ವೆಬ್‌ಸೈಟ್‌ನಲ್ಲಿ ಕಾಣದ ಎಫ್‌ಐಆರ್ ಕಾಪಿ; ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಅ.19: ಯಾವುದೇ ಅಪರಾಧ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾದರೂ, ಆದಾದ ನಂತರ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಅಪ್ ಲೋಡ್ ಮಾಡಲೇಬೇಕು. ಇದು ಎಲ್ಲ ತನಿಖಾ ಸಂಸ್ಥೆಗಳಿಗೂ ಅನ್ವಯವಾಗುವ ನಿಯಮ. ಈ ಕುರಿತು ಸುಪ್ರೀಂಕೋರ್ಟ್ ಆದೇಶವೂ ಸ್ಪಷ್ಟವಾಗಿದೆ.

ಆದರೂ ಲೋಕಾಯುಕ್ತ ಸಾಂವಿಧಾನಿಕ ಸಂಸ್ಥೆಯೇ ಈ ನಿಯಮ ಪಾಲಿಸುತ್ತಿಲ್ಲ. ಹಾಗಾಗಿ ಆ ಕುರಿತು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಹೈಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿದೆ.

ವಕೀಲ ಎಸ್. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕಾಯುಕ್ತ ಎಡಿಜಿಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

FIR not uploaded in the website of Lokayukta: HC ordered notice to state and lokayukta

ಅರ್ಜಿದಾರರು ವಾದ ಮಂಡಿಸಿ, ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಸಂಬಂಧಪಟ್ಟ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು 2016ರಲ್ಲಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇದನ್ನು ಸಿಬಿಐ ಸೇರಿದಂತೆ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. ಸುಪ್ರೀಂಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅದನ್ನು ಎಸಿಬಿ ಪಾಲಿಸುತ್ತಾ ಬಂದಿತ್ತು ಎಂದರು.

ಆದರೆ ಎಸಿಬಿಯನ್ನು ರದ್ದುಗೊಳಿಸಿ 2022ರ ಆ.11ರಂದು ತೀರ್ಪು ನೀಡಿದ ಹೈಕೋರ್ಟ್, ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಿ ಆದೇಶಿಸಿದೆ. ಆದರೆ, ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲಿಸುತ್ತಿಲ್ಲ. ಇದರಿಂದ ಮುಂದಿನ ಕಾನೂನು ಪ್ರಕ್ರಿಯೆಗೆ ದೂರುದಾರರು, ಕಕ್ಷಿದಾರರು ಮತ್ತು ವಕೀಲರಿಗೆ ಸಾಕಷ್ಟು ಅನಾನೂಕೂಲವಾಗುತ್ತಿದೆ. ಈ ಬಗ್ಗೆ 2022ರ ಸೆ.19ರಂದು ದೂರು ಕೊಟ್ಟಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ. ಆದ್ದರಿಂದ ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+