ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಹ; ಕಾಳಜಿ ಕೇಂದ್ರದಲ್ಲಿ ಕೋವಿಡ್ ಲಸಿಕೆ ಅಭಿಯಾನ

|
Google Oneindia Kannada News

ಬೆಂಗಳೂರು, ಜುಲೈ 28; ಕಳೆದ ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲಾವೃತ ಪ್ರದೇಶಗಳಲ್ಲಿ ಸಿಲುಕಿದ್ದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ಆರೋಗ್ಯ ಇಲಾಖೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯೊಂದನ್ನು ಕಳಿಸಿದೆ. ನೆರೆಹಾವಳಿಗೆ ತುತ್ತಾದ ಜಿಲ್ಲೆಗಳ ಕಾಳಜಿ ಕೇಂದ್ರದ ನಿವಾಸಿಗಳಿಗೆ ಕೋವಿಡ್-19 ಪರೀಕ್ಷೆ ಮತ್ತು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ನಡೆಸಬೇಕು ಎಂದು ಸೂಚಿಸಲಾಗಿದೆ.

 ಈ ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ ಈ ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಕಾಳಜಿ ಕೇಂದ್ರಗಳಲ್ಲಿರುವ ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಸೂಚಿಸುವುದು ಮತ್ತು ಅದು ಪಾಲನೆಯಾಗುತ್ತಿರುವ ಕುರಿತು ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಲಾಗಿದೆ.

ಭಾರತದಲ್ಲಿ 2.87 ಕೋಟಿ ಡೋಸ್ ಲಸಿಕೆ ಇನ್ನೂ ಬಳಕೆಯಾಗಿಲ್ಲ ಭಾರತದಲ್ಲಿ 2.87 ಕೋಟಿ ಡೋಸ್ ಲಸಿಕೆ ಇನ್ನೂ ಬಳಕೆಯಾಗಿಲ್ಲ

Covid vaccine

ಯಾವುದೇ ವ್ಯಕ್ತಿಗೆ ಕೋವಿಡ್‌ನ ಲಕ್ಷಣಗಳು ಕಂಡು ಬಂದರೆ ಕೋವಿಡ್ ಪರೀಕ್ಷೆ ಮಾಡಿಸಬೇಕು. ಕಾಳಜಿ ಕೇಂದ್ರದಲ್ಲಿ ಎಲ್ಲಿರಿಗೂ ಲಸಿಕೆ ನೀಡಲು ಅಗತ್ಯವಾದ ಕ್ರಮವನ್ನು ಕೈಗೊಳ್ಳಬೇಕು ಎಂದು ಸುತ್ತೋಲೆ ಹೇಳಿದೆ.

ಕಡಿಮೆಯಾದ ಮಳೆ ಅಬ್ಬರ; ಜಲಾಶಯಗಳ ನೀರಿನ ಮಟ್ಟ ಕಡಿಮೆಯಾದ ಮಳೆ ಅಬ್ಬರ; ಜಲಾಶಯಗಳ ನೀರಿನ ಮಟ್ಟ

ಅನುಭವಿ ಮತ್ತು ತರಬೇತಿ ಪಡೆದ ವೈದ್ಯರ ನೇತೃತ್ವದಲ್ಲಿ ಕಾಳಜಿ ಕೇಂದ್ರದಲ್ಲಿ ಲಸಿಕಾಕರಣ ಅಭಿಯಾನ ನಡೆಸಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಲಸಿಕೆ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.

ಲಸಿಕಾ ಕೇಂದ್ರದಲ್ಲಿ ಪಿಪಿಐ ಕಿಟ್, ಮಾಸ್ಕ್ ಲಭ್ಯವಿರುವಂತೆ ಜಿಲ್ಲಾಡಳಿತ ನೋಡಿಕೊಳ್ಳಬೇಕು. ಕೇಂದ್ರದಲ್ಲಿರುವ ಮಕ್ಕಳು, ಗರ್ಭಿಣಿ ಮಹಿಳೆಯರ ಆರೋಗ್ಯದ ಬಗ್ಗೆಯೂ ಗಮನಹರಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.

Recommended Video

ಮುದ್ದು ಆನೆಮರಿಗಳ ತುಂಟಾಟ ಸಖತ್ ಮಜಾ ಕೊಡುತ್ತೆ | Oneindia Kannada

ಭಾರೀ ಮಳೆಯ ಕಾರಣ ಉತ್ತರ ಕನ್ನಡ, ಬೆಳಗಾವಿ, ಕೊಡಗು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಹಲವಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.

English summary
Kalaji kendra opened for the people who effected from flood in various districts of Karnataka. Covid vaccine will be given to people as per the direction of health department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X