ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪದವಿ, ಸ್ನಾತಕೋತ್ತರ ಕೋರ್ಸ್‌ಗಳಿಗೆ ಆನ್‌ಲೈನ್ ಪ್ರವೇಶ

|
Google Oneindia Kannada News

ಬೆಂಗಳೂರು, ಜೂನ್13: ಪ್ರಸ್ತುತ ಶೈಕ್ಷಣಿಕ ವರ್ಷ 2022- 23ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆನ್ ಲೈನ್ ವಿಧಾನದ ಮೂಲಕವೇ ನಡೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಲೇಜು ಶಿಕ್ಷಣ ಇಲಾಖೆ, ವಿ.ವಿ.ಗಳು ಮತ್ತು ವಿವಿ ಕಾಲೇಜುಗಳು ಇದಕ್ಕಾಗಿ https://uucms.karnataka.gov.in/ ವಿಳಾಸವನ್ನು ತಮ್ಮ ವೆಬ್ ಸೈಟುಗಳಲ್ಲಿ ಲಿಂಕ್ ಮಾಡಿ, ಲಭ್ಯವಾಗುವಂತೆ ಮಾಡಬೇಕು. ಜತೆಗೆ ಎಲ್ಲ ಕಾಲೇಜುಗಳೂ ಪ್ರವೇಶಾತಿಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್ ಸೈಟ್ ಗಳಲ್ಲಿ ಪ್ರಕಟಿಸಬೇಕು ಎಂದು ಅವರು ಸೂಚಿಸಿದ್ದಾರೆ.

First year degree, postgraduate courses through an online system in the academic year 2022-23

ದ್ವಿತೀಯ ಪಿಯುಸಿ ಫಲಿತಾಂಶದ ಬಳಿಕ ಅರ್ಜಿ; ದ್ವಿತೀಯ ಪಿಯುಸಿ ಫಲಿತಾಂಶ ಜೂನ್ 4ನೇ ವಾರದಲ್ಲಿ ಪ್ರಕಟವಾಗಲಿದೆ. ದ್ವಿತೀಯ ಪಿಯುಸಿಯ ಫಲಿತಾಂಶವನ್ನು ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ತಯಾರಿಯನ್ನು ನಡೆಸುತ್ತಿದೆ. ಈ ನಡುವೆ ಪಿಯುಸಿ ಫಲಿತಾಂಶ ಪಡೆದ ವಿದ್ಯಾರ್ಥಿಗಳು ಪದವಿ ಶಿಕ್ಷಣವನ್ನು ಪಡೆಯಲು ಕಾಲೇಜುಗಳನ್ನು ಹುಡುಕಾಟ ನಡೆಸುತ್ತಾರೆ.

First year degree, postgraduate courses through an online system in the academic year 2022-23

ತನ್ನ ಆಯ್ಕೆಯ ತಮ್ಮಿಚ್ಛೆಯ ಕೋರ್ಸ್ ಇದೆಯೋ?, ಇಲ್ಲವೋ? ಎಂಬದನ್ನು ನೋಡಿಕೊಳ್ಳಲು ದ್ವಿತೀಯ ಪಿಯುಸಿ ಫಲಿತಾಂಶದ ಒಳಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಕಾಲೇಜುಗಳು ವಿವರವನ್ನು ಪ್ರಕಟಿಸಬೇಕಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿಗೆ ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳು ಇಲಾಖೆಯ ವೆಬ್ ಸೈಟ್‌ನಲ್ಲಿ ಕಾಲೇಜುಗಳ ಬಗ್ಗೆ ಮಾಹಿತಿಯನ್ನು ಪಡೆದು ಕೋರ್ಸ್ ವಿವರವನ್ನು ಪಡೆದು ಆನ್ ಲೈನ್‌ ಮುಖೇನ ಅರ್ಜಿಯನ್ನು ಸಲ್ಲಿಸಲು ಅನುಕೂಲವಾಗಲಿದೆ.

English summary
Higher education minister Dr. C. N. Ashwatthanarayana said the admission process for first year and postgraduate courses in the academic year 2022-23 should be done through an online system. know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X