ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್. ಅಶ್ವತ್ಥ್ ನಾರಾಯಣ ವಿರುದ್ಧ FIR!

|
Google Oneindia Kannada News

ಬೆಂಗಳೂರು, ಮೇ. 28: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ವಿರುದ್ಧ ಮಂಡ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಶ್ವತ್ ನಾರಾಯಣ ಜತೆಗೆ ಬಿಜೆಪಿ ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ರವಿಶಂಕರ್ ಆಚಾರಿ ಕೂಡ ಆರೋಪಿಯಾಗಿದ್ದಾರೆ.

ಸಮಾಜ ಕಲ್ಯಾಣಿ ಇಲಾಖೆಯ ಅಧಿಕಾರಿ ಮಹಮದ್ದಿ ಶೇಯಿಖಾ ನೀಡಿದ ದೂರಿನ ಅನ್ವಯ ಮಂಡ್ಯ ನಗರ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ ಹಾಗೂ ಬಿಜೆಪಿ ಪದವೀಧರ ಕ್ಷೇತ್ರದ ಅಭ್ಯರ್ಥಿ ರವಿಶಂಕರ್ ವಿರುದ್ಧ ಕೇಸು ದಾಖಲಾಗಿದೆ. ಐಪಿಸಿ ಸೆಕ್ಷನ್ 171c, 171F ಹಾಗೂ ಸಾರ್ವನಿಕ ಪ್ರತಿನಿಧಿ ಕಾಯ್ದೆ ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ.

ನೀತಿ ಸಂಹಿತೆ ಉಲ್ಲಂಘನೆ:

ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿರುವ ಮಂಡ್ಯ ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರು ಮಂಡ್ಯ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.

FIR registered against Higher Education Minister CN Aswanth Narayana

ಮೇ. 12 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಮಂಡ್ಯದ ವಿಮ್ಸ್, ಮಹಿಳಾ ಸರ್ಕಾರಿ ಕಾಲೇಜು, ಪಿಇಎಸ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಸಭೆ ಆಯೋಜಿಸಿದ್ದಾರೆ. ಸಚಿವರಾಗಿ ಸಭೆ ನೇತೃತ್ವ ವಹಿಸುವ ಜತೆಗೆ ಈ ಸಭೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಬಿಜೆಪಿ ಅಭ್ಯರ್ಥಿ ಪಾಲ್ಗೊಂಡು ಮತದಾರರ ಮೇಲೆ ಪ್ರಭಾವ ಬೀರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

ಈ ಕುರಿತು ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ನೀಡಿದ ದೂರಿನ ಮೇರೆಗೆ ಸಿ.ಎನ್. ಅಶ್ವತ್ಥ್ ನಾರಾಯಣ್ ಕಚೇರಿಯಿಂದ ಹೊರಡಿಸಲಾದ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿಯಲ್ಲಿ ಚುನಾವಣಾ ಪ್ರಚಾರ ಪ್ರಕ್ರಿಯೆ ಅಳವಡಿಸಿ ಮಾಡಿರುವುದು ಕಂಡು ಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದ ಮಾದರಿ ನೀತಿ ಸಂಹಿತೆ ತಂಡದ ಮುಖಸ್ಥರು ಮಂಡ್ಯ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದರು. ವರದಿ ಜತೆಗೆ ದಾಖಲೆಗಳನ್ನು ಸಲ್ಲಿಸಿದ್ದರು.

ಮೇ. 16 ರಂದು ಮಂಡ್ಯದ ಪಿಇಎಸ್ ಶಿಕ್ಷಣ ಸಂಸ್ಥೆ ಸೇರಿದಂತೆ ಹಲವು ಕಾಲೇಜುಗಳಲ್ಲಿ ಸಭೆ ಆಯೋಜಿಸಿ ಅಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವ ಮೂಲಕ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

FIR registered against Higher Education Minister CN Aswanth Narayana

ಈ ಕುರಿತು ಸ್ಪಷ್ಟನೆ ನೀಡಿದ್ದ ಮಂಡ್ಯ ವಿಮ್ಸ್, ಮಹಿಳಾ ಸರ್ಕಾರಿ ಕಾಲೇಜು, ಮಾಂಡವ್ಯ ಸಮೂಹ ಸಂಸ್ಥೆ ಸಂಯೋಜಕರು, "ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಮೈಸೂರಿಗೆ ಹೋಗುವ ಮಾರ್ಗದಲ್ಲಿ ಕಾಲೇಜು ಆಡಳಿತ ಮಂಡಳಿ ಮುಖ್ಯಸ್ಥರನ್ನು ಭೇಟಿ ಮಾಡುವ ಸಲುವಾಗಿ ಬಂದಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಇತರೆ ವಿಷಯಗಳ ಬಗ್ಗೆ ಸಂವಾದ ನಡೆಸಿದ್ದಾರೆ. ಪದವೀಧರ ಚುನಾವಣೆ ಸಂಬಂಧ ಯಾವುದೇ ಮತ ಯಾಚನೆ ಮಾಡಿಲ್ಲ," ಎಂದು ಹೇಳಿಕೆ ನೀಡಿದ್ದರು.

ಆದರೆ, ಮಾದರಿ ನೀತಿ ಸಂಹಿತೆ ತಂಡ ಪ್ರಾಥಮಿಕ ವಿಚಾರಣೆ ನಡೆಸಿದಾಗ ಈ ಕೆಳಕಂಡ ಅಂಶಗಳು ಬೆಳಕಿಗೆ ಬಂದಿದ್ದವು. ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಮಂಡ್ಯದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದ್ದರು. ತಮ್ಮ ಖಾಸಗಿ ಕಾರಿನಲ್ಲಿ ಭೇಟಿ ನೀಡಿದ್ದಾರೆ. ಅಶ್ವತ್ಥ ನಾರಾಯಣ ಅವರ ತಾತ್ಕಾಲಿಕ ಪ್ರವಾಸ ಪಟ್ಟಿಯಲ್ಲಿ ಮತದಾರರ ಭೇಟಿ ಮತ್ತು ಸಂವಾದದ ಬಗ್ಗೆ ಉಲ್ಲೇಖಿಸಿದ್ದಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ನೀಡಿದ ವರದಿ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

English summary
Violation of Electoral Code of Conduct in Mandya. FIR has been filed again Higher Education Minister CN Ashwath Narayan and BJP candidate Ravi Shankar know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X