ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಐದು ಅಂತಸ್ತಿನ ಕಟ್ಟಡ ಸಂಪೂರ್ಣ ಭಸ್ಮ!
ಬೆಂಗಳೂರು, ನವೆಂಬರ್ 13: ಬೆಂಗಳೂರಿನಲ್ಲಿ ಮತ್ತೊಂದು ಅಗ್ನ ಅವಘಡ ಸಂಭವಿಸಿದ್ದು, ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ಘಟನೆ ಸಂಭವಿಸಿದ್ದು, ಅಗ್ನಿ ದುರಂತದಿಂದ ಐದು ಅಂತಸ್ತಿನ ಕಟ್ಟಡ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ.
ಹೌದು, ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ತಡ ರಾತ್ರಿ 12 ಗಂಟೆಗೆ ಈ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಗುತಿಯಾಗಿದೆ.

ಸದ್ಯ ಭಾರೀ ಅನಾಹುತ ತಪ್ಪಿದ್ದು ಕಟ್ಟಡದಲ್ಲಿ ಸಿಲುಕಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೆಕ್ಯೂರಿಟೀಸ್ಗಳನ್ನ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಫರ್ನಿಚರ್ ಶಾಪ್, ಕೋಚಿಂಗ್ ಸೆಂಟರ್, ಐಟಿ ಕಂಪನಿ ಸಂಪೂರ್ಣ ಸುಟ್ಟು ಕರಕಲಾಗಿದೆ. ನೆಲ ಹಾಗೂ ಮೊದಲ ಮಹಡಿಯಲ್ಲಿ ಸ್ಟ್ಯಾನ್ಲಿ ಫರ್ನಿಚರ್ಸ್, ಎರಡನೇ ಮಹಡಿಯಲ್ಲಿ ಕಾಮೆಡ್ ಕೋಂಚಿಂಗ್ ಸೆಂಟರ್ ಇದೆ. ಅಲ್ಲದೇ ಮೂರು ಹಾಗೂ ನಾಲ್ಕನೇ ನೇ ಮಹಡಿಯಲ್ಲಿ ಬ್ರೇಕ್ಸ್ ಕಂಟ್ರೋಲ್ಸ್, ಸಾಫ್ಟ್‌ವೇರ್ ಕಂಪನಿ ಇತ್ತು. ಇಡೀ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನೂ ಅಗ್ನಿ ಅವಘಡದ ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.












Click it and Unblock the Notifications