ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮ, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಎಫ್ಐಆರ್ ದಾಖಲು

ಬೆಳಗಾವಿ, ಡಿಸೆಂಬರ್‌ 5: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮ, ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸೋಮವಾರ ಸಂಜೆ ಬಿಜೆಪಿ ಮುಖಂಡ ಫುಪಿಂದರ್ ಸಿಂಗ್ ಲೂಧಾರ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಬೆಳಗಾವಿ ಪೊಲೀಸರು ಮಂಗಳವಾರ ಎಫ್ ಐಆರ್ ದಾಖಲಿಸಿದ್ದಾರೆ.

FIR filed against Lakshmi Hebbalkar brother, MLC Channaraj Hattiholi

ಬೆಳಗಾವಿಯ ಜಯನಗರ ಹಿಂಡಲಗಾ ನಿವಾಸದ ಬಳಿ ಫುಪಿಂದರ್ ಸಿಂಗ್ ಲೂಧಾರ್ ಅಲಿಯಾಸ್ ಪೃಥ್ವಿ ಸಿಂಗ್ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಗಿತ್ತು. ಆದರೆ ಚನ್ನರಾಜ್ ಹಟ್ಟಿಹೊಳಿ ಅವರಿಗೂ ಘಟನೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸಚಿವೆ ಲಕ್ಷಮ್ಈ ಹೆಬ್ಬಾಳ್ಕರ್ ಹಾಗೂ ಆಕೆಯ ಸಹೋದರ ಹೇಳಿದ್ದಾರೆ.

ಫುಪಿಂದರ್ ಸಿಂಗ್ ಲೂಧಾರ್ ಅವರು ಎಂಎಲ್‌ಸಿ ಹಟ್ಟಿಹೊಳಿ, ಅವರ ಇಬ್ಬರು ಗನ್‌ಮನ್‌ಗಳು, ಅವರ ಸಹಾಯಕ ಸದಾಮ್ ಮತ್ತು ಇನ್ನೊಬ್ಬ ಸಹಾಯಕ ಸುಜಿತ್ ಜಾಧವ್ ಅವರು ಆರೋಪಿಸಿದ್ದಾರೆ. ದೂರಿನ ಆಧಾರದ ಮೇಲೆ ಮೂವರು ಮತ್ತು ಇಬ್ಬರು ಅನಾಮಧೇಯ ಬಂದೂಕುಧಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೃಥ್ವಿ ಸಿಂಗ್ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಆಪ್ತರು. ಘಟನೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದರು. ವಿಜಯೇಂದ್ರ ಸಿಂಗ್ ಅವರ ಮೇಲೆ ಹಟ್ಟಿಹೊಳಿ ಮತ್ತು ಅವರ ಸಹಚರರು ಘೋರ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಈ ಘಟನೆ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ದಲಿತ ಮುಖಂಡ, ಬಿಜೆಪಿ ಎಸ್‍ಸಿ ಮೋರ್ಚಾದ ಮುಖಂಡ ಪೃಥ್ವಿ ಸಿಂಗ್ ಅವರ ಮನೆಯ ಬಳಿ ಹಲ್ಲೆ ನಡೆದಿದೆ. ಈ ಸಂಬಂಧ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ, ಇತರ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ಇವತ್ತು ರಾತ್ರಿಯೇ ಅವರನ್ನು ಬಂಧಿಸಿ ಎಂದು ಒತ್ತಾಯಿಸಿದ್ದರು.

ಯಾವ ಕಾರಣಕ್ಕಾಗಿ ಹೀಗಾಗಿದೆ ಎಂಬ ಪ್ರಶ್ನೆ ಇದಲ್ಲ. ಆಡಳಿತ ಪಕ್ಷದ ವಿಧಾನಪರಿಷತ್ ಸದಸ್ಯ, ಹಾಲಿ ಸಚಿವರ ಸಹೋದರನಿಂದ ಮಾರಣಾಂತಿಕ ಹಲ್ಲೆ ನಡೆದರೆ ಹೇಗೆ ಎಂದು ಅವರು ಪ್ರಶ್ನಿಸಿದರು. ಗುಲ್ಬರ್ಗದಲ್ಲೂ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ನಡೆದಿತ್ತು. ಇಂಥ ಘಟನೆ ಇಲ್ಲಿ ಮರುಕಳಿಸಿದೆ ಎಂದು ಆಕ್ಷೇಪಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+