Waqf: ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ: ಚಂದ್ರಶೇಖರನಾಥ ಸ್ವಾಮಿಗಳ ವಿರುದ್ಧ ಎಫ್‌ಐಆರ್!
ಬೆಂಗಳೂರು ನವೆಂಬರ್ 29: ಮುಸ್ಲಿಂ ಸಮುದಾಯದ ಮತದಾನದ ಹಕ್ಕು ರದ್ದುಪಡಿಸಲು ಕಾನೂನು ಜಾರಿಗೆ ತರಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸ್ವಾಮೀಜಿ ಹೇಳಿಕೆ ಪ್ರಚೋದನಕಾರಿಯಾಗಿದ್ದು, ಕೋಮು ಸೌಹಾರ್ದತೆಗೆ ಧಕ್ಕೆ ತರಬಹುದು ಎಂದು ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 299ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಸ್ವಾಮೀಜಿ ಹೇಳಿದ್ದೇನು?
ಕಳೆದ ಮಂಗಳವಾರ ಫ್ರೀಡಂ ಪಾರ್ಕ್‌ನಲ್ಲಿ ವಕ್ಫ್ ಮಂಡಳಿಯಿಂದ ರೈತರ ಭೂಮಿಗಳ ಕಬಳಿಕೆ ಆರೋಪದ ವಿಚಾರವಾಗಿ ಭಾರತೀಯ ಕಿಸಾನ್ ಸಂಘ (ಬಿಕೆಎಸ್), ಕರ್ನಾಟಕ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರೈತ ಘರ್ಜನೆ ರ್ಯಾಲಿಯಲ್ಲಿ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಈ ಹೇಳಿಕೆ ನೀಡಿದ್ದರು. ಬಳಿಕ ಅವರ ಈ ಹೇಳಿಕೆಯು ವಿವಾದಕ್ಕೆ ಕಾರಣವಾಗಿತ್ತು.

ಹೇಳಿಕೆ ಬಳಿಕಿ ಸ್ವಾಮೀಜಿ ಕ್ಷಮೆಯಾಚನೆ
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ವಿಷಾದ ವ್ಯಕ್ತಪಡಿಸಿದ ಸ್ವಾಮೀಜಿಯವರು, 'ಮುಸ್ಲಿಮರು ಕೂಡ ಈ ದೇಶದ ಪ್ರಜೆಗಳು. ಎಲ್ಲರಂತೆ ಅವರಿಗೂ ಮತದಾನದ ಹಕ್ಕಿದೆ. ನಿನ್ನೆಯ ನನ್ನ ಹೇಳಿಕೆಯಿಂದ ನಮ್ಮ ಮುಸ್ಲಿಂ ಭಾಧವರಿಗೆ ನೋವಾಗಿದ್ದರೆ, ಅದಕ್ಕಾಗಿ ನಾನು ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ' ಎಂದಿದ್ದರು.
'ತಮ್ಮ ಹೇಳಿಕೆ ಯಾವುದೇ ಸಮುದಾಯವನ್ನು ಗುರಿಯಾಗಿಸುವ ಉದ್ದೇಶ ಹೊಂದಿಲ್ಲ. ಆದರೆ ವಕ್ಫ್ ಆಸ್ತಿಗಳ ದುರುಪಯೋಗವನ್ನು ಪರಿಹರಿಸುವ ಗುರಿ ಹೊಂದಿದೆ' ಎಂದು ಸ್ಪಷ್ಟಪಡಿಸಿರುವ ಸ್ವಾಮೀಜಿ, ' ಒಕ್ಕಲಿಗ ಸಮುದಾಯ ಎಲ್ಲರನ್ನೂ ಒಳಗೊಳ್ಳುವ ಮತ್ತು ಸಾಮರಸ್ಯದ ಸ್ವಭಾವಕ್ಕೆ ಒತ್ತು ನೀಡುತ್ತದೆ. ನಮ್ಮ ಮಠವು ಐತಿಹಾಸಿಕವಾಗಿ ಮುಸ್ಲಿಮರು ಮತ್ತು ಇತರ ಧರ್ಮಗಳೊಂದಿಗೆ ಸೌಹಾರ್ದ ಸಂಬಂಧ ಹೊಂದಿದೆ' ಎಂದು ಹೇಳಿದ್ದರು.
'ನಾವು ಯಾವಾಗಲೂ ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ಕಾಣುತ್ತೇವೆ. ಮುಸ್ಲಿಮರು ಅಗಾಗ್ಗೆ ನಮ್ಮ ಮಠಕ್ಕೆ ಭೇಟಿ ನೀಡುತ್ತಾರೆ. ಮತ್ತು ಅವರ ಸಾಮಾಜಿಕ ಕಾರ್ಯಗಳಲ್ಲಿ ನಾವು ಸಕ್ರಿಯವಾಗಿ ಭಾಗವಹಿಸುತ್ತೇವೆ. ಯಾವುದೇ ಸಮುದಾಯದ ಬಗ್ಗೆ ಸಹಿಷ್ಣತೆ ಇಲ್ಲ' ಎಂದ ಸ್ಪಷ್ಟಪಡಿಸಿದ್ದರು.
ವಕ್ಫ್ ವಿವಾದ
ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ವಿಜಯಪುರ ಜಿಲ್ಲೆಯ ರೈತರ ಜಮೀನು ಒಡೆತನಕ್ಕೆ ಹಕ್ಕು ಮಂಡಿಸಿದ ನಂತರ ಬಿಜೆಪಿ ಮತ್ತು ಆಡಳಿತಾರೂಡ ಕಾಂಗ್ರೆಸ್ ಪಕ್ಷಗಳ ನಡುವೆ ಮಾತಿನ ಸಮರವೇ ನಡೆಯುತ್ತಿದೆ. ವಿಜಯಪುರ ಜಿಲ್ಲಾ ವಕ್ಫ್ ಬೋರ್ಡ್ ನೀಡಿರುವ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ 14,201 ಎಕರೆ ಜಮೀನು ವಕ್ಪ್ ಸೇರಿದೆ. ಈ ಪೈಕಿ 1354 ಎಕರೆ ಒತ್ತುವರಿಯಾಗಿದೆ. ಉಳಿದ ಜಮೀನು ವಕ್ಫ್ ಇನ್ಟಿಟ್ಯೂಶನ್ಸ್, ಇನಾಮ್ ಆಬ್ಲಿಷನ್ಸ್, ಲ್ಯಾಂಡ್ ರಿಫಾರ್ಮ್ ಹಾಗೂ ವಕ್ಪ್ ಆ್ಯಕ್ಟ್ ವಶದಲ್ಲಿದೆ ಎಂದು ತಿಳಿಸಿದೆ.
ಆದರೆ ಜಿಲ್ಲಾ ವಕ್ಫ್ ಬೋರ್ಡ್ ಆಸ್ತಿಯಲ್ಲಿ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿನ 1200 ಎಕರೆ ಜಮೀನು ಶಾ ಅಮೀನುದ್ದೀನ್ ದರ್ಗಾಕ್ಕೆ ಸೇರಿದ್ದು ಎಂದು ಹಲವು ತಾಲೂಕಿನ ರೈತರಿಗೆ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಆದರೆ ಹೊನವಾಡ ಗ್ರಾಮದಲ್ಲಿ ಶಾ ಅಮೀನುದ್ದೀನ್ ದರ್ಗಾವೇ ಇಲ್ಲ. ಆದರೂ 13 ತಾಲೂಕಿನ ರೈತರಿಗೆ "ನಿಮ್ಮ ಜಮೀನುಗಳು ವಕ್ಫ್ ಬೋರ್ಡ್ ಆಸ್ತಿಯೆಂದು" ಆಯಾ ತಹಶೀಲ್ದಾರ್ ಕಚೇರಿಯಿಂದ ತಿಳವಳಿಕೆ ಪತ್ರ ನೀಡಲಾಗಿದೆ. ಇದಲ್ಲದೇ, ಇನ್ನೂ ನೂರಾರು ರೈತರಿಗೆ ನೊಟೀಸ್ ಜಾರಿ ಮಾಡಲು ತಹಶೀಲ್ದಾರರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications