CM Siddaramaiah: ನಕ್ಸಲರು ಶರಣಾಗತರಾದರೆ ಆರ್ಥಿಕ, ಕಾನೂನು ನೆರವು: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು,ಡಿಸೆಂಬರ್ 30: ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ.

ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ.
ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ. ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ ಎಂದು ಹೇಳಿದ್ದಾರೆ.
ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ. ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು.
ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications