ಜಿಲ್ಲಾ ಪಂಚಾಯಿತಿ ಗಡಿ ನಿರ್ಣಯ; ಮಾರ್ಗಸೂಚಿ ಪ್ರಕಟ
ಬೆಂಗಳೂರು, ಜುಲೈ 27; ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಜಿಲ್ಲಾ ಪಂಚಾಯಿತಿಗಳ ಗಡಿ ನಿಗದಿ ಮಾಡಲು ಮಾರ್ಗಸೂಚಿಯನ್ನು ಪ್ರಕಟಿಸಿದೆ. ಗಡಿ ನಿಗದಿಗೊಂಡು ಅಂತಿಮ ನಕ್ಷೆ ತಯಾರಾದ ಬಳಿಕ ರಾಜ್ಯ ಚುನಾವಣಾ ಆಯೋಗ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 160,161 ರ ಅನ್ವಯ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸುವಾಗ ಜಿಲ್ಲಾ ಪಂಚಾಯಿತಿಯ ಚುನಾಯಿತ ಸದಸ್ಯರಲ್ಲಿ ಜಿಲ್ಲೆಯ ತಾಲ್ಲೂಕುಗಳಿಂದ ಇಪ್ಪತ್ಯದಕ್ಕಿಂತಲೂ ಕಡಿಮೆಯಿಲ್ಲದಂತೆ ಚುನಾಯಿತ ಸದಸ್ಯರಿರತಕ್ಕದ್ದು, ಪ್ರತಿಯೊಂದು ತಾಲ್ಲೂಕಿನಿಂದ ಚುನಾಯಿತರಾಗತಕ್ಕ ಸದಸ್ಯರ ಸಂಖ್ಯೆಯನ್ನು ನಲವತ್ತು ಸಾವಿರದ ಜನಸಂಖ್ಯೆಗೆ ಅಥವಾ ಅದರ ಭಾಗಕ್ಕೆ ಒಬ್ಬ ಸದಸ್ಯನಂತೆ ನಿಗದಿಪಡಿಸಲಾಗಿದೆ.

ಚಿಕ್ಕಮಗಳೂರು (ತರೀಕೆರೆ, ಕಡೂರು, ಅಜ್ಜಂಪುರ ತಾಲ್ಲೂಕುಗಳನ್ನು ಹೊರತುಪಡಿಸಿ), ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಸಂದರ್ಭದಲ್ಲಿ ಪ್ರತಿ ಇಪ್ಪತ್ತೊಂದು ಸಾವಿರ ಗ್ರಾಮೀಣ ಜನಸಂಖ್ಯೆಗೆ ಅಥವಾ ಅದರ ಭಾಗಕ್ಕೆ ಒಬ್ಬ ಸದಸ್ಯರಂತೆ ನಿಗದಿಪಡಿಸಲಾಗಿದೆ.
ಏಳು ಲಕ್ಷಕ್ಕಿಂತ ಹೆಚ್ಚಿನ ಆದರೆ ಒಂಬತ್ತು ಲಕ್ಷದ ಐವತ್ತು ಸಾವಿರವನ್ನು ಮೀರಿರದ ಗ್ರಾಮೀಣ ಜನಸಂಖ್ಯೆಯನ್ನು ಹೊಂದಿರುವ ಜಿಲ್ಲೆಯ ಸಂದರ್ಭದಲ್ಲಿ ಇಪ್ಪತೆಂಟು ಚುನಾಯಿತ ಸದಸ್ಯರಿರತಕ್ಕದ್ದು.
ಮಾರ್ಗಸೂಚಿ ವಿವರಗಳು; ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 163ರನ್ನಯ ಜಿಲ್ಲಾ ಪಂಚಾಯಿತಿಯ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮೆಯನ್ನು ನಿರ್ಧರಿಸುವಾಗ, ನಗರ ಸ್ಥಳೀಯ ಸಂಸ್ಥೆಗೆ ಸೇರ್ಪಡೆಯಾಗಿರುವ/ ನಗರ ಸ್ಮಳೀಯ ಸಂಸ್ಥೆಗಳಾಗಿ ಪರಿವರ್ತನೆಗೊಂಡಿರುವ ಗ್ರಾಮಾಂತರ ಪ್ರದೇಶಗಳನ್ನು ಹೊರತುಪಡಿಸಿ, ಗ್ರಾಮೀಣ ಪ್ರದೇಶಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಬೇಕು ಎಂದು ಮಾರ್ಗಸೂಚಿ ಹೇಳಿದೆ.
ತಾಲೂಕಿನಲ್ಲಿರುವ ಗ್ರಾಮ ಪಂಚಾಯತಿಗಳನ್ನು ವಿಭಜಿಸದ ಪೂರ್ಣ ಗ್ರಾಮ ಪಂಚಾಯತಿಗಳನ್ನು ಒಟ್ಟುಗೂಡಿಸಿ, ಜಿಲ್ಲಾ ಪಂಚಾಯತಿಯ ಚುನಾವಣಾ ಕ್ಷೇತ್ರ ರಚನೆಯಾಗುವಂತೆ ನೋಡಿಕೊಳ್ಳತಕ್ಕದ್ದು. ಈ ರೀತಿ ಗ್ರಾಮ ಪಂಚಾಯತಿಗಳನ್ನು ಒಟ್ಟುಗೂಡಿಸುವ ಸಂದರ್ಭದಲ್ಲಿ ಅಕ್ಕಪಕ್ಕದ (ಭೌಗೋಳಿಕವಾಗಿ ಹೊಂದಿಕೊಂಡಿರುವಂತಹ) ಗ್ರಾಮ ಪಂಚಾಯತಿಗಳನ್ನು ಒಟ್ಟುಗೂಡಿಸಬೇಕು ಹಾಗೂ ಈ ಒಗ್ಗೂಡುವಿಕೆಯಿಂದ ಉಂಟಾಗುವ ಪ್ರದೇಶದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಂಚಾರ ಮತ್ತು ಸಂಪರ್ಕ ವ್ಯವಸ್ಥೆ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು.
ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸುಲಭವಾಗಿ ಸಂಚರಿಸುವಂತಿರಬೇಕು ಮತ್ತು ಯಾವುದೇ ಅಡೆತಡೆಗಳು ಇಲ್ಲದಿರುವುದನ್ನು ಅಂದರೆ, ಬೆಟ್ಟಗುಡ್ಡ, ಅರಣ್ಯ, ಜಲಾಶಯ, ನದಿ ಮುಂತಾದ ಅಡಚಣೆಗಳು ಇಲ್ಲದಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಪ್ರತಿಯೊಂದು ಚುನಾವಣಾ ಕ್ಷೇತ್ರದ ಜನಸಂಖ್ಯೆಯಲ್ಲಿ ಸಾಧ್ಯವಾಗುವಷ್ಟರ ಮಟ್ಟಿಗೆ ಹೆಚ್ಚಿನ ವ್ಯತ್ಯಾಸವಿರದಂತೆ ನಿಗಾವಹಿಸತಕ್ಕದ್ದು. ಹೊಸದಾಗಿ ರಚಿಸುವ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಹೆಸರನ್ನು ನಿಗದಿಪಡಿಸುವಾಗ 2015ರ ಅಧಿಸೂಚನೆಯಲ್ಲಿ ಇದ್ದಂತೆ ನಿಗದಿಪಡಿಸುವುದು.
2015ರ ಅಧಿಸೂಚನೆಯಲ್ಲಿ ಇಲ್ಲದಿದ್ದಲ್ಲಿ ಸದರಿ ಕ್ಷೇತ್ರಗಳಲ್ಲಿನ ಅತಿ ಹೆಚ್ಚು ಜನಸಂಖ್ಯೆಯಿರುವ ಗ್ರಾಮದ ಹೆಸರನ್ನು ಚುನಾವಣಾ ಆ ಕ್ಷೇತ್ರದ ಹೆಸರನ್ನಾಗಿ ಪರಿಗಣಿಸತಕ್ಕದ್ದು, ಜೊತೆಗೆ ಅತೀ ಹೆಚ್ಚು ಜನಸಂಖ್ಯೆ ಇರುವ ಗ್ರಾಮದ ಹೆಸರನ್ನಲ್ಲದೇ, ಐತಿಹಾಸಿಕ, ಶೈಕ್ಷಣಿಕ, ಸಾಂಸ್ಕೃತಿಕ, ವಾಣಿಜ್ಯ, ಇತ್ಯಾದಿ ಮಹತ್ವವಿರುವ ಗ್ರಾಮದ ಹೆಸರನ್ನು ಪರಿಗಣಿಸತಕ್ಕದ್ದು. ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ರಚಿಸುವಾಗ ಯಾವುದೇ ತಾಲೂಕು ಪಂಚಾಯತ್ ಕ್ಷೇತ್ರವು ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಭಜನೆಯಾಗದಂತೆ ನೋಡಿಕೊಳ್ಳತಕ್ಕದ್ದು.
ಜಿಲ್ಲಾಧಿಕಾರಿಗಳ ಕರ್ತವ್ಯಗಳು; ಜಿಲ್ಲಾಧಿಕಾರಿಗಳು, ತಾಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ಸೀಮಾ ನಿರ್ಣಯಗಳನ್ನು ನಿಯಮಾನುಸಾರ ಕೂಲಂಕುಷವಾಗಿ ಹಾಗೂ ಸ್ಥಳೀಯವಾಗಿ ಪರಿಶೀಲಿಸಿ ಕ್ಷೇತ್ರಗಳ ಗಡಿಗಳನ್ನು ಗುರುತಿಸತಕ್ಕದ್ದು.
ಗಡಿಗಳನ್ನು ಗುರುತಿಸಿದ ನಂತರ ಪ್ರಸ್ತಾವನೆಗಳನ್ನು ಆಯೋಗಕ್ಕೆ ಸಲ್ಲಿಸುವ ಪೂರ್ವದಲ್ಲಿ ಒಟ್ಟು ಪ್ರಕ್ರಿಯೆಯ ಭಾಗವಾಗಿ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದು, ಪರಿಶೀಲಿಸಿ ಪ್ರಸ್ತಾವನೆಗಳನ್ನು ಸಲ್ಲಿಸತಕ್ಕದ್ದು.
ಜಿಲ್ಲಾಧಿಕಾರಿಗಳು ಪ್ರಸ್ತಾವನೆಯನ್ನು ಆಯೋಗಕ್ಕೆ ಸಲ್ಲಿಸುವಾಗ ಇದರೊಂದಿಗೆ ಲಗತ್ತಿಸಿರುವ ನಮೂನೆ 1ರಲ್ಲಿ ನಿಗದಿ ಪಡಿಸಿರುವ ಅನುಬಂಧ 1, 2, 3 ಮತ್ತು 4 ರಲ್ಲಿ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಿಗೆ ಸಂಬಂಧಿಸಿದ ಮಾಹಿತಿಯ ವಿವರವನ್ನು ನಕ್ಷೆಗಳೊಂದಿಗೆ ಸಲ್ಲಿಸುವುದು.
ನಕ್ಷೆಗಳನ್ನು ಸಿದ್ಧಪಡಿಸುವಾಗ ಪ್ರತಿ ತಾಲ್ಲೂಕಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ತಾಲ್ಲೂಕು ಪಂಚಾಯತಿ ಕ್ಷೇತ್ರಗಳನ್ನೂಳಗೊಂಡ ಪ್ರತ್ಯೇಕ ನಕಾಶೆ, ಜಿಲ್ಲಾ ಪಂಚಾಯತಿ ಕ್ಷೇತ್ರಗಳನ್ನೊಳಗೊಂಡ ಪ್ರತ್ಯೇಕ ನಕಾಶ ಸಿದ್ಧಪಡಿಸಿ ಸಲ್ಲಿಸುವುದು.
ನಕ್ಷೆಯಲ್ಲಿ ತಾಲ್ಲೂಕು/ ಜಿಲ್ಲಾ ಪಂಚಾಯತಿ ಕ್ಷೇತ್ರದ ಕ್ರಮ ಸಂಖ್ಯೆ ಹೆಸರು ಹಾಗೂ ಜನಸಂಖ್ಯೆಯ ವಿವರವನ್ನು ನಕ್ಷೆಯ ಬಲ ಭಾಗದಲ್ಲಿ ಪಟ್ಟಿ ಮಾಡಿ ನಮೂದಿಸುವುದು. ನಕಾಶೆಯಲ್ಲಿ ನದಿ, ಬೆಟ್ಟ, ಗುಡ್ಡ, ಅರಣ್ಯ ಪ್ರದೇಶಗಳನ್ನು ಸಂಕೇತದ ಮೂಲಕ ಗುರುತಿಸುವುದು.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Siddaramaiah: ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್; ದೇಶಕ್ಕೆ ಈ ಕಾರಣಕ್ಕೆ ಕಾಂಗ್ರೆಸ್ ಬೇಕು: ಸಿದ್ದರಾಮಯ್ಯ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications