ಟಿಕೆಟ್‌ ಕೈ ತಪ್ಪಿದ ಬೆನ್ನೆಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ; ರಾಜಕೀಯ ನಿವೃತ್ತಿ ಘೋಷಿಸಿದ ಹಾಲಿ ಸಚಿವ

ಮಂಗಳೂರು, ಏಪ್ರಿಲ್‌ 12: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಿದ್ದತೆ ನಡೆಸುತ್ತಿರುವ ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಪಣ ತೊಟ್ಟಿದೆ. ಈಗಾಗಲೇ ಸಾಷ್ಟುತಯಾರಿ ನಡೆಸುತ್ತಿದ್ದ ಬಿಜೆಪಿ ಹೈಕಮಾಂಡ್‌ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚುನಾವಣೆ ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದರು. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದರು. ಇನ್ನು ಬಿಜೆಪಿ ಹಿರಿಯ ನಾಯಕರ ಕೆಎಸ್ ಈಶ್ವರಪ್ಪ ಸಹ ಚುನಾವಣೆಗೆ ನಿವೃತ್ತಿ ಹೇಳಿದ್ದು, ರಾಜಕೀಯದಲ್ಲಿ ಇರುತ್ತೇನೆ ಎಂದಿದ್ದಾರೆ.

Fisheries Minister, 7 time MLA S Angara quits politics after BJP denied ticket

ಇನ್ನು ಬಿಜೆಪಿ ಹಾಲಿ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಹ ಸ್ವಯಂ ಪ್ರೇರಿತವಾಗಿಯೇ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅಲ್ಲದೇ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ಅವರೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಘೋಷಣೆ ಮಾಡಿದ್ದರು. ಇದೀಗ ಸತತ ಆರು ಬಾರಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದ ಸುಳ್ಯ ಶಾಸಕ ಹಾಗೂ ಹಾಲಿ ಸಚಿವ ಎಸ್.​ಅಂಗಾರ ಅವರು ಸಕ್ರಿಯ ರಾಜಕಾರಣಕ್ಕೆ ಗುಡ್​ಬೈ ಹೇಳಿದ್ದಾರೆ.

ಹೌದು, 224 ಕ್ಷೇತ್ರಗಳ 189 ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಈ ಬಾರಿ ಬಿಜೆಪಿ ನಿರೀಕ್ಷೆಯಲ್ಲಿದ್ದ ಎಸ್‌ ಅಂಗಾರ ಅವರಿಗೆ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ. ಇನ್ನೂ ಅಭ್ಯರ್ಥಿಗಳ ಮೊದಲ ಘೋಷಣೆ ಮಾಡಿದ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ಸುಳ್ಯ ಕ್ಷೇತ್ರದ ಬಿಜೆಪಿ ಟಿಕೆಟ್​​ ಕೈತಪ್ಪಿದ ಬೆನ್ನಲ್ಲೇ ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್​.ಅಂಗಾರ ಗುಡ್‌ ಬೈ ಹೇಳಿದ್ದು, ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದಾರೆ. ಆರು ಸುಳ್ಯ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ಶಾಸಕರಾಗಿದ್ದ ಎಸ್. ಅಂಗಾರ ಅವರಿಗೆ ಈ ಬಾರಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್​ ಟಿಕೆಟ್ ನೀಡಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಅಂಗಾರ, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

Fisheries Minister, 7 time MLA S Angara quits politics after BJP denied ticket

7 ಬಾರಿ ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಂಗಾರ, ಮೊದಲ ಬಾರಿಗೆ ಸೋಲನ್ನು ಅನುಭವಿಸಿದ್ದರು. ಬಳಿಕ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡುವರೆ ವರ್ಷದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮೀನುಗಾರಿಕೆ ಸಚಿವರಾಗಿದ್ದರು. ಸುಳ್ಯದಲ್ಲಿ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದ ನಾಯಕರಾದ ಎಸ್‌ ಅಂಗಾರ ಅವರು ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.

ಈ ಕುರಿತು ಅಸಮಾಧಾನ ಹೊರ ಹಾಕಿರುವ ಎಸ್‌ ಅಂಗಾರ ಅವವಾವರು, ಸದ್ಯದ ಬೆಳವಣಿಗೆ ಕಾರ್ಯಕರ್ತರಲ್ಲಿ ಸಂಶಯ ತರಿಸಿದೆ. ಯಾರ ಮೇಲೆ ವಿಶ್ವಾಸ ಇಡಬೇಕು ಎನ್ನುವಂತಾಗಿದೆ. ಲಾಬಿ ಮಾಡಿದವರಿಗೆ ಸೀಟು, ಲಾಬಿ ಮಾಡದವರಿಗೆ ಸೀಟು ಇಲ್ಲ ಎಂಬಂತಾಗಿದೆ ಎಂದ ಅವರು, ನನ್ನ ನಡೆಯೇ ನನಗೆ ಮುಳ್ಳಾಯಿತು. ಇಲ್ಲಿಗೆ ರಾಜಕೀಯ ಸಾಕು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಪಕ್ಷದ ನಾಯಕರ ವಿರುದ್ದ ಬೇಸರಗೊಂಡಿದ್ದಾರೆ. ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+