Food Safety: ಸಿಹಿ ಪ್ರಿಯರೇ ಎಚ್ಚರ: 16 ಘಟಕಗಳಲ್ಲಿ ಆರೋಗ್ಯಾಧಿಕಾರಿಗಳ ದಾಳಿ! ಅವಧಿ ಮೀರಿದ ಪದಾರ್ಥ ಜಪ್ತಿ

ಬೆಂಗಳೂರು: ರಾಜ್ಯದ ಹೋಟೆಲ್, ರೆಸ್ಟೋರೆಂಟ್, ರೈಲ್ವೆ ನಿಲ್ದಾಣಗಳ ಕ್ಯಾಂಟಿನ್ ಸೇರಿದಂತೆ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ್ದ ಆರೋಗ್ಯ ಸುರಕ್ಷತಾ ಅಧಿಕಾರಿಗಳು ಇದೀಗ ಸಿಹಿ ತಿಂಡಿ ತಯಾರಿಕಾ ಕೇಂದ್ರಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವಧಿ ಮೀರಿದ ಪದಾರ್ಥಗಳು, ಅನೈರ್ಮಲ್ಯತೆ ಪತ್ತೆ ಪತ್ತೆಯಾಗಿದೆ. ಜೊತೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥ ವಶಕ್ಕೆ ಪಡೆಯಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ವತಿಯಿಂದ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಮೈಸೂರು ಮಹಾನಗರ ಪಾಲಿಕೆ, ದಕ್ಷಿಣ ಕನ್ನಡ, ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ವ್ಯಾಪ್ತಿಯ ಸಿಹಿತಿಂಡಿ ಉತ್ಪಾದನಾ ಘಟಕಗಳು ಇವಾಗಿವೆ.

Food Safety

ಈ ವಿಶೇಷ ಕಾರ್ಯಾಚರಣೆಯ ಮೂಲಕ ಆಹಾರ ತಯಾರಿಕೆಯಲ್ಲಿ ತಪ್ಪುಗಳಾದರೆ, ನಿಯಮ ಉಲ್ಲಂಘಿಸಿದರೆ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಉದ್ದೇಶವು ಸಿಹಿ ತಿಂಡಿ ತಯಾರಿಕಾ ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಮಾನದಂಡಗಳ ಪಾಲನೆ ಆಗಿದೆಯೋ ಇಲ್ಲವೋ ಎಂದು ಪರಿಶೀಲಿಸಲಾಯಿತು. ಈ ವೇಳೆ ಕೆಲವು ಅಚ್ಚರಿ ಸಂಗತಿಗಳು ಬೆಳಕಿಗೆ ಬಂದಿವೆ.

ರಾಜ್ಯದ ಒಟ್ಟು 16 ಸಿಹಿ ತಿಂಡಿ ತಯಾರಿಕಾ ಘಟಕಗಳಲ್ಲಿನ ವಿವಿಧ ಆಹಾರ ಉತ್ಪನ್ನಗಳಾದ ಸಿಹಿ ತಿಂಡಿಗಳು, ಅಡುಗೆ ಎಣ್ಣೆ, ತಾಜಾ ಎಣ್ಣೆ, ಮೊಸರು, ಬೇಳೆ, ಕಡಲೆ/ಚನ್ನಾ, ಜಿಲೇಬಿ, ಕೋವ ಹಾಗೂ ಟೀ ಪೌಡರ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಯಿತು. ಅವುಗಳ ಗುಣಮಟ್ಟ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸುವ ಸಲುವಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಆರೋಗ್ಯಾಧಿಕಾರಿಗಳು ಹೇಳಿದರು.

ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆ

ತಪಾಸಣೆಯ ಸಂದರ್ಭದಲ್ಲಿ ಅವಧಿ ಮೀರಿದ ನಂದಿನಿ ಮೊಸರು 5 ಲೀಟರ್ ಹಾಗೂ ತಪ್ಪಾದ ಲೇಬಲಿಂಗ್ ಹೊಂದಿದ್ದ ಚಾಕೊಲೇಟ್ ಅಲಂಕಾರ ಪದಾರ್ಥಗಳ ದೊಡ್ಡ ಗಾತ್ರದ 13 ಪ್ಯಾಕೆಟ್‌ಗಳು ಮತ್ತು ಸಣ್ಣ ಗಾತ್ರದ 6 ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಚಾಕೊಲೇಟ್ ಪ್ಲೇವರ್ 10 ಕೆ.ಜಿ. ರಸಗುಲ್ಲಾ 5 ಕೆ.ಜಿ. ಆಹಾರ ಪದಾರ್ಥ ಜಪ್ತಿ ಮಾಡಲಾಗಿದೆ.

ತಪ್ಪು ಬ್ರ್ಯಾಂಡಿಂಗ್, ಲೇಬಲ್ ಹಾಕಿಲ್ಲ

ಬಾಳೆಕಾಯಿ ಚೀಪ್ಸ್, ಚಕ್ಕುಲಿ ಮಸಾಲಾ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಸುಮಾರು 60 ಕೆ.ಜಿ. ಪ್ರಮಾಣದ ಪ್ಯಾಕೆಟ್‌ಗಳ ಮೇಲೆ ತಯಾರಕರ ಹೆಸರು ಮತ್ತು ವಿಳಾಸ, FSSAI ಪರವಾನಗಿ ಸಂಖ್ಯೆ ಸೇರಿದಂತೆ ಕಡ್ಡಾಯ ಲೇಬಲ್ ವಿವರಗಳನ್ನು ನಮೂದಿಸಿಲ್ಲ. ತಪ್ಪು ಬ್ರಾಂಡಿಂಗ್ (Misbranding) ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಸದರಿ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.

5.99 ಲಕ್ಷ ರೂ. ಮೌಲ್ಯದ ಆಹಾರ ಜಪ್ತಿ

ರೆಡಿ-ಟು-ಈಟ್ ಸಾವರಿಸ್- 367, ಕೋಕೋ ಪೌಡರ್ 4, ಕ್ರ್ಯಾಕ್ಡ್ ಕೋಕೋ ಬೀನ್ಸ್ 4.5 ಕೆ.ಜಿ. ಹಾಗೂ ಖೋವಾ 6 ಕೆ.ಜಿ. ಹಾಗೂ ಸೋಂಪಾ ಪುಡಿ 196 ಕೆಜಿ ಆಹಾರ ಪದಾರ್ಥಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಈ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ಒಟ್ಟು ಅಂದಾಜು 5.99 ಲಕ್ಷ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಆಹಾರ ಪದಾರ್ಥಗಳ ಕುರಿತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 ಹಾಗೂ ಅದರಡಿ ರೂಪಿಸಲಾದ ನಿಯಮಾವಳಿಗಳನ್ವಯ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+