HSRP: ಮತ್ತೆ ವಿಸ್ತರಣೆ ಡೌಟ್.. ದಂಡಾಸ್ತ್ರದಿಂದ ಬಚಾವಾಗಲು ಈ ದಿನಾಂಕದೊಳಗೆ ನಿಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಿ
HSRP Number Plate: 2019ರ ಏಪ್ರಿಲ್ 1ರ ಮುಂಚೆ ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಈಗಾಗಲೇ ಗಡುವನ್ನು ಹಲವು ಬಾರಿ ಗಡುವು ವಿಸ್ತರಣೆ ಮಾಡುತ್ತಾ ಬಂದಿಗೆ. ಮತ್ತೆ ಹೈಕೋರ್ಟ್ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ.
ಈಗಾಗಲೇ ಸಾರಿ ಇಲಾಖೆಯಿಂದ ಎಚ್‌ಎಸ್‌ಆರ್‌ಪಿ ಬಂಬರ್ ಪ್ಲೇಟ್ ಅಳವಡಿಕೆಗೆ ನಾಲ್ಕು ಬಾರಿ ಗಡುವು ನೀಡಲಾಗಿತ್ತು. ಮತ್ತೆ ಹೈಕೋರ್ಟ್ ಗಡುವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ಈ ಗಡುವು ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆಗಳು ತುಂಬಾ ಕಡಿಮೆ ಎನ್ನಲಾಗುತ್ತಿದೆ. ಆದ್ದರಿಂದ ವಾಹನ ಸವಾರರು ತನ್ನ ವಾಹನಗಳುಗೆ ಇಲ್ಲಿ ನೀಡಿರುವ ದಿನಾಂಕದೊಳಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅವಳವಡಿಸಿಕೊಂಡರೆ ಉತ್ತಮ.

2019ರ ಏಪ್ರಿಲ್ 1ಕ್ಕಿಂತ ಮುಂಚಿನ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಡ್ಡುವುದಕ್ಕೆ ತಯಾತಾಗಿ ಎಂದು ಹೇಳಲಾಗಿತ್ತು. ಆದರೆ ಇದೀಗ ಮತ್ತೆ ನವೆಂಬರ್ 20ರ ವರೆಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಣೆ ಮಾಡಿ ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದೆ.
ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದಂತಹ ಅರ್ಜಿ ವಿಚಾರಣೆ ನಡೆಸಲಾಯಿತು. ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಈ ಮನವಿ ಪರಿಗಣಿಸಿದಂತ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದೆ.
ಈ ಹಿನ್ನೆಲೆ ಎಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 20, 2024ರವರೆಗೆ ಅವಧಿ ವಿಸ್ತರಣೆ ಮಾಡಿದ್ದು, ಈ ಮೂಲಕ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್‌ನಿಂದ ಮುಕ್ತಿ ಸಿಕ್ಕಂತಾಗಿದೆ.
HSRP ನಂಬರ್ ಪ್ಲೇಟ್ ಪಡೆಯವ ವಿಧಾನ
* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿ ಇನ್ ಆಗಬೇಕು.
* ನಂತರ Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ.
* ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ.
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ.
* ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ.
* ಮೊಬೈಲ್ ನಂಬರ್‌ಗೆ ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಕೆಗೆ ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ನಿಯಮವನ್ನು ಬೆಂಗಳೂರಿನಲ್ಲಿ ಹೆಚ್ಚಿನ ಜನರು ಅನುಸರಿಸುತ್ತಿರುವುದು ಕಂಡುಬಂದಿದೆ. ಎರಡನೇ ಹಂತದದಲ್ಲಿ ಇನ್ನಿತರೆ ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಅಳವಡಿಕೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಲಾಖೆಯ ಅಧಿಕಾರಿಯೊಬ್ಬರ ಪ್ರಕಾರ, "ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಕಡ್ಡಾಯದ ಅಧಿಸೂಚನೆಯನ್ನು ಆಗಸ್ಟ್ 2023ರಲ್ಲಿ ಜಾರಿ ಮಾಡಲಾಯಿತು. ನಂತರ, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳ ಅಳವಡಿಕೆಗಾಗಿ ಹಲವು ಬಾರಿ ಗಡುವು ನೀಡುತ್ತಾ ಬಂದಿದ್ದೇವೆ. ಈ ಮೂಲಕ ವಾಹನ ಸವಾರರಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿದೆ," ಎಂದು ಹೇಳಿದ್ದಾರೆ.












Click it and Unblock the Notifications