‘ದಶಕಗಳ ಕಾಲ ಕನ್ನಡಿಗರು ಬೆವರು ಹರಿಸಿ ಕಟ್ಟಿದ ವಿಜಯಾ ಬ್ಯಾಂಕ್...’
ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ಜಟಾಪಟಿಗೆ ಸಿಎಂ ಸಿದ್ದರಾಮಯ್ಯ ಈಗ ನೇರವಾಗಿ ಎಂಟ್ರಿ ಕೊಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಕೇಂದ್ರ ಸರ್ಕಾರದ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸುತ್ತಾ, ಕನ್ನಡಿಗರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂಬ ಆರೋಪ ಮಾಡುತ್ತಿದ್ದಾರೆ. ಇದೆ ರೀತಿ ಈಗ ಕರ್ನಾಟಕದ ಬ್ಯಾಂಕ್‌ಗಳನ್ನ ಕೇಂದ್ರ ಸರ್ಕಾರ ವಿಲೀನ ಮಾಡಿದ ಕ್ರಮವನ್ನೂ ಪ್ರಸ್ತಾಪಿಸಿ ಹೊಸ ಆರೋಪದ ಬಾಂಬ್ ಸಿಡಿಸಿದ್ದಾರೆ.
ಕರ್ನಾಟಕದ ಕನ್ನಡಿಗರ ನೆಲದಲ್ಲಿ ಹುಟ್ಟಿದ ಬ್ಯಾಂಕ್‌ಗಳು ಇಂದು ರಾಷ್ಟ್ರೀಕರಣದ ಹೆಸರು ಬಳಸಿ ಬೇರೆ ರಾಜ್ಯಗಳ ಪಾಲಾಗಿವೆ ಎಂಬ ಆರೋಪ ಪದೇ ಪದೆ ಕೇಳಿಬರುತ್ತದೆ. ಅದ್ರಲ್ಲಿ, ಕರ್ನಾಟಕದ ಹಲವು ಬ್ಯಾಂಕ್‌ಗಳಲ್ಲಿ ಲಕ್ಷಾಂತರ ಕನ್ನಡಿಗರು ಉದ್ಯೋಗ ಮಾಡುತ್ತಿದ್ದರು. ಆದರೆ ಬ್ಯಾಂಕುಗಳ ರಾಷ್ಟ್ರೀಕರಣದ ನಂತರ, ಕರ್ನಾಟಕದ ಬ್ಯಾಂಕ್‌ಗಳಲ್ಲಿ ಪರಭಾಷಿಕರ ಹಾವಳಿ ಹೆಚ್ಚಾಗಿದೆ ಎಂಬ ಆರೋಪ ಕೂಡ ಕೇಳಿಬರುತ್ತಿದೆ. ಈಗ ಸಿಎಂ ಸಿದ್ದರಾಮಯ್ಯ, ಇದೇ ಬ್ಯಾಂಕ್‌ಗಳ ವಿಲೀನ ವಿಚಾರ ಪ್ರಸ್ತಾಪ ಮಾಡಿ ಕೇಂದ್ರದ ವಿರುದ್ಧ ಗುಡುಗಿದ್ದಾರೆ.

ಮೋದಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, 'ದಶಕಗಳ ಕಾಲ ಕನ್ನಡಿಗರು ಬೆವರು ಹರಿಸಿ ಕಟ್ಟಿದ ವಿಜಯಾ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಾಗೂ ಸಿಂಡಿಕೇಟ್ ಬ್ಯಾಂಕ್ ಗಳನ್ನು ವಿಲೀನದ ಹೆಸರಿನಲ್ಲಿ ಆಪೋಶನ ತೆಗೆದುಕೊಂಡಿದ್ದು ನೀವೇ ಅಲ್ಲವೇ @narendramodi ಅವರೇ? ಮೊದಲು ಈ ಬ್ಯಾಂಕುಗಳಲ್ಲಿ ವ್ಯವಹರಿಸುವಾಗ ನಮ್ಮವರು ಕಟ್ಟಿದ ಸಂಸ್ಥೆ ಎಂಬ ಹೆಮ್ಮೆ ಕನ್ನಡಿಗರಿಗಿತ್ತು, ಈಗ ಅವು ಕರುನಾಡೊಂದಿಗಿನ ಸಂಬಂಧ ಕಡಿದುಕೊಂಡು ಸಂಪೂರ್ಣ ಬದಲಾಗಿವೆ. ನಮ್ಮವರಿಗೆ ಮಾತ್ರ ಯಾಕೆ ಈ ಅನ್ಯಾಯ? ಕೇಂದ್ರ @BJP4India ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ #AnswerMadiModi' ಎಂದು ಪ್ರಶ್ನೆ ಮಾಡಿದ್ದಾರೆ.
ದಶಕಗಳ ಕಾಲ ಕನ್ನಡಿಗರು ಬೆವರು ಹರಿಸಿ ಕಟ್ಟಿದ ವಿಜಯಾ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಾಗೂ ಸಿಂಡಿಕೇಟ್ ಬ್ಯಾಂಕ್ ಗಳನ್ನು ವಿಲೀನದ ಹೆಸರಿನಲ್ಲಿ ಆಪೋಶನ ತೆಗೆದುಕೊಂಡಿದ್ದು ನೀವೇ ಅಲ್ಲವೇ @narendramodi ಅವರೇ?
— Siddaramaiah (@siddaramaiah) October 30, 2023
ಮೊದಲು ಈ ಬ್ಯಾಂಕುಗಳಲ್ಲಿ ವ್ಯವಹರಿಸುವಾಗ ನಮ್ಮವರು ಕಟ್ಟಿದ ಸಂಸ್ಥೆ ಎಂಬ ಹೆಮ್ಮೆ… pic.twitter.com/IPubnK7TyQ
ಕನ್ನಡಿಗರ ಬೇಡಿಕೆಯ ಬಗ್ಗೆ...
ಹಾಗೇ ಮತ್ತೊಂದು ಟ್ವೀಟ್ ಮೂಲಕ, 'ಬಹುಕಾಲದ ಬೇಡಿಕೆಯಾದ ಏಮ್ಸ್ ಸಂಸ್ಥೆ, ಸಬ್ ಅರ್ಬನ್ ರೈಲು ಈಗಲೂ ಕನ್ನಡಿಗರಿಗೆ ಕನಸಾಗಿಯೇ ಉಳಿದಿದೆ, ಕನ್ನಡಿಗರು ಶ್ರಮವಹಿಸಿ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ನಮ್ಮವರ ಪಾಲಿಗೆ ಇಲ್ಲವಾಗಿವೆ. ಕರುನಾಡಿಗೆ ಇದೆಂತಹ ಅನ್ಯಾಯ ಪ್ರಧಾನಿ @narendramodi ಅವರೇ? ಕೇಂದ್ರ @BJP4India ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ #AnswerMadiModi' ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.
ಬಹುಕಾಲದ ಬೇಡಿಕೆಯಾದ ಏಮ್ಸ್ ಸಂಸ್ಥೆ, ಸಬ್ ಅರ್ಬನ್ ರೈಲು ಈಗಲೂ ಕನ್ನಡಿಗರಿಗೆ ಕನಸಾಗಿಯೇ ಉಳಿದಿದೆ, ಕನ್ನಡಿಗರು ಶ್ರಮವಹಿಸಿ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ನಮ್ಮವರ ಪಾಲಿಗೆ ಇಲ್ಲವಾಗಿವೆ. ಕರುನಾಡಿಗೆ ಇದೆಂತಹ ಅನ್ಯಾಯ ಪ್ರಧಾನಿ @narendramodi ಅವರೇ?
— Siddaramaiah (@siddaramaiah) October 30, 2023
ಕೇಂದ್ರ @BJP4India ಸರ್ಕಾರ ಕರ್ನಾಟಕದ ಮೇಲೆ ಸೇಡು… pic.twitter.com/7m7BOGNoNQ












Click it and Unblock the Notifications