ʼಬಿಜೆಪಿ ಸಂಸದರು ಮತ್ತು ಶಾಸಕರ ಮೇಲೆ ನಿರಂತರವಾಗಿ FIRʼ

ಬೆಂಗಳೂರು,ಸೆಪ್ಟೆಂಬರ್‌ 19: ಬಿಜೆಪಿ ಸಂಸದರು ಮತ್ತು ಶಾಸಕರ ಮೇಲೆ ನಿರಂತರವಾಗಿ ಎಫ್‍ಐಆರ್‍ಗಳು ದಾಖಲಾಗುತ್ತಿವೆ. ಕರ್ನಾಟಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ; ಕೇಂದ್ರದ ಸಚಿವರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಟೀಕಿಸಿದರು. ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯರ ಮೇಲೆ ಎಫ್‍ಐಆರ್ ದಾಖಲು ಮಾಡಿದ್ದಾರೆ. ಶಾಸಕರಾದ ಹರೀಶ್ ಪೂಂಜಾ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಭರತ್ ಶೆಟ್ಟಿ- ಹೀಗೆ ನಿರಂತರವಾಗಿ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಹತ್ತಿಕ್ಕುವ, ಅವರ ಧ್ವನಿ ಅಡಗಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರದ ನೇತೃತ್ವದಲ್ಲಿ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

FIRs are constantly being filed against BJP MPs and MLAs Shobha Karandlaje said

ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರನ್ನು ಓಡಿಸುತ್ತೇವೆ ಎಂದು ಐವನ್ ಡಿಸೋಜ ಅವರು ಹೇಳಿಕೆ ಕೊಟ್ಟಿದ್ದರು. ನಮ್ಮ ಮಂಗಳೂರಿನ ಜನರು, ಕಾರ್ಯಕರ್ತರು ದಿನವೂ ಪೊಲೀಸ್ ಸ್ಟೇಶನ್‍ಗೆ ಹೋಗುತ್ತಿದ್ದಾರೆ. ದೂರನ್ನೂ ನೀಡುತ್ತಿದ್ದಾರೆ. ಆದರೆ, ಇವತ್ತಿನ ತನಕ ದೂರನ್ನು ತೆಗೆದುಕೊಂಡಿಲ್ಲ ಎಂದು ವಿವರಿಸಿದರು. ಅವರ ಮೇಲೆ ಎಫ್‍ಐಆರ್ ದಾಖಲಿಸುತ್ತಿಲ್ಲವೇಕೆ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು.

ಕರ್ನಾಟಕವನ್ನು ನೀವೇನು ಮಾಡಲು ಹೊರಟಿದ್ದೀರಿ?

ಕರ್ನಾಟಕವನ್ನು ನೀವೇನು ಮಾಡಲು ಹೊರಟಿದ್ದೀರಿ? ನಾಗಮಂಗಲದಲ್ಲಿ ಘಟನೆ ನಡೆಯಿತು. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಗಣೇಶನನ್ನು ಪೊಲೀಸ್ ವ್ಯಾನಿನಲ್ಲಿ ಕರೆದುಕೊಂಡು ಹೋಗಿ ವಿಸರ್ಜನೆ ಮಾಡುವ ಘಟನೆ ನಡೆದಿದೆ. ಯಾಕಾಗಿ ಹೀಗಾಗಿದೆ? ನಾಗಮಂಗಲದ ಗಣಪತಿಗೆ ನೀವು ಚಪ್ಪಲಿ ಎಸೆಯಲು ಅವಕಾಶ ಕೊಟ್ಟಿದ್ದೀರಿ. ಕಲ್ಲುಗಳನ್ನೂ ಎಸೆದರು. ಮೂರ್ತಿ ಭಗ್ನ ಆಯಿತು. ಮೂರ್ತಿಯನ್ನು ಅಲ್ಲೇ ಬಿಟ್ಟು ಓಡಿದರು. 25 ಅಂಗಡಿಗಳನ್ನು ಸುಟ್ಟು ಹಾಕಿದರು. ಆ ಜನರು ಯಾರು ಎಂದು ಕು. ಶೋಭಾ ಕರಂದ್ಲಾಜೆ ಅವರು ಪ್ರಶ್ನೆಯನ್ನು ಮುಂದಿಟ್ಟರು.

ನಾಗಮಂಗಲದ ಜನರಿಗೆ ಆ ಧೈರ್ಯ ಹೇಗೆ ಬಂತು? ಲಭಿಸಿದ ವರದಿ ಪ್ರಕಾರ ಕೇರಳದಿಂದ ಬಂದಿದ್ದಾರೆ ಎನ್ನುತ್ತಿದ್ದಾರೆ. ಅವರು ಯಾರು? ಹೇಗೆ ಮತ್ತು ಯಾಕೆ ಬಂದರು? ಇವತ್ತು ನಾಗಮಂಗಲದ ಕೇಸನ್ನೂ ನೀವು ಮುಚ್ಚಿ ಹಾಕಿದ್ದೀರಿ. ನಿಮ್ಮ ಪೊಲೀಸರು ಇದೊಂದು ಘಟನೆಯೇ ಅಲ್ಲ ಎಂಬಂತೆ ಆ ಕೇಸನ್ನು ಕ್ಲೋಸ್ ಮಾಡಿದ್ದಾರೆ ಎಂದು ದೂರಿದರು. ಪರಮೇಶ್ವರ್ ಅವರು ಇದೊಂದು ಚಿಕ್ಕ ಘಟನೆ ಎನ್ನುತ್ತಾರೆ. ಯಾವುದು ಚಿಕ್ಕ ಘಟನೆ ಪರಮೇಶ್ವರ್ ಅವರೇ ಎಂದು ಕೇಳಿದರು. 25 ಅಂಗಡಿ ಸುಟ್ಟದ್ದು ಚಿಕ್ಕ ಘಟನೆಯೇ? ಪಕ್ಕದ ರಾಜ್ಯದಿಂದ ಬಂದು ಗಲಭೆ ಮಾಡಿದ್ದು ಚಿಕ್ಕ ಘಟನೆಯೇ? ಎಂದರು.

ಅತ್ಯಂತ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕ ಮತ್ತು ಶಾಸಕರ ಪುತ್ರ ಸೇರಿ ತಮಗೆ ಹಣ ಕೇಳಿದ್ದು, ಅದನ್ನು ಕೊಡಲು ನನಗೆ ಶಕ್ತಿ ಇಲ್ಲ; ನನಗೆ ಹಿಂಸೆ ಕೊಡುತ್ತಿದ್ದಾರೆ ಎಂದು ಹೇಳಿ ಸತ್ತರು. ಅವರ ಮೇಲೆ ಎಫ್‍ಐಆರ್ ದಾಖಲಿಸಲು ಹಿಂದೆ ಮುಂದೆ ನೋಡಿದ್ದೀರಿ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ಮಾಡಿ ಸಿಕ್ಕಿ ಹಾಕಿಕೊಂಡ ಬಳಿಕ ನೀವು ಎಸ್‍ಐಟಿ ರಚಿಸಿದ್ದೀರಿ. ಎಸ್‍ಐಟಿ ವರದಿಯನ್ನು ಓದಿದ್ದೀರಾ ಸಿದ್ದರಾಮಯ್ಯನವರೇ? ಆ ವರದಿಯಲ್ಲಿ ನಾಗೇಂದ್ರ ಅವರ ಹೆಸರು ಯಾಕೆ ಇಲ್ಲ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅವರು ಅಪರಾಧಿ ಅಲ್ಲವೇ? ಎಂದು ಕೇಳಿದರು.

ರಾಷ್ಟ್ರಧ್ವಜದ ಅಶೋಕ ಚಕ್ರದ ಜಾಗದಲ್ಲಿ ಉರ್ದು ಬರಹ

ಬೆಳಗಾವಿಯಲ್ಲಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ 3 ಜನ ಹಿಂದೂ ಯುವಕರಿಗೆ ಚಾಕುವಿನಿಂದ ಇರಿದಿದ್ದಾರೆ. ಕೋಲಾರದಲ್ಲಿ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಪ್ಯಾಲೆಸ್ಟೀನ್ ಧ್ವಜ ನೋಡುವಂತಾಗಿದೆ. ಕೋಲಾರದ ಮೆರವಣಿಗೆಯಲ್ಲಿ ಪ್ಯಾಲೆಸ್ಟೀನ್ ಧ್ವಜದ ಪ್ರದರ್ಶನ ಆಗಿದೆ. ನಿನ್ನೆ ಬೆಂಗಳೂರಿನ ನಂದಿನಿ ಲೇ ಔಟ್‍ನಲ್ಲಿ ರಾಷ್ಟ್ರಧ್ವಜ ವಿರೂಪಗೊಳಿಸಿ ರಾಷ್ಟ್ರಧ್ವಜದ ಅಶೋಕ ಚಕ್ರದ ಜಾಗದಲ್ಲಿ ಉರ್ದುವಿನಲ್ಲಿ ಬರೆದಿದ್ದಾರೆ. ಇಂಥ ಧ್ವಜವನ್ನು ಬೆಂಗಳೂರಿನಲ್ಲಿ ಏರಿಸುತ್ತಿದ್ದಾರೆ. ಇದು ಕರ್ನಾಟಕದ ರಾಜಧಾನಿಯ ಸ್ಥಿತಿ ಎಂದು ಕು. ಶೋಭಾ ಕರಂದ್ಲಾಜೆ ಅವರು ಕಳವಳ ವ್ಯಕ್ತಪಡಿಸಿದರು.

ಸಮಾಜಘಾತುಕರು, ದೇಶದ್ರೋಹಿಗಳು, ಅಪರಾಧಿಗಳಿಗೆ ಈ ಧೈರ್ಯ ಹೇಗೆ ಬಂದಿದೆ? ನೀವು ಮುಖ್ಯಮಂತ್ರಿ ಆದ ತಕ್ಷಣ ರಾಜ್ಯಸಭೆ ಚುನಾವಣೆ ನಡೆದಿತ್ತು. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ವಿಧಾನಸೌಧದಲ್ಲಿ ಮೊದಲ ಬಾರಿಗೆ ನಾವು ಪಾಕಿಸ್ತಾನ್ ಜಿಂದಾಬಾದ್ ಕೇಳಿದೆವು ಎಂದು ಆತಂಕ ವ್ಯಕ್ತಪಡಿಸಿದರು. ಎಫ್‍ಎಸ್‍ಎಲ್ ವರದಿ ಬಂದ ಬಳಿಕ ಕೇಸು ಹಾಕುವುದಾಗಿ ಹೇಳಿ ದಿನ ತಳ್ಳಲಾಯಿತು ಎಂದು ಟೀಕಿಸಿದರು.

ಶಿವಮೊಗ್ಗದಲ್ಲಿ ಹಿಂದೂಗಳನ್ನು ಕಗ್ಗೊಲೆ ಮಾಡಿದ ಔರಂಗಬೇಬನ ರಕ್ತಸಿಕ್ತ ಖಡ್ಗ ಪ್ರದರ್ಶನ ಮಾಡುತ್ತಾರೆ. ಕೋಲಾರದಲ್ಲೂ ಇದರ ಪ್ರದರ್ಶನ ನಡೆಯುತ್ತದೆ. ಟಿಪ್ಪುವನ್ನು ವೈಭವೀಕರಿಸಲಾಗುತ್ತಿದೆ. ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹನುಮಾನ್ ಚಾಲೀಸ ಕೇಳುತ್ತಿದ್ದ ಹುಡುಗನ ಮೇಲೆ ಹಲ್ಲೆ ಮಾಡುತ್ತಾರೆ. ಕೇಳಲು ಹೋದ ನಮ್ಮ ಮೇಲೇ ಕೇಸು ಹಾಕಿದ್ದೀರಿ ಎಂದು ಆಕ್ಷೇಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+