ಕರ್ನಾಟಕದ ಐದು ಜಿಲ್ಲೆಗಳಲ್ಲಿ ಪ್ರವಾಹ ಭೀತಿ, ಎಲ್ಲೆಲ್ಲಿ?

ಬೆಂಗಳೂರು, ಆಗಸ್ಟ್‌ 1: ಮುಂಬೈ, ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗಿರುವ ಪರಿಣಾಮ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಕಳೆದ 15 ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದೆ. ಕರ್ನಾಟಕದ ಉತ್ತರ ಕನ್ಡ, ಶಿವಮೊಗ್ಗದ ಕೆಲವು ಪ್ರದೇಶ, ಉತ್ತರ ಕರ್ನಾಟಕದಲ್ಲಿ ಮಾತ್ರ ಮಳೆಯಾಗುತ್ತಿದೆ. ಅದನ್ನು ಹೊರತುಪಡಿಸಿ ಕರ್ನಾಟಕದಲ್ಲಿ ಮಳೆಯ ಕೊರತೆಯೂ ಇದೆ. ಇನ್ನೂ ಎಲ್ಲಾ ಜಲಾಶಯಗಳು ಭರ್ತಿಯಾಗಿಲ್ಲ. ಹೀಗೆ ಆದರೆ ಮುಂದಿನ ವರ್ಷ ಬರ ಕಟ್ಟಿಟ್ಟ ಬುತ್ತಿ.

ಕಡದರಗಡ್ಡಿ, ಮ್ಯಾದರಗಡ್ಡಿ ಸೇರಿ ನಾಲ್ಕು ನಡುಗಡ್ಡೆ ಗ್ರಾಮಗಳು ದ್ವೀಪಗಳಾಗಿ ಮಾರ್ಪಟ್ಟಿವೆ. ದೇವದುರ್ಗ ಹೂವಿನಹೆಡಗಿ ಸೇತುವೆ ಮುಳುಗಡೆ ಹಂತಕ್ಕೆ ತಲುಪಿದ್ದು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ದೇವದುರ್ಗ- ಕಲಬುರ್ಗಿ ಮಾರ್ಗ ಸಂಚಾರ ಸಂಪೂರ್ಣ ಬಂದ್ ಆಗಿದೆ.

Flood Like Situation in 5 Districts of Karnataka

ನಡುಗಡ್ಡೆ ಗ್ರಾಮಗಳ ಜನತೆಯ ಸುರಕ್ಷತೆಗಾಗಿ ಜಿಲ್ಲಾಡಳಿತ ವಿವಿಧ ತಂಡಗಳನ್ನು ರಚಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ರಾಯಚೂರು ತಾಲೂಕಿನ ಕುರ್ವಕುಲಾ, ಕುರ್ವಕುರ್ದಾ ಗ್ರಾಮಗಳ ಸಂಪರ್ಕವೂ ಕಡಿತವಾಗಿದ್ದು, ಗ್ರಾಮಸ್ಥರು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.

ಇದರಿಂದ ವಿಜಯಪುರ, ಬಾಗಲಕೋಟೆ ಜನರ ಮುಖದಲ್ಲಿ ಮಂದಹಾಸ ಮೂಡಿದೆ. ಜಲಾಶಯದ ಗರಿಷ್ಟ ಮಟ್ಟ 519.60 ಮೀ (123.081 ಟಿಎಂಸಿ) ಇದ್ದು, ಸದ್ಯ 519.25 ಮೀ (119 ಟಿಎಂಸಿ) ನೀರು ಸಂಗ್ರಹಣೆ ಆಗಿದೆ. 26 ಕ್ರಸ್ಟ್ ಗೇಟುಗಳ ಮೂಲಕ ನಾರಾಯಣಪುರ ಜಲಾಶಯಕ್ಕೆ ನೀರು ಬಿಟ್ಟ ಕಾರಣ ಆ ರುದ್ರ ರಮಣೀಯ ದೃಶ್ಯವನ್ನು ನೋಡಲು ಜನರು ಬರುತ್ತಿದ್ದಾರೆ.

1 ಲಕ್ಷ 7 ಸಾವಿರ ಕ್ಯೂಸೆಕ್ ನೀರಿನ ಒಳಹರಿವಿದ್ದು, ಜಲಾಶಯದ 26 ಗೇಟ್ ಮುಖಾಂತರ ನಾರಾಯಣಪುರ ಜಲಾಶಯಕ್ಕೆ 1 ಲಕ್ಷ 32 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
ಮಹಾರಾಷ್ಟದಾದ್ಯಂತ ಧಾರಾಕಾರ ಮಳೆಯಾಗಿದ್ದು ವಿಜಯಪುರದ ಆಲಮಟ್ಟಿ ಜಲಾಶಯ ತುಂಬಿದೆ.

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ, ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಹರಿಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಆಲಮಟ್ಟಿ ಡ್ಯಾಮಿನಿಂದ 1,90,000 ಕ್ಯೂಸೆಕ್ ನೀರನ್ನು ಬಸವಸಾಗರ ಜಲಾಶಯಕ್ಕೆ ನೀರು ಹರಿಬಿಡಲಾಗಿದೆ.

ಆದ್ದರಿಂದ ಬಸವಸಾಗರ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿ ಅಪಾಯದ ಮಟ್ಟ ತಲುಪಿದೆ. ರಾತ್ರಿಯಿಂದ ಜಲಾಶಯದ ಒಟ್ಟು 24 ಗೇಟುಗಳ ಪೈಕಿ, 20 ಗೇಟ್ ಮೂಲಕ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಆದ್ದರಿಂದ ನದಿ ಪಾತ್ರದ ಜನರಿಗೆ ಯಾದಗಿರಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ.

ರಾಯಚೂರು ಭಾಗದಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಐದು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+