ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 03 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಉಪ ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ದೂರು ನೀಡಿದ್ದವು.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. "ಚುನಾವಣಾ ಬಹಿರಂಗ ಪ್ರಚಾರದ ವೇಳೆ ಯಡಿಯೂರಪ್ಪ ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಪಕ್ಷಗಳು ದೂರು ನೀಡಿದ್ದವು. ಇದರ ಅನ್ವಯ ಎಫ್‌ಐಆರ್ ದಾಖಲು ಮಾಡಲಾಗಿದೆ" ಎಂದರು.

15 ಕ್ಷೇತ್ರದ ಉಪ ಚುನಾವಣೆ; ಸ್ಪಷ್ಟನೆ ನೀಡಿದ ಜೆಡಿಎಸ್ 15 ಕ್ಷೇತ್ರದ ಉಪ ಚುನಾವಣೆ; ಸ್ಪಷ್ಟನೆ ನೀಡಿದ ಜೆಡಿಎಸ್

" ಲಿಂಗಾಯತ ಮತಗಳು ಬೇರೆ ಕಡೆ ಹೋಗಬಾರದು" ಎಂದು ಯಡಿಯೂರಪ್ಪ ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಈ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ.

ತಾನು ಮುಖ್ಯಮಂತ್ರಿಯಾಗಲು ರಮೇಶ್ ಕಾರಣ ಎಂದು ಹೊಗಳಿದ ಯಡಿಯೂರಪ್ಪತಾನು ಮುಖ್ಯಮಂತ್ರಿಯಾಗಲು ರಮೇಶ್ ಕಾರಣ ಎಂದು ಹೊಗಳಿದ ಯಡಿಯೂರಪ್ಪ

ಗೋಕಾಕ್ ಸೇರಿದಂತೆ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ.

ನಮ್ಮ ಸರ್ಕಾರಕ್ಕೆ ಯಾರ ಬೆಂಬಲವೂ ಬೇಕಿಲ್ಲ: ಯಡಿಯೂರಪ್ಪನಮ್ಮ ಸರ್ಕಾರಕ್ಕೆ ಯಾರ ಬೆಂಬಲವೂ ಬೇಕಿಲ್ಲ: ಯಡಿಯೂರಪ್ಪ

ಯಡಿಯೂರಪ್ಪ ಹೇಳಿದ್ದೇನು?

ಯಡಿಯೂರಪ್ಪ ಹೇಳಿದ್ದೇನು?

ಗೋಕಾಕ್‌ನಲ್ಲಿನ ವಾಲ್ಮೀಕಿ ಕ್ರೀಡಾಂಗಣದಲ್ಲಿ ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ಯಡಿಯೂರಪ್ಪ, "ಈ ಸರ್ಕಾರ ಪೂರ್ಣಾವಧಿವರೆಗೆ ನಡೆಯಬೇಕಾದರೆ ನನ್ನ ವೀರಶೈವ-ಲಿಂಗಾಯತ ಸಮುದಾಯದವರ ಒಂದೂ ಮತ ಬೇರೆ ಪಕ್ಷಗಳಿಗೆ ಹೋಗಬಾರದು. ಯಾವುದೇ ವ್ಯಾಮೋಹಕ್ಕೆ ಬಲಿಯಾಗದೇ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು" ಎಂದು ಮನವಿ ಮಾಡಿದ್ದರು.

ಋಣ ತೀರಿಸಬೇಕಾಗಿದೆ

ಋಣ ತೀರಿಸಬೇಕಾಗಿದೆ

"ರಮೇಶ್ ಜಾರಕಿಹೊಳಿ ಅವರು 16 ಜನ ಅನರ್ಹ ಶಾಸಕರನ್ನು ಕಟ್ಟಿಕೊಂಡು ಹೋರಾಟ ಮಾಡದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಜಗದೀಶ್ ಶೆಟ್ಟರ್, ಶಶಿಕಲಾ ಜೊಲ್ಲೆ ಅವರು ವಿಧಾನಸೌಧದ 3ನೇ ಮಹಡಿಯಲ್ಲಿ ಕೂರಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ನಾವು ಜೀವನ ಪರ್ಯಂತ ಮರೆಯಲು ಸಾಧ್ಯವಿಲ್ಲ. ಅವರನ್ನು ಗೆಲ್ಲಿಸುವ ಮೂಲಕ ಋಣ ತೀರಿಸಬೇಕಾಗಿದೆ" ಎಂದು ಯಡಿಯೂರಪ್ಪ ಹೇಳಿದ್ದರು.

ಪ್ರತಿಪಕ್ಷಗಳ ದೂರು

ಪ್ರತಿಪಕ್ಷಗಳ ದೂರು

"ನನ್ನ ವೀರಶೈವ-ಲಿಂಗಾಯತ ಸಮುದಾಯದವರ ಒಂದೂ ಮತ ಬೇರೆ ಪಕ್ಷಗಳಿಗೆ ಹೋಗಬಾರದು" ಎಂದು ಹೇಳಿರುವ ಯಡಿಯೂರಪ್ಪ ಒಂದು ಸಮುದಾಯದ ಓಲೈಕೆ ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು. ದೂರಿನ ಅನ್ವಯ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ

ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ

ಡಿಸೆಂಬರ್ 5ರಂದು ಗೋಕಾಕ್ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್‌ನಿಂದ ಲಖನ್ ಜಾರಕಿಹೊಳಿ ಮತ್ತು ಜೆಡಿಎಸ್‌ನಿಂದ ಅಶೋಕ್ ಪೂಜಾರಿ ಕಣದಲ್ಲಿದ್ದಾರೆ. ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ.

English summary
Election commission has registered a FIR against Karnataka chief minister B. S. Yediyurappa for violating model code of conduct. 15 seat by elections will be held on December 5, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X