ಅಂಜುಂ ಪರ್ವೇಜ್ ಸೇರಿ ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಆಗಸ್ಟ್ 17: ರಾಜ್ಯ ಸರ್ಕಾರವು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯಾಗಿದ್ದ ಅಂಜುಂ ಫರ್ವೇಜ್ ಅವರನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ. ಜೆ. ರವಿಶಂಕರ್- ವಸತಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ಎನ್ ಜಯರಾಂ- ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ಎಂ. ಕನಗವಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ರನ್ನಾಗಿ ನೇಮಕ ಮಾಡಲಾಗಿದೆ. ಕೆ ಜ್ಯೋತಿ, ಅವರನ್ನು ಮೈಸೂರು ಜಿಲ್ಲಾ ಪಂಚಾಯತ್ ಇಲಾಖೆ ಸಿಇಓ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.












Click it and Unblock the Notifications