ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಕೇಸ್‌ಗೆ ಸಿಕ್ತು ಟ್ವಿಸ್ಟ್: ದೆಹಲಿಯಲ್ಲಿ ಸಿಕ್ಕಿಬಿದ್ದ ಮೊದಲ ಆರೋಪಿ ಅರೆಸ್ಟ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಗುರಿಯಾಗಿಸಿಕೊಂಡು ಮಾಡಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸೈಬರ್ ಕ್ರೈಂ ವಿಭಾಗದ ವಿಶೇಷ ತಂಡವು ದೆಹಲಿ ಮೂಲದ ವ್ಯಕ್ತಿಯೊಬ್ಬನನ್ನ ಬಂಧಿಸಿದೆ. ಇದು ಈ ಪ್ರಕರಣದಲ್ಲಿ ನಡೆದಿರುವ ಮೊದಲ ಬಂಧನವಾಗಿದ್ದು, ನಕಲಿ ವಿಡಿಯೋ ಹರಿಬಿಟ್ಟ ಜಾಲದ ಬೇರುಗಳನ್ನ ಭೇದಿಸಲು ಪೊಲೀಸರು ಮುಂದಾಗಿದ್ದಾರೆ.

First Arrest in Karnataka Siddaramaiah Sting Operation Case Delhi Man Apprehended by Cyber Crime Police

ಡಿಜಿಟಲ್ ಹೆಜ್ಜೆಗುರುತು ಪತ್ತೆ ಹಚ್ಚಿದ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು

ಸೋಶೀಯಲ್‌ ಮೀಡಿಯಾದಲ್ಲಿ ಈ ವಿವಾದಾತ್ಮಕ ವಿಡಿಯೋವನ್ನ ಮೊದಲು ಯಾರು ಅಪ್‌ಲೋಡ್ ಮಾಡಿದರು ಮತ್ತು ಅದನ್ನ ಯಾವ ರೀತಿ ವೈರಲ್ ಮಾಡಲಾಯಿತು ಎಂಬುದರ ಕುರಿತು ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತನಿಖೆಯ ವೇಳೆ ಡಿಜಿಟಲ್ ಹೆಜ್ಜೆಗುರುತುಗಳನ್ನ ಸೂಕ್ಷ್ಮವಾಗಿ ಗಮನಿಸಿದಾಗ, ವಿಡಿಯೋ ಅಪ್‌ಲೋಡ್ ಮಾಡಲು ಸೆಕೆಂಡ್ ಹ್ಯಾಂಡ್ ಮೊಬೈಲ್ ಫೋನ್ ಬಳಸಿರುವುದು ಪತ್ತೆಯಾಗಿದೆ. ಈ ಮೊಬೈಲ್ ಫೋನ್ ಮತ್ತು ಬಂಧಿತ ಆರೋಪಿಗೂ ಇರುವ ನಂಟಿನ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ದೆಹಲಿಯಲ್ಲಿ ಬಂಧಿತನಾದ ರಿತೇಶ್ ಪಾಂಡೆ ಪಾತ್ರವೇನು?

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಬಂಧನಕ್ಕೆ ಒಳಗಾಗಿರುವ ಆರೋಪಿಯನ್ನ ರಿತೇಶ್ ಪಾಂಡೆ ಎಂದು ಗುರುತಿಸಲಾಗಿದೆ. ಈತನನ್ನು ದೆಹಲಿಯಲ್ಲಿ ವಶಕ್ಕೆ ಪಡೆದಿರುವ ವಿಶೇಷ ಪೊಲೀಸ್ ತಂಡ, ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತಂದಿದೆ.

ವಿಡಿಯೋವನ್ನ ಸೋಶೀಯಲ್‌ ಮೀಡಿಯಾಗಳಲ್ಲಿ, ವಿಶೇಷವಾಗಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಹಂಚಿಕೊಳ್ಳಲು ಬಳಸಲಾದ ಲಿಂಕ್‌ಗಳ ಮೂಲವನ್ನ ಪತ್ತೆಹಚ್ಚುವಲ್ಲಿ ಈತನ ವಿಚಾರಣೆ ಪ್ರಮುಖ ಪಾತ್ರ ವಹಿಸಲಿದೆ.

ವಿಡಿಯೋ ರೆಕಾರ್ಡಿಂಗ್ ಮಾಡಿದವರು ಯಾರು? ಈ ಪಿತೂರಿಯ ಹಿಂದೆ ಯಾರಿದ್ದಾರೆ? ಎಂಬುದರ ಸಂಪೂರ್ಣ ಮಾಹಿತಿಯನ್ನ ರಿತೇಶ್ ಪಾಂಡೆ ಬಾಯ್ಬಿಡುವ ಸಾಧ್ಯತೆ ಇದೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೇನು?

ಈ ಪ್ರಕರಣದ ತನಿಖೆಯ ಕುರಿತು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, "ವಿಡಿಯೋ ಅಪ್‌ಲೋಡ್ ಮಾಡಿದ ಮತ್ತು ಶೇರ್ ಮಾಡಿದ ಶಂಕಿತರಿಗೆ ಈಗಾಗಲೇ ಪೊಲೀಸ್ ನೋಟಿಸ್ ನೀಡಲಾಗಿದೆ" ಎಂದು ಸ್ಪಷ್ಟಪಡಿಸಿದ್ದಾರೆ.

ನೋಟಿಸ್ ಜಾರಿಯಾಗುತ್ತಿದ್ದಂತೆ ಕೆಲವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ತಲೆಮರೆಸಿಕೊಂಡಿರುವವರ ಪತ್ತೆಗಾಗಿ ತನಿಖಾಧಿಕಾರಿಗಳು ಬಲೆ ಬೀಸಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ತೀವ್ರ ಸ್ವರೂಪ ಪಡೆದುಕೊಂಡ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ವಿವಾದ

ಈ ಸ್ಟಿಂಗ್ ಆಪರೇಷನ್ ಎನ್ನುವ ಕಟ್ಟುಕಥೆ ಇಡೀ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸ್ವತಃ ಸಿದ್ದರಾಮಯ್ಯ ಅವರು ಈ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ತೇಜೋವಧೆ ಮಾಡಲು ಮತ್ತು ಬ್ಲ್ಯಾಕ್ ಮೇಲ್ ಮಾಡಲು ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇತ್ತೀಚೆಗಷ್ಟೇ ಅವರ ಪುತ್ರ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಓರ್ವ ಮಹಿಳೆ ಸೇರಿದಂತೆ ಇಬ್ಬರು ಪ್ರಮುಖ ವ್ಯಕ್ತಿಗಳು ಈ ಷಡ್ಯಂತ್ರದ ರೂವಾರಿಗಳು ಎಂದು ಗಂಭೀರ ಆರೋಪ ಮಾಡಿದ್ದರು. ಇದೀಗ ದೆಹಲಿ ಮೂಲದ ವ್ಯಕ್ತಿಯ ಮೊದಲ ಬಂಧನವಾಗಿರುವುದರಿಂದ, ಪ್ರಕರಣದಲ್ಲಿ ಭಾಗಿಯಾಗಿರುವ ತೆರೆಮರೆಯ ನಾಯಕರ ಹೆಸರುಗಳು ಒಂದೊಂದಾಗಿ ಹೊರಬೀಳುವ ನಿರೀಕ್ಷೆಯಿದೆ. ಮುಂದಿನ ದಿನಗಳಲ್ಲಿ ಪೊಲೀಸರ ತನಿಖೆಯು ಮತ್ತಷ್ಟು ರೋಚಕ ತಿರುವುಗಳನ್ನು ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+