ಶಾಲಾ ಮಕ್ಕಳ ಸುರಕ್ಷತೆ ವಿಚಾರದಲ್ಲಿ ಹೈಕೋರ್ಟ್ ಸಲಹೆ ಏನು?

ಬೆಂಗಳೂರು, ಅಕ್ಟೋಬರ್ 06; ಶಾಲೆಗಳನ್ನು ವ್ಯವಹಾರ ಕೇಂದ್ರವನ್ನಾಗಿಸಲು ಸಾಧ್ಯವಿಲ್ಲ. ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಪಡೆಯದೆ ಶಾಲೆ ನಡೆಸುವ ಮೂಲಕ ಸಣ್ಣ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುವುದಕ್ಕೆ ಬಿಡವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಖಾಸಗಿ ಶಾಲೆ ವಿರುದ್ಧ ಗುಡುಗಿದೆ.

ಇದು ಇತರೆ ಶಾಲೆಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. ಅಲ್ಲದೆ, ಇಂತಹ ಶಾಲೆಗಳಿಗೆ ಇನ್ನು ಮುಂದೆ ಅವಕಾಶ ನೀಡಲಾಗುವುದಿಲ್ಲ ಎಂದು ಖಾಸಗಿ ಶಾಲೆಯೊಂದರ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದೆ. ಖಾಸಗಿ ಶಾಲೆಯೊಂದು ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.

Fire Safety Certificate Dont Play With Safety Of Children Says HC

ಈ ರೀತಿಯ ಬೆಳವಣಿಗೆಯಲ್ಲಿ ನ್ಯಾಯಾಲಯವನ್ನು ಮಧ್ಯಪ್ರವೇಶಿಸುವಂತೆ ಮುಂದಾಗುತ್ತಿರುವುದು ಸಹಿಸಲಾಗದು ಎಂದು ಖಾಸಗಿ ಶಾಲೆಯ ಆಡಳಿತ ಮಂಡಳಿಯ ಕ್ರಮವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಇಂತಹ ಶಾಲೆಗೆ ಯಾವುದೇ ಸಾರ್ವಜನಿಕರು ತಮ್ಮ ಮಕ್ಕಳನ್ನು ಕಳುಹಿಸುವುದಕ್ಕೆ ಮುಂದಾಗುತ್ತಾರೆ? ಎಂದೂ ಸಹ ಖಾರವಾಗಿ ಪ್ರಶ್ನೆ ಮಾಡಿದೆ.

ಸರ್ಕಾರದ ಕ್ರಮ ಸರಿ ಇದೆ; ಶಾಲಾ ಕಟ್ಟಡವಿದ್ದರೂ ಮಕ್ಕಳಿಗೆ ಸರಿಯಾದ ಕೊಠಡಿ ವ್ಯವಸ್ಥೆ ಇಲ್ಲ. ಶಾಲೆಯಲ್ಲಿ ಕ್ರೀಡಾಂಗಣ, ಗ್ರಂಥಾಲಯ, ಪ್ರಯೋಗಾಲಯ ಹಾಗೂ ಕಾಂಪೌಂಡ್ ಇಲ್ಲ. ಹೀಗಿರುವಾಗಿ ಹೇಗೆ ಶಾಲೆ ನಡೆಸುವುದಕ್ಕೆ ಸಾಧ್ಯ? ಎಂದು ಪ್ರಶ್ನಿಸಿರುವ ಹೈಕೋರ್ಟ್, ಇದೇ ಕಾರಣದಿಂದ ಶಾಲೆ ಮೇಲ್ದರ್ಜೆಗೇರಿಸಲು ಅವಕಾಶ ನೀಡಿಲ್ಲ. ಸರ್ಕಾರದ ಪ್ರಾಧಿಕಾರಗಳ ಕ್ರಮದಲ್ಲಿ ಯಾವುದೇ ದುರುದ್ದೇಶ ಅಡಗಿಲ್ಲ ಎಂದು ನ್ಯಾಯಪೀಠ ಹೇಳಿ ಸರ್ಕಾರದ ಕ್ರಮವನ್ನು ಸಮರ್ಥಿಸಿದೆ.

ಶಾಲೆಯ ವಿರುದ್ಧ ಕ್ರಮಕ್ಕೆ ಮುಂದಾಗದಂತೆ ಏಕಸದಸ್ಯ ಪೀಠ ಆದೇಶ ನೀಡಿದೆ. ಆದರೆ, ಯಾವುದೇ ಸೌಲಭ್ಯಗಳನ್ನು ಇಲ್ಲದೆ ಅನುಮತಿ ನೀಡುವಂತೆ ಕೋರುವುದು ಸರಿಯಾದ ಕ್ರಮವಲ್ಲ. ಶಾಲೆ ಕಟ್ಟಡದ ಸ್ಥಳವನ್ನು ಪರಿವರ್ತನೆಯನ್ನೂ ಮಾಡಿಲ್ಲ. ಆದರೂ ಮೇಲ್ದಜೆರ್ಗೆ ಏರಿಸಲು ಅನುಮತಿ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಸರ್ಕಾರದ ಪ್ರಾಧಿಕಾರಗಳು ತಿಳಿಸಿರುವ ಕ್ರಮ ಸರಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಜತೆಗೆ, ಏಕ ಸದಸ್ಯ ಪೀಠದ ಆದೇಶವನ್ನು ಸರ್ಕಾರದ ಪ್ರಾಧಿಕಾರಗಳು ಉದ್ದೇಶಪೂರ್ವಕವಾಗಿ ಜಾರಿ ಮಾಡಿಲ್ಲ ಎಂಬ ಆರೋಪವನ್ನು ಒಪ್ಪಲಾಗದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಶಾಲೆಯನ್ನು ಮೇಲ್ದರ್ಜೆಗೇರಿಸಲು ಭೂ ಪರಿವರ್ತನೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿಲ್ಲ. ಆದರೂ, ಏಕ ಸದಸ್ಯ ಪೀಠದ ಆದೇಶವನ್ನು ಪಾಲನೆ ಮಾಡಿಲ್ಲ ಎಂಬುದಾಗಿ ಊಹೆಗಳ ಆಧಾರದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು. ಶಿಕ್ಷಣ ಇಲಾಖೆ ಕೇಳಿರುವ ಎಲ್ಲ ದಾಖಲೆಗಳೊಂದಿಗೆ ಮನವಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಬಹುದು ಎಂದು ನ್ಯಾಯಪೀಠ ಆದೇಶಲ್ಲಿ ತಿಳಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+