ಲೋಕಸಭಾ ಚುನಾವಣೆ: ಮೂರ್ನಾಲ್ಕು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಬಿಡುಗಡೆ- ಯಡಿಯೂರಪ್ಪ

ಚಿಕ್ಕಮಗಳೂರು, ಫೆಬ್ರವರಿ 26: ಲೋಕಸಭಾ ಚುಣಾವಣೆಗೆ ಕೇವಲ ಎರಡೇ ತಿಂಗಳು ಮಾತ್ರ ಬಾಕಿ ಉಳಿದಿದೆ. ಇತ್ತ ಮತ್ತೊಮ್ಮೆ ನರೇಂದ್ರ ಮೋದಿ ಅವರ ಕೈ ಬಲ ಪಡಿಸಬೇಕು ಎಂದು ಬಿಜೆಪಿ ಸಜ್ಜಾಗಿದ್ದು, ಹಲವು ರೀತಿಯಲ್ಲಿ ಚುನಾವಣಾ ತಂತ್ರಗಾರಿಕೆಯನ್ನ ನಡೆಸಿದೆ.

ಹೌದು, ಲೋಕಸಭಾ ಚುನಾವಣೆ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಮಾತನಾಡಿ, ಮೂರು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಇನ್ನೂ ಎರಡು ಮೂರು ದಿನಗಳಲ್ಲಿ ಎಲ್ಲಾ ಗೊಂದಲ ಬಗೆಹರಿಯಲಿದೆ ಎಂದು ಹೇಳಿದ್ದಾರೆ

First List Of Candidates To Be Released in three days Says BS Yediyurappa

ಇನ್ನೂ ಮೂರು ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುವ ಮೂಲಕ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರಣಕ್ಕೆ ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣವಿದೆ. ಅಲ್ಲದೇ ಕರ್ನಾಟಕದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಪ್ರಯತ್ನ ಮಾಡುತ್ತಿದೆ ಜತೆಗೆ ಇದಕ್ಕೆ ಪೂರಕ ವಾತಾವರಣವೂ ಇದೆ ಎಂದು ಬಿ ಎಸ್‌ ಯಡಿಯೂರಪ್ಪ ಹೇಳಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಹಾಗೂ ಪಿತೂರಿ ನಡೆಯುತ್ತಿದೆ. ಇದನ್ನು ಯಾರು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಇಂತಹ ಷಡ್ಯಂತ್ರಗಳಿಂದ ಶೋಭಾ ಕರಂದ್ಲಾಜೆ ದೃತಿಗೆಡುವುದಿಲ್ಲ. ಕಳೆದ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ 3.50 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಚುನಾವಣೆಯಲ್ಲಿ ಇದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+