Get Updates
Get notified of breaking news, exclusive insights, and must-see stories!

Rocking Star Yash: ಯಶ್ ಚಿತ್ರಕ್ಕೆ ಸಂಕಷ್ಟ; ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲು: ಖಂಡ್ರೆ ಹೇಳಿದ್ದೇನು?

ಬೆಂಗಳೂರು, ನವೆಂಬರ್‌ 12: ಯಶ್ ನಟನೆಯ 'ಟಾಕ್ಸಿಕ್' ಸಿನಿಮಾಕೆ ಕಾನೂನು ತೊಡಕು ಎದುರಾಗಿದೆ. ಬೆಂಗಳೂರಿನ ಎಚ್​ಎಂಟಿ ಕಾರ್ಖಾನೆ ಬಳಿ ಬೃಹತ್ ಸೆಟ್ ನಿರ್ಮಾಣ ಮಾಡಿ ತಿಂಗಳುಗಳ ಕಾಲ ಸಿನಿಮಾದ ಶೂಟಿಂಗ್ ಮಾಡಲಾಗಿತ್ತು. ಆದರೆ ಇತ್ತೀಚೆಗೆ 'ಟಾಕ್ಸಿಕ್' ಸಿನಿಮಾ ತಂಡ, ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದು ನಾಶ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಾತನಾಡಿ, ಪೀಣ್ಯ ಪ್ಲಾಂಟೇಷನ್ ನಲ್ಲಿ ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಚಿತ್ರೀಕರಣ ನಡೆಯುತ್ತಿರುವ ಸ್ಥಳದಲ್ಲಿ ಮರಗಳ ಅಕ್ರಮ ಕಡಿತಲೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಮೂರು ಸಂಸ್ಥೆಗಳ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

FIR against Yash s Toxic movie Production house

ತಾವು ಎಚ್.ಎಂ.ಟಿ. ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಎಚ್.ಎಂ.ಟಿ. ಕೆನರಾ ಬ್ಯಾಂಕ್ ಗೆ ಮಾರಾಟ ಮಾಡಿರುವ ಭೂಮಿಯನ್ನು ಕನ್ನಡ ಚಿತ್ರವೊಂದರ ಚಿತ್ರೀಕರಣಕ್ಕಾಗಿ ಸೆಟ್ ಹಾಕಲು ಬಾಡಿಗೆಗೆ ನೀಡಲಾಗಿತ್ತು, ಇಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೆ ಎಂದು ತಿಳಿಸಿದರು.

ಪ್ರಾಥಮಿಕ ತನಿಖೆ ಕೈಗೊಂಡ ಅರಣ್ಯ ಇಲಾಖೆ ಅಧಿಕಾರಿಗಳು, ಬಾಹ್ಯಾಕಾಶ ಚಿತ್ರಗಳ ನೆರವಿನಿಂದ ಆ ಜಾಗದಲ್ಲಿ ಮರಗಿಡಗಳಿತ್ತು, ಅವುಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂಬುದನ್ನು ಖಚಿತಪಡಿಸಿಕೊಂಡು, ಬೆಂಗಳೂರಿನ 8ನೇ ಎಸಿಜೆಎಂ ನ್ಯಾಯಾಲಯದ ಪೂರ್ವಾನುಮತಿ ಪಡೆದು ಕೆ.ವಿ.ಎನ್. ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಎಲ್ಎಲ್.ಪಿ, ಜನರಲ್ ಮ್ಯಾನೇಜರ್ ಕೆನರಾಬ್ಯಾಂಕ್ ಮತ್ತು ಜನರಲ್ ಮ್ಯಾನೇಜರ್ ಎಚ್.ಎಂ.ಟಿ. ಲಿಮಿಟೆಡ್ ಇವರುಗಳ ವಿರುದ್ಧ ಎಫ್.ಐ.ಆರ್. ದಾಖಲಿಸಿದ್ದಾರೆ ಎಂದು ತಿಳಿಸಿದರು.

ಎಚ್.ಎಂ.ಟಿ. ಕಾರ್ಖಾನೆ ಕಟ್ಟಡ ನಿರ್ಮಿಸಿದ್ದ ಜಾಗದಲ್ಲಿ ಮತ್ತು ವಾಯುಪಡೆಯ ವಶದಲ್ಲಿರುವ ಸುಮಾರು 280ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಇಂದಿಗೂ ಮರ ಗಿಡಗಳಿದ್ದು, ದಟ್ಟ ಅರಣ್ಯದಂತಿದೆ. ಈ ಜಮೀನು ಇಂದಿಗೂ ಅರಣ್ಯವಾಗಿದ್ದು, ಅರಣ್ಯ ಇಲಾಖೆ ಪರವಾಗಿ ನ್ಯಾಯಾಲಯ ತೀರ್ಪು ನೀಡುವ ವಿಶ್ವಾಸವಿದೆ, ಇಲ್ಲಿ ಲಾಲ್ ಬಾಗ್, ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಸ್ಯೋಧ್ಯಾನ ನಿರ್ಮಿಸುವ ಆಶಯ ತಮ್ಮದಾಗಿದೆ ಎಂದರು.

ಪ್ರಕೃತಿ, ಪರಿಸರದ ಬಗ್ಗೆ ಕಾಳಜಿ ಇರುವ ಎಲ್ಲರೂ ಅರಣ್ಯ ಇಲಾಖೆಯ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳೂ ಅರಣ್ಯ ಇಲಾಖೆ ನಿರ್ಧಾರದ ಪರವಾಗಿದ್ದಾರೆ. ಜನಾಭಿಪ್ರಾಯವೂ ನಮ್ಮ ಪರವಾಗಿಯೇ ಇದೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

ರಾಜ್ಯದ ಜನತೆ ಸರ್ಕಾರದ ಪರವಾಗಿದ್ದು, ನಾಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದರು. ಇನ್ನೂ ರಾಜ್ಯದಲ್ಲಿ ಬಿಜೆಪಿ ಕಾರ್ಯಕಾಲದಲ್ಲಿ ಹಲವು ಹಗರಣಗಳು ನಡೆದಿವೆ. ಇವುಗಳಲ್ಲಿ ಕೆ.ಕೆ.ಆರ್.ಡಿ.ಬಿ. ಹಗರಣವೂ ಒಂದು. ಈ ಬಗ್ಗೆ ಸಚಿವ ಸಂಪುಟದಲ್ಲೂ ಚರ್ಚೆ ಆಗಿದೆ. ತನಿಖೆಯೂ ನಡೆಯುತ್ತಿದೆ. ಕಾನೂನು ರೀತ್ಯ ಕ್ರಮ ಆಗುತ್ತದೆ ಎಂದರು.

ಬಂಡೀಪುರ ಅರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿಯ ವೇಳೆ ಸಂಚಾರಕ್ಕೆ ಅನುಮತಿ ನೀಡುವ ಕುರಿತಂತೆ ಉಪ ಮುಖ್ಯಮಂತ್ರಿಯವರು ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಕುರಿತಂತೆ ನ್ಯಾಯಾಲಯದ ತೀರ್ಪು ಇದೆ. ಈ ಎಲ್ಲ ಅಂಶಗಳ ಬಗ್ಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+