ಕೊನೆಗೂ ಕಾಂಗ್ರೆಸ್ ಪಕ್ಷ ಸೇರಿದ ಆಯನೂರು ಮಂಜುನಾಥ್
ಬೆಂಗಳೂರು, ಆಗಸ್ಟ್ 24: ವಿಧಾನ ಪರಿಷತ್‌ನ ಮಾಜಿ ಸದಸ್ಯ, ಜೆಡಿಎಸ್ ನಾಯಕ ಆಯನೂರು ಮಂಜುನಾಥ ಜೆಡಿಎಸ್ ಬಿಟ್ಟು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕೊನೆಗೂ ಕಾಂಗ್ರೆಸ್ ಸೇರಿದ್ದಾರೆ.
ಭಾನುವಾರವಷ್ಟೆ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಆಯನೂರು ಮಂಜುನಾಥ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದರು. ಆಗ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಮತ್ತಷ್ಟು ಬಲವಾಗಿ ಹಬ್ಬಿತ್ತು.
ಶಿವಮೊಗ್ಗದಲ್ಲಿ ಮಾತನಾಡಿದ್ದ ಆಯನೂರು ಮಂಜುನಾಥ್ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿಯೇ ನಾನು ಕಾಂಗ್ರೆಸ್ ಸೇರಬೇಕಾಗಿತ್ತು. ಆದರೆ ಆಗ ಸಾಧ್ಯವಾಗಲಿಲ್ಲ, ನಾನು ಜೆಡಿಎಸ್ ಪಕ್ಷದಿಂದ ಕಣಕ್ಕಿಳಿದೆ. ಈಗ ಕಾಂಗ್ರೆಸ್ ಸೇರಲು ಸ್ಥಳೀಯ ಶಾಸಕರು, ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳ ಒಪ್ಪಿಗೆ ಸಿಕ್ಕಿದೆ ಎಂದು ಹೇಳಿದ್ದರು.

ಮಂಗಳೂರು, ಉಡುಪಿ, ತುಮಕೂರು, ಕೊಡಗು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಒಳಗೊಂಡ ನೈಋತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದರೆ ವಿಧಾನ ಪರಿಷತ್ ಅವಧಿ ಇನ್ನೂ ಉಳಿದಿರುವಾಗಲೇ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪರಿಷತ್ ಸದಸ್ಯತ್ವ, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಆಯನೂರು ಮಂಜುನಾಥ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರಿದ್ದರು.
ಜೆಡಿಎಸ್ ಪಕ್ಷ ಈ ಬಾರಿಯ ಚುನಾವಣೆಗೆ ಆಯನೂರು ಮಂಜುನಾಥರನ್ನು ಶಿವಮೊಗ್ಗ ನಗರದ ಪಕ್ಷದ ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಚುನಾವಣೆಯಲ್ಲಿ ಅವರು 8,863 ಮತಗಳನ್ನು ಮಾತ್ರ ಪಡೆದು ಹೀನಾಯ ಸೋಲು ಕಂಡಿದ್ದರು. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ 96,490 ಮತಗಳನ್ನು ಪಡೆದು ಗೆಲುವು ಕಂಡರು. ಕಾಂಗ್ರೆಸ್‌ನ ಹೆಚ್. ಸಿ. ಯೋಗೇಶ್ 68,816 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದರು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿದ್ದ ಕೆ. ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದರು. ಆಗ ಆಯನೂರು ಮಂಜುನಾಥ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಆಯನೂರು ಮಂಜುನಾಥ ಬದಲು ಈಶ್ವರಪ್ಪ ಆಪ್ತರಾದ ಚನ್ನಬಸಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿತು. ಆಗ ಆಯನೂರು ಮಂಜುನಾಥ ಬಿಜೆಪಿಗೆ ರಾಜೀನಾಮೆ ನೀಡಿ ಜೆಡಿಎಸ್ ಸೇರಿದರು. ಈಗ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.

ಕಾಂಗ್ರೆಸ್ ಟಿಕೆಟ್ ನೀಡಿದರೆ ನೈರುತ್ಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಈಗಾಗಲೇ ಹೇಳಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಪಡೆದಿದ್ದ ನಾನು ಈ ಬಾರಿಯೂ ಕಣಕ್ಕೆ ಇಳಿಯಲು ಈಗಾಗಲೇ ಸಿದ್ಧತೆ ನಡೆಸಿದ್ದೇನೆ. ಆದರೆ, ಟಿಕೆಟ್ ಬಯಸಿ ಕಾಂಗ್ರೆಸ್‌ನ ಮುಖಂಡರನ್ನು ಭೇಟಿ ಮಾಡಿಲ್ಲ. ಯೋಗೇಶ್ ಅವರ ಪತ್ರ ಆಶ್ಚರ್ಯ ತಂದಿದೆ ಎಂದು ಹಿಂದೆ ಹೇಳಿದ್ದರು.
ಕಳೆದ ಬಾರಿಯೂ ಆಯನೂರು ಮಂಜುನಾಥ್ ಜೆಡಿಎಸ್‌ಗೆ ಹೋಗುವ ಮುನ್ನ ಕಾಂಗ್ರೆಸ್‌ಗೆ ಸೇರಲು ಬಯಸಿದ್ದರು. ಆದರೆ ಆಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಎಲ್ಲ 12 ಮಂದಿ ಒಟ್ಟುಗೂಡಿ ಆಯನೂರು ಪ್ರವೇಶವನ್ನು ವಿರೋಧಿಸಿದ್ದರು. ಹೀಗಾಗಿ, ಕೊನೆಗಳಿಗೆವರೆಗೂ ಆಯನೂರ್‌ಗೆ ಕಾಂಗ್ರೆಸ್ ಪ್ರವೇಶ ಸಿಕ್ಕಿರಲಿಲ್ಲ.
ಜೆಡಿಎಸ್ ಮುಖಂಡರಾದ ಮಾಜಿ ಸಂಸದ, ಮಾಜಿ ಶಾಸಕ ಆಯನೂರು ಮಂಜುನಾಥ್ ಜೊತೆ ಶಿಕಾರಿಪುರದ ನಾಗರಾಜ್ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಚಂದ್ರಪ್ಪ, ಸಚಿವ ಮಧು ಬಂಗಾರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಇನ್ನೂ ಆಯನೂರು ಮಂಜುನಾಥ್ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿರುವ ಡಿಕೆ ಶಿವಕುಮಾರ್ ಅವರು ಶಿವಮೊಗ್ಗದ ಹಿರಿಯ ನಾಯಕರಾದ ಶ್ರೀ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಮುಂದಿನ ರಾಜಕೀಯ ಜೀವನ ಚೆನ್ನಾಗಿರಲಿ ಎಂದು ಶುಭ ಹಾರೈಸಿದೆ. ಕಾಂಗ್ರೆಸ್ ಪಕ್ಷದ ನಾಯಕರಾಗಲಿ, ಕಾರ್ಯಕರ್ತರಾಗಲಿ ಎಲ್ಲರಿಗೂ ನಾನು ಹೇಳುವುದು ಇಷ್ಟೇ. ನೀವು ಕಾಂಗ್ರೆಸ್ ಪಕ್ಷದಲ್ಲಿ ಬೇರೂರಿದರೆ ನಿಮಗೆ ಸೂಕ್ತ ಸ್ಥಾನಮಾನಗಳು ಸಿಗಲಿವೆ ಎಂದು ಹೇಳಿದ್ದಾರೆ.
ನೀವು ಬಂದು ಹೋಗುವ ಪ್ರವೃತ್ತಿ ಮೈಗೂಡಿಸಿಕೊಂಡರೆ ನಿಮಗೆ ಸಿಗಬೇಕಾದ ಅವಕಾಶಗಳು ತಪ್ಪುತ್ತವೆ, ಅಷ್ಟೇ ಅಲ್ಲ ಜನ ನಿಮ್ಮ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ. ರಾಷ್ಟ್ರ ಧ್ವಜದ ಗುರುತು ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಇತಿಹಾಸವಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ ಎಂದು ಹೇಳಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‌ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications