ತಮ್ಮ ಗೋಪಾಲ್ ಜೋಶಿ ಮೇಲೆ ಎಫ್‌ಐಆರ್‌ ಬಗ್ಗೆ ಪ್ರಹ್ಲಾದ್ ಜೋಶಿ ಸ್ಫೋಟಕ ಹೇಳಿಕೆ

ಕೇಂದ್ರ ಸಚಿವ ಹಾಗೂ ಕರ್ನಾಟಕ ಬಿಜೆಪಿ ಪ್ರಮುಖ ನಾಯಕ ಪ್ರಹ್ಲಾದ್‌ ಜೋಶಿ ಅವರು ಸಹೋದರ ಗೋಪಾಲ್‌ ಜೋಶಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಸಹೋದರಿ ವಿಜಯಲಕ್ಷ್ಮಿ ಜೋಶಿ ಎನ್ನುವವರ ಬಗ್ಗೆಯೂ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಜೋಶಿ ಅವರು ನೀಡಿರುವ ಹೇಳಿಕೆ ಈ ಪ್ರಕರಣದಲ್ಲಿ ಅಚ್ಚರಿ ಮೂಡಿಸಿದೆ. ತಪ್ಪು ಮಾಡಿದವರ ಬಗ್ಗೆ ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಸಹೋದರ ಹಾಗೂ ಸಹೋದರಿ ಇಬ್ಬರು ಸೇರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಕೊಡುವುದಾಗಿ ನಂಬಿಸಿ 2 ಕೋಟಿ ರೂಪಾಯಿ ವಂಚಿಸಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಹ್ಲಾದ್‌ ಜೋಶಿ ಅವರು ಶಾಕಿಂಗ್‌ ಸ್ಟೇಟ್‌ಮೆಂಟ್‌ ನೀಡಿದ್ದಾರೆ.

FIR against brother Gopal Joshi Union Minister Prahlad Joshi s explosive statement

ಗೋಪಾಲ್ ಜೋಶಿ ಸೇರಿದಂತೆ ಸಹೋದರಿ ವಿಜಯಲಕ್ಷ್ಮಿ ಜೋಶಿ, ಪುತ್ರ ಅಜಯ್ ಜೋಶಿ ವಿರುದ್ಧವೂ ಕೇಸ್ ದಾಖಲಿಸಿಕೊಳ್ಳಲಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸೋಷಿಯಲ್‌ ಮೀಡಿಯಾದಲ್ಲೂ ಈ ವಿಷಯ ಹರಿದಾಡುತ್ತಿದೆ.

ಜೋಶಿ ಸಹೋದರ ಹಾಗೂ ಸಹೋದರಿ ಮೋಸ ಮಾಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರಹ್ಲಾದ್‌ ಜೋಶಿ ಅವರು,ನನಗೆ ಸಹೋದರಿ ಇಲ್ಲ ಎಂದಿದ್ದಾರೆ. ಮುಂದುವರಿದು ಅವರ ಸಹೋದರ ಗೋಪಾಲ್ ಜೋಶಿ ಮೇಲಿನ ಪ್ರಕರಣದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ. ನನಗೆ ಸಹೋದರಿಯರೇ ಇಲ್ಲ. ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ಸಂಬಂಧ ಕಡಿದುಕೊಂಡಿದ್ದೇವೆ. ಅವರ ಕುಟುಂಬಕ್ಕೂ ನಮ್ಮ ಕುಟುಂಬಕ್ಕೂ ಸಂಬಂಧವೇ ಇಲ್ಲ ಎಂದಿದ್ದಾರೆ.

ಗೋಪಾಲ್ ಜೋಶಿ ಮಾತ್ರವಲ್ಲ ಬೇರೆ ಯಾರೇ ಇರಲಿ ಅವರ ವೈಯಕ್ತಿಕ ಕೆಲಸಗಳಿಗೆ ನನ್ನ ಹೆಸರನ್ನು ಬಳಸಿಕೊಳ್ಳಬಾರದು ಹಾಗೂ ದುರುಪಯೋಗ ಮಾಡಿಕೊಳ್ಳುತ್ತಿದ್ದರೆ, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪುನರುಚ್ಚರಿಸಿದರು. ಅಲ್ಲದೇ ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್‌ನಲ್ಲಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವಿದೆ ಎಂದು ಜೋಶಿ ಅವರು ದಾಖಲೆಗಳನ್ನು ಪ್ರದರ್ಶಿಸಿದ್ದಾರೆ.

ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇಖಿಸಲಾಗಿದೆ. ನನಗೆ ಸಹೋದರಿಯೇ ಇಲ್ಲ. ಈ ರೀತಿ ಉದ್ದೇಶಪೂರ್ವಕವಾಗಿ ಇಲ್ಲದ ಹೆಸರುಗಳನ್ನು ಸೇರಿಸಿರುವುದು ನೋಡಿದರೆ, ಇದೆಲ್ಲ ಬೋಗಸ್ ಎನ್ನುವುದು ನೋಡಿದರೆ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.

ತಪ್ಪು ಮಾಡಿದ್ದರೆ ಕ್ರಮ ತೆಗೆದುಕೊಳ್ಳಲಿ: ಗೋಪಾಲ್‌ ಜೋಶಿ ಮಾತ್ರವಲ್ಲ ಯಾರೇ ತಪ್ಪು ಮಾಡಿದ್ದರೂ ಕಾನೂನು ಕ್ರಮ ತೆಗೆದುಕೊಳ್ಳಲಿ ಎಂದು ಪ್ರಹ್ಲಾದ್ ಜೋಶಿ ಗುಡುಗಿದ್ದಾರೆ. ಅಲ್ಲದೇ ಈಗ ದಾಖಲಾಗಿರುವ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಮುಂದುವರಿದು ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಹ ಸಂಬಂಧವಿಲ್ಲ. ಗೋಪಾಲ್ ಜೋಶಿ ಒಂದೊಮ್ಮೆ ತಪ್ಪು ಮಾಡಿದ್ದರೆ, ಕಾನೂನಿ ಪ್ರಕಾರ ಕ್ರಮ ತೆಗೆದುಕೊಳ್ಳಲಿ ಎಂದು ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್‌ನ ಬೌದ್ಧಿಕ ದಿವಾಳಿತನ ಪ್ರದರ್ಶನ: ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಹ್ಲಾದ್‌ ಜೋಶಿ ಅವರು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಟಿಕೆಟ್ ಕೊಡ್ಸತೀನಿ ಅಂತ ಹೇಳಿ ಗೋಪಾಲ್ ಜೋಶಿ ಹಣ ತೆಗೆದುಕೊಂಡಿದ್ದಾರೋ ಇಲ್ಲವೋ ಅನ್ನೋದು ನನಗೆ ಗೊತ್ತಿಲ್ಲ. ಈ ವಿಷಯ ತನಿಖೆಯಿಂದ ಸಾಬೀತಾಗಬೇಕಿದೆ ಅಷ್ಟೇ ಎಂದಿದ್ದಾರೆ.

ಅಲ್ಲದೇ ರಾಜ್ಯ ಕಾಂಗ್ರೆಸ್‌ ಸರ್ಕಾರವು ಈ ವಿಷಯದಲ್ಲಿ ಬೌದ್ಧಿಕ ದಿವಾಳಿತನ ಪ್ರದರ್ಶನ ಮಾಡುತ್ತಿದೆ. ನನ್ನನ್ನು ಬಂಧಿಸಲೇಬೇಕು ಎನ್ನುವ ಮೂಲಕ ಕಾಂಗ್ರೆಸ್ ಮುಠ್ಠಾಳತನ ತೋರುತ್ತಿದೆ. ಸತ್ಯಾಸತ್ಯತೆ ವಿಮರ್ಶೆ ಮಾಡದೆ ಹುಂಬತನ ಪ್ರದರ್ಶಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ನನ್ನ ಕೈ ಮಸಿ ಬಳಿದುಕೊಂಡಿಲ್ಲ

ನಾನು ಕಳೆದ 25 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ಒಂದು ಕಾಲದಲ್ಲಿ ಕೋಲ್ ಎಂದರೆ ಭ್ರಷ್ಟಾಚಾರ, ಹಗರಣದ್ದೇ ಸದ್ದು ಆಗ್ತಿತ್ತು. ಆ ಖಾತೆಯಲ್ಲೇ ನಾನು ಯಾವತ್ತೂ ಕೈ ಮಸಿ ಮಾಡಿಕೊಂಡಿಲ್ಲ. ಇಂದಿಗೂ ಶುದ್ಧ ಹಸ್ತನಾಗಿದ್ದೇನೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+