ಮೇವು ಹಗರಣ: ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು
ರಾಂಚಿ, ಜುಲೈ 12: ಬಹುಕೋಟಿ ಮೇವು ಹಗರಣ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಅನುಭವಿಸುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಉಚ್ಚ ನ್ಯಾಯಾಲಯ ಜಾಮೀನು ನೀಡಿದೆ. ಈ ಮೂಲಕ ಮೇವು ಹಗರಣದ ನಾಲಾಲೂ ಅವರಿಗೆ ಜಾಮೀನು ಸಿಕ್ಕಂತಾಗಿದೆ.
ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನಡೆದಿದ್ದ ಮೇವು ಹಗರಣದ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಯಾದವ್ ಅವರನ್ನು ದೋಷಿ ಎಂದು ಪರಿಗಣಿಸಲಾಗಿದ್ದು, ಅವರಿಗೆ ನಾಲ್ಕು ಪ್ರಕರಣಗಳಿಂದ ಒಟ್ಟು 20.5 ವರ್ಷ ಜೈಲುಶಿಕ್ಷೆ ವಿಧಿಸಲಾಗಿತ್ತು.
ಈ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ 3.5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಪ್ರಸ್ತುತ ಅನಾರೋಗ್ಯದಿಂದ ಬಳಲುತ್ತಿರುವ ಲಾಲೂ ಪ್ರಸಾದ್ ಯಾದವ್ ಅವರು ರಾಂಚಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.












Click it and Unblock the Notifications