APL Card: ಎಪಿಎಲ್ ಕಾರ್ಡುಗಳ ರದ್ದತಿ ಕುರಿತು ಆಹಾರ ಇಲಾಖೆ ಮಹತ್ವ ಮಾಹಿತಿ ಇಲ್ಲಿದೆ
ಬೆಂಗಳೂರು, ನವೆಂಬರ್ 16: ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಯಾವುದೇ ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಹಾಗೂ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.
ಕೆಲವು ದಿನಪತ್ರಿಕೆಗಳಲ್ಲಿ ಇ-ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ. ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ 2 ರಂದು 25,13,798 ಎಪಿಎಲ್ ಕಾರ್ಡುಗಳಿದ್ದವು. ಇಂದು ನವೆಂಬರ್ 16 ರಂದು 25,62,566 ಕಾರ್ಡುಗಳಿವೆ.

ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ,ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ. ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯ ಸಂಗತಿಯಲ್ಲ ಎಂದು ಆಹಾರ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹೆಸರುಕಾಳು ಖರೀದಿ ಅವಧಿ ವಿಸ್ತರಣೆ: ಶಿವಾನಂದ ಪಾಟೀಲ
ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ ಗೆ ರೂ 8,682 ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಕ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಆಸ್ಟ್ರೇಲಿಯಾ ವೆಸ್ಟ್ ಸಿಡ್ನಿ ವಿವಿಯಿಂದ ಬೆಂಗಳೂರಿನಲ್ಲಿ ಕೃಷಿ ವಿವಿ ಆರಂಭಿಸಲು ಉದ್ದೇಶ
ರಾಜ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಸಂಬಂಧಪಟ್ಟಂತೆ ಆಸ್ಟ್ರೇಲಿಯಾದ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಅಧಿಕಾರಿಗಳು ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ McGeachy ನೇತೃತ್ವದ ನಿಯೋಗದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಶುಕ್ರವಾರ ಭೇಟಿಯಾಗಿ ಚರ್ಚಿಸಿದರು.
ಆಸ್ಟ್ರೇಲಿಯಾ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು ಭಾರತದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಉತ್ಸುಕವಾಗಿದ್ದು, ಬೆಂಗಳೂರು ನಗರದಲ್ಲಿ ಆರಂಭಿಸಲು ಉದ್ದೇಶಿಸಿದೆ ಎಂದು ಕುಲಪತಿಗಳಾದ ಜಾರ್ಜ್ ವಿಲಿಯಮ್ಸ್ ಅಭಿಪ್ರಾಯಪಟ್ಟರು. ಕೃಷಿಯಲ್ಲಿ ನೀರು ನಿರ್ವಹಣೆ ತಾಂತ್ರಿಕತೆ ಅಳವಡಿಕೆ, ಆಹಾರ ಸಂಸ್ಕರಣೆ ಮುಂತಾದ ಮುಖ್ಯ ವಿಷಯಗಳನ್ನು ಈ ಕೃಷಿ ವಿಶ್ವವಿದ್ಯಾಲಯದಲ್ಲಿ ಆದ್ಯತೆ ನೀಡಲಾಗುತ್ತದೆ ಎಂದು ವಿವರಿಸಿದರು.
ಸ್ವತಂತ್ರವಾಗಿ ವಿಶ್ವವಿದ್ಯಾಲಯ ಸ್ಥಾಪಿಸುವುದು ಅಥವಾ ಕರ್ನಾಟಕದಲ್ಲಿನ ವಿಶ್ವವಿದ್ಯಾಲಯಗಳ ಸಹಯೋಗದಲ್ಲೂ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವುದಾಗಿ ಜಾರ್ಜ್ ವಿಲಿಯಮ್ಸ್ ಅಭಿಪ್ರಾಯಪಟ್ಟರು. ವಿದ್ಯಾರ್ಥಿ ವೇತನ ನೀಡುವ ಉದ್ದೇಶವಿರುವುದಾಗಿ ತಿಳಿಸಿದ ಅವರು, ಈಗಾಗಲೇ ವಿಯೆಟ್ನಾಂ, ಇಂಡೋನೇಷಿಯಾದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು ಆರಂಭಿಸಿದೆ. ಯು.ಎ.ಇ. ಯಲ್ಲಿ ಸ್ಥಾಪನೆಗೆ ಮಾತುಕತೆ ನಡೆದಿದೆ ಎಂದರು. ಹಾಗಾಗಿ ಕರ್ನಾಟಕದಲ್ಲೂ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಉತ್ಸುಕವಾಗಿದ್ದು, ನಮಗೆ 30 ಸಾವಿರ ಅಡಿ ಸ್ಥಳಾವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.
ಈ ಸಂಬಂಧ ಮಾತನಾಡಿದ ಉನ್ನತ ಶಿಕ್ಷಣ ಸಚಿವರಾದ ಡಾ: ಎಂ.ಸಿ.ಸುಧಾಕರ್ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು. ನಮ್ಮ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಕೃಷಿಗೆ ಸಂಬಂಧಪಟ್ಟಂತಹ ಹೊಸ ಆವಿಷ್ಕಾರದ ವಿಷಯಗಳನ್ನು ಆರಂಭಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಅಲ್ಲದೆ, ವಿದ್ಯಾರ್ಥಿಗಳ ಪರಸ್ಪರ ಕಲಿಕಾ ವಿನಿಮಯ ಕಾರ್ಯಕ್ರಮ ತರಬೇತಿ ಹಾಗೂ ಉಪನ್ಯಾಸಕರ ವಿನಿಮಯದ ಮೂಲಕ ಶೈಕ್ಷಣಿಕವಾಗಿ ಹೆಚ್ಚು ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications