ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ: ಎಚ್ಡಿಕೆ ವ್ಯಂಗ್ಯದ ಪರಮಾವಧಿ

|
Google Oneindia Kannada News

ಬೆಂಗಳೂರು, ಜ 6: ಕಂಡು ಕೇಳರಿಯದ ಅತಿವೃಷ್ಟಿಂದ ತತ್ತರಿಸಿ ಹೋಗಿದ್ದ ರಾಜ್ಯಕ್ಕೆ ಪರಿಹಾರ ನೀಡುವಲ್ಲಿ ಮೀನಮೇಷ ಎಣಿಸುತ್ತಿದ್ದ ಕೇಂದ್ರ ಸರಕಾರ ಕೊನೆಗೂ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ.

ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸೋಮವಾರ (ಜ 6) ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯಕ್ಕೆ ಎರಡನೆಯ ಹಂತದ ಪರಿಹಾರ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

Breaking: ರಾಜ್ಯಕ್ಕೆ 1869.85 ಕೋಟಿ ರೂ ಪ್ರವಾಹ ಪರಿಹಾರ ಬಿಡುಗಡೆ ಮಾಡಿದ ಕೇಂದ್ರBreaking: ರಾಜ್ಯಕ್ಕೆ 1869.85 ಕೋಟಿ ರೂ ಪ್ರವಾಹ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

ಈ ಬಗ್ಗೆ ಕೇಂದ್ರ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಾ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಟ್ವೀಟ್ ಹೀಗಿದೆ, "ಕೇಂದ್ರ ಸರ್ಕಾರ ಅಳೆದು ತೂಗಿ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಕೊಟ್ಟಿದೆ".

Flood Relief From Central: Former CM HD Kumaraswamy Tweet

"ಬಹುಶಃ ಶಿವಕುಮಾರ ಶ್ರೀಗಳು ಮೆಟ್ಟಿದ ಭೂಮಿ ಮೋದಿ ಅವರಿಗೆ ಜ್ಞಾನೋದಯ ಮಾಡಿಸಿರಬಹುದು. ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ, ಪ್ರಧಾನಿ ಮೋದಿ ಅವರಿಗೆ ಅಭಿನಂದನೆಗಳು".

"ನೆರೆ ಪರಿಹಾರವಲ್ಲದೇ ರಾಜ್ಯಕ್ಕೆ ನ್ಯಾಯೋಚಿತವಾಗಿ ಬರಬೇಕಾದ ಅನುದಾನ ಸಾಕಷ್ಟಿದೆ. ತೆರಿಗೆ ಪಾಲು, ನರೇಗಾ ಅನುದಾನ, ಬರ ಪರಿಹಾರ.. ಇವುಗಳನ್ನೆಲ್ಲ ಯಾವಾಗ ಕೊಡುತ್ತೀರಿ ಮೋದಿ ಅವರೇ?" ಇದು ಕುಮಾರಸ್ವಾಮಿ ಮಾಡಿರುವ ಟ್ವೀಟ್.

ಮೊದಲ ಹಂತದಲ್ಲಿ ರಾಜ್ಯ ಹೆಚ್ಚಿನ ಪರಿಹಾರ ಕೋರಿದ್ದರೂ ಕೇಂದ್ರ ಸರ್ಕಾರ ಕೇವಲ 1200 ಕೋಟಿ ರೂ ಬಿಡುಗಡೆ ಮಾಡಿತ್ತು. ಅತಿವೃಷ್ಟಿಯಿಂದ ತೀವ್ರ ಹಾನಿ ಅನುಭವಿಸಿರುವ ಕರ್ನಾಟಕದ ಪ್ರವಾಹ ಪರಿಹಾರ ನಿಧಿಗೆ ಎರಡನೆಯ ಹಂತದಲ್ಲಿ 1869.85 ಕೋಟಿ ರೂ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

English summary
Karnataka Flood Relief From Central Government: Former CM HD Kumaraswamy Tweet
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X