ಸರ್ಕಾರಕ್ಕೆ ಆಪತ್ತು; ಕರ್ನಾಟಕದಲ್ಲಿ ನಡೆಯುತ್ತಾ ಮಹಾರಾಷ್ಟ್ರ ಮಾದರಿಯ ಆಪರೇಷನ್‌ ನಾಥ? ಸಿದ್ದರಾಮಯ್ಯ ಏನಂದ್ರು?

ಬೆಂಗಳೂರು, ಮೇ 13: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಪತನವಾಗುತ್ತದೆ. ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಜೂನ್‌ ಬಳಿಕ ರಾಜ್ಯ ಸರ್ಕಾರ ಬೀಳಿತ್ತೇ ಎಂದು ಭವಿಷ್ಯ ನುಡಿಯುತ್ತಿದ್ರು. ಇದೀಗ ಮಹಾರಾಷ್ಟ್ರ ಮಾದರಿ'ಯಲ್ಲಿ ಕರ್ನಾಟಕದಲ್ಲೂ ಆಪರೇಷನ್‌ ನಡೆಯುವ ಸುಳಿವನ್ನು ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವರು ಎನ್.ಡಿ. ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

For Any Reason Our Government Can t Do Operation Kamala Says Siddaramaiah

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು ಅವರು, ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ ಎಂದರು. ರಾಜಕೀಯ ಧೃವೀ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದರು.

ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ. ಹೆಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜೊತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ.

ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಎಲ್ಲಾ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+