Karnataka Elections 2023; ಹಳೆ ಮೈಸೂರು ಭಾಗ ಗೆಲ್ಲಲು ತಂತ್ರ; ಫೆ.20ರಂದು ಮಂಡ್ಯದಲ್ಲಿ ಯುವ ಮೋರ್ಚಾ ಸಮಾವೇಶ
224 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗುತ್ತಿದೆ. ತುಮಕೂರು ಮಹಾನಗರದಲ್ಲಿ ಯುವ ಸಮಾವೇಶ ನಡೆಯಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು,ಫೆಬ್ರವರಿ14: ಬಿಜೆಪಿ ಹಳೆ ಮೈಸೂರು ಭಾಗಕ್ಕೆ ಒತ್ತು ನೀಡುತ್ತಿದ್ದು, 150 ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರವನ್ನ ರೂಪಿಸುತ್ತಿದೆ ಎಂದು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗುತ್ತಿದೆ. ತುಮಕೂರು ಮಹಾನಗರದಲ್ಲಿ ಯುವ ಸಮಾವೇಶ ನಡೆಸಿದರೆ, ಗುಬ್ಬಿಯಲ್ಲಿ ಮಹಿಳಾ ಸಮಾವೇಶ ನಡೆಸುತ್ತೇವೆ. ತುರುವೇಕೆರೆಯಲ್ಲಿ ರೈತ ಸಮಾವೇಶ ನಡೆಸುವ ಮೂಲಕ ವಿವಿಧ ಮೋರ್ಚಾಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿಯಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾಇರಗಳ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ಇನ್ನೂ ಫೆಬ್ರವರಿ 16ರಂದು ಎಲ್ಲ ಮೋರ್ಚಾಗಳ ಪದಾಧಿಕಾರಿಗಳ ಸಭೆ ಕರೆಯಲಾಗಿದ್ದು, ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಹೀಗಾಗಿ ಎಲ್ಲಾ ಮೋರ್ಚಾಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ಮಂಡ್ಯ ಜಿಲ್ಲೆಯ ಕೆ.ಅರ್ ಪೇಟೆಯಲ್ಲಿ ಪಕ್ಷಕ್ಕೆ ಐತಿಹಾಸಿದ ಗೆಲುವು ಲಭಿಸಿತ್ತು. ಈಗಾಗಲೇ ಹಳೆ ಮೈಸೂರು ಭಾಗಕ್ಕೆ ಪಕ್ಷ ಒತ್ತು ಕೊಡುತ್ತಿದೆ. ಫೆ. 20ರಂದು ಯುವ ಮೋರ್ಚಾದ ಮೊದಲ ಸಮಾವೇಶವು ಮಂಡ್ಯ ನಡೆಯಲಿದೆ. ಇನ್ನೂ ಈ ಸಮಾವೇಶಕ್ಕೆ ಕೇಂದ್ರದ ನಾಯಕರು ಬರುವ ನಿರೀಕ್ಷೆ ಇದೆ. ಈ ಹಿಂದೆ ಮಂಡ್ಯಗೆ ಕೇಂದ್ರ ನಾಯಕರಾದ ಅಮಿತ್ ಶಾ ಅವರು ಬಂದು ಹೋಗಿರುವುದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ ಎಂದು ಹೇಳಿದರು.
ಇನ್ನೂ ಪಕ್ಷದಲ್ಲಿರುವ 7 ಮೋರ್ಚಾಗಳಾದ ಯುವ ಮೋರ್ಚಾ, ಎಸ್ಸಿ ಮೋರ್ಚಾ, ಎಸ್ಟಿ ಮೋರ್ಚಾ, ಒಬಿಸಿ ಮೋರ್ಚಾ, ಮಹಿಳಾ ಮೋರ್ಚಾ, ರೈತ ಮೋರ್ಚಾ ಮತ್ತು ಅಲ್ಪಸಂಖ್ಯಾತ ಮೋರ್ಚಾಗಳನ್ನು ಸಕ್ರಿಯಗೊಳಿಸುವ ಗುರಿಯನ್ನು ಸಮಾವೇಶಗಳು ಹೊಂದಿವೆ. ಈ ಸಂದರ್ಭದಲ್ಲಿ ಪ್ರಧಾನಿಯವರ ಅಮೃತ್ ಕಾಲ್ ಯೋಜನೆಯನ್ನು ಸಾಕಾರಗೊಳಿಸಲು ಹಾಗೂ ದೇಶ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಳ್ಳಲು ಬಯಸುವ ಯುವಜನತೆಯನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಈ ಬಾರಿ ಸ್ವತಃ ಬಲದ ಮೇಲೆ ಅಧಿಕಾರಕ್ಕೆ ಬರಬೇಕು ಎಂದುಕೊಂಡಿರುವ ಬಿಜೆಪಿ ಸಾಲು ಸಾಲು ಸಮಾವೇಶಗಳಿಗೆ ಪ್ಲ್ಯಾನ್ ಗಳನ್ನ ನಡೆಸಿದೆ. ಇತ್ತ ಹೈಕಮಾಂಡ್ ನಾಯಕರು ಸಹ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದೆ ಈ ಬಾರಿ ಬಿಜೆಪಿ ಅಧಿಕಾರಕ್ಕೆ ತರುವ ಪ್ರಯತ್ನ ನಡೆಸುತ್ತಿದ್ದಾರೆ.
ಇನ್ನೂ ಈ ವೇಳೆ ಸಮಾವೇಶಗಳ ರಾಜ್ಯ ಸಹ ಸಂಚಾಲಕರಾದ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಹಾಗೂ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ಸುದ್ದಿಗೋಷ್ಟಿಯಲ್ಲಿ ಭಾಗವಹಿಸಿದ್ದರು.












Click it and Unblock the Notifications