತಿಕ್ರಮಣಕ್ಕೆ ತುತ್ತಾಗದೇ ಜೀವ ವೈವಿಧ್ಯ ಉಳಿಸಿಕೊಂಡಿರುವ ತಾಣ ರೋರಿಚ್ ಎಸ್ಟೇಟ್. ಇದು ಫಿಲಂ ಸಿಟಿಗೆ ಸೂಕ್ತವಲ್ಲ, ಹಾಗೇನಾದರೂ ಇಲ್ಲಿ ಫಿಲಂ ಸಿಟಿ ಕಟ್ಟಿದರೆ ಪರಿಸರ ನಾಶದ ಜತೆಗೇ ಮಾನವ ಮತ್ತು ವನ್ಯ ಮೃಗಗಳ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತೆ" ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಹತಾಶೆಯಿಂದ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ : ಡಿಸಿಎಂಹತಾಶೆಯಿಂದ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ : ಡಿಸಿಎಂ

ರಾಮನಗರದಲ್ಲಿ ಕಟ್ಟಲು ತೀರ್ಮಾನ

ರಾಮನಗರದಲ್ಲಿ ಕಟ್ಟಲು ತೀರ್ಮಾನ

"ಫಿಲಂ ಸಿಟಿಯನ್ನು ರಾಮನಗರದಲ್ಲಿ ಕಟ್ಟಬೇಕೆಂದು ನನ್ನ ಸರ್ಕಾರದಲ್ಲಿ ತೀರ್ಮಾನಿಸಲಾಗಿತ್ತು. ಈ ಮೂಲಕ ರಾಮನಗರ, ಬೆಂಗಳೂರು, ಬೆಂ.ಗ್ರಾಮಾಂತರ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಯೋಜನೆಯ ಉದ್ದೇಶಗಳ್ಲೊಂದು. ಆದರೆ, ಅದನ್ನು ಸ್ಥಳಾಂತರಿಸುವ ನಿರ್ಧಾರದ ಮೂಲಕ ಬಿಎಸ್ವೈ ರಾಮನಗರದ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ" ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸ್ಥಳಾಂತರವೇ ದ್ವೇಷ ರಾಜಕೀಯ

ಸ್ಥಳಾಂತರವೇ ದ್ವೇಷ ರಾಜಕೀಯ

ರಾಮನಗರದಲ್ಲಿ ಕಟ್ಟಬೇಕೆಂದು ತೀರ್ಮಾನವಾಗಿದ್ದ ಫಿಲಂ ಸಿಟಿಯನ್ನು ಕನಕಪುರ ರಸ್ತೆಯಲ್ಲಿರುವ ಸುಮಾರು 700 ಎಕರೆ ವಿಸ್ತೀರ್ಣದ ರೋರಿಚ್ ಎಸ್ಟೇಟ್‌ನಲ್ಲಿ ನಿರ್ಮಾಣ ಮಾಡಲು ಯಡಿಯೂರಪ್ಪ ಘೋಷಣೆ ಮಾಡಿರುವುದು ದ್ವೇಷ ರಾಜಕಾರಣ ಎಂಬುದು ಕುಮಾರಸ್ವಾಮಿ ಆರೋಪ.

ಸ್ವಾಗತಿಸಿದ ರಾಜೇಂದ್ರಸಿಂಗ್ ಬಾಬು

ಸ್ವಾಗತಿಸಿದ ರಾಜೇಂದ್ರಸಿಂಗ್ ಬಾಬು

ಹಿರಿಯ ನಿರ್ದೇಶಕ ಎಸ್. ವಿ. ರಾಜೇಂದ್ರ ಸಿಂಗ್ ಬಾಬು ಚಿತ್ರನಗರಿ ನಿರ್ಮಾಣದ ತೀರ್ಮಾನವನ್ನು ಸ್ವಾಗತಿಸಿದ್ದಾರೆ. "ರೋರಿಚ್ ಎಸ್ಟೇಟ್‌ನಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುವುದು ಖುಷಿ ತಂದಿದೆ. ಮೈಸೂರಿನಲ್ಲೂ ಆಗಲಿ, ಇದರಿಂದ ಚಿತ್ರೋದ್ಯಮಕ್ಕೆ ಅನುಕೂಲವಾಗಲಿದೆ" ಎಂದು ಹೇಳಿದ್ದಾರೆ.

ಹಲವು ವರ್ಷಗಳ ಬೇಡಿಕೆ

ಹಲವು ವರ್ಷಗಳ ಬೇಡಿಕೆ

ಕರ್ನಾಟಕದಲ್ಲಿ ಚಿತ್ರ ನಗರಿ ನಿರ್ಮಾಣ ಮಾಡಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ಅನಂತನಾಗ್ ಮತ್ತು ಶಂಕರನಾಗ್‌ ಚಿತ್ರನಗರಿ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದರು. ಸರ್ಕಾರಗಳು ಬದಲಾದರೂ ಚಿತ್ರನಗರಿ ನಿರ್ಮಾಣ ಮಾತ್ರ ಆಗಿಲ್ಲ.

English summary
Former Chief Minister H.D.Kumaraswamy slammed Karnataka government for the proposed film city project that will built at Roerich and Devika Rani Roerich Estate at Tataguni. H.D.Kumaraswamy proposes to built film city at Ramanagara district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X