ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನನ, ಮರಣ ನೋಂದಣಿಗೆ ನಾಡ ಕಚೇರಿಗೆ ಹೋಗಿ

|
Google Oneindia Kannada News

ಬೆಂಗಳೂರು, ಏ.7 : ಗ್ರಾಮೀಣ ಪ್ರದೇಶಗಳಲ್ಲಿಯೂ ಇನ್ನು ಮುಂದೆ ಜನನ ಮತ್ತು ಮರಣ ನೋಂದಣಿಯನ್ನು ಆನ್‍ಲೈನ್ ಮೂಲಕ ಮಾಡಿ ಪ್ರಮಾಣ ಪತ್ರಗಳನ್ನು ಪಡೆಯಬಹುದಾಗಿದೆ. ಆನ್‌ಲೈನ್ ಪ್ರಕ್ರಿಯೆಯನ್ನು ಸರ್ಕಾರವು ಗ್ರಾಮೀಣ ಪ್ರದೇಶಕ್ಕೂ ವಿಸ್ತರಣೆ ಮಾಡಿದೆ.

ಈ ವ್ಯವಸ್ಥೆಯಲ್ಲಿ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ನಾಡಾ ಕಚೇರಿಗೆ ಭೇಟಿ ನೀಡಬೇಕಾಗುತ್ತದೆ. ಮನೆಯಲ್ಲಿ ಸಂಭವಿಸುವ ಜನನ, ಮರಣವನ್ನು ಕಚೇರಿಯಲ್ಲಿನ ನಮೂನೆ 1 ಅಥವಾ 2 ರಲ್ಲಿ ಭರ್ತಿ ಮಾಡಿ ಕೇಂದ್ರದಲ್ಲಿ ನೀಡಬೇಕು.[ಜನನ ಪ್ರಮಾಣ ಪತ್ರ ಪಡೆಯುವುದು ಹೇಗೆ?]

Nadakacheri

ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್‌ಗಳು ಇವುಗಳನ್ನು ಕಂಪ್ಯೂಟರ್‌ನಲ್ಲಿ ದಾಖಲಿಸಿ ಅನುಮೋದನೆಗಾಗಿ ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳಿಗೆ ಆನ್‍ಲೈನ್ ಮೂಲಕ ಕಳುಹಿಸಿಕೊಡುತ್ತಾರೆ. ಗ್ರಾಮ ಲೆಕ್ಕಾಧಿಕಾರಿಗಳು ಅನುಮೋದನೆ ಮಾಡಿದ ನಂತರ ನಾಡ ಕಛೇರಿಗಳಲ್ಲಿಯೇ ಪ್ರಮಾಣ ಪತ್ರಗಳನ್ನು ನೀಡಲಾಗುತ್ತದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಬಂಧಿಸಿದ ಘಟನೆಗಳಿಗೆ ಆಸ್ಪತ್ರೆಯಲ್ಲಿರುವ ನೋಂದಣಿ ಕೇಂದ್ರದಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಂಡು ಪ್ರಮಾಣ ಪತ್ರ ವಿತರಿಸಲಾಗುತ್ತದೆ. ಖಾಸಗಿ ಆಸ್ಪತ್ರೆಗಲ್ಲಿ ಸಂಭವಿಸುವ ಘಟನೆಗಳಿಗೆ ಆಸ್ಪತ್ರೆಯಲ್ಲಿರುವ ಗಣಕಯಂತ್ರದಲ್ಲಿ ದಾಖಲಿಸಿ ಸಂಬಂಧಪಟ್ಟ ನೋಂದಣಿದಾರರಿಗೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.

ಉಚಿತ ಪ್ರಮಾಣ ಪತ್ರ : ಸಾರ್ವಜನಿಕರು ತಮ್ಮ ಕುಟುಂಬದಲ್ಲಿ ಸಂಭವಿಸುವ ಜನನ ಅಥವಾ ಮರಣದ ಘಟನೆಗಳನ್ನು ಸ್ಥಳೀಯ ನೋಂದಣಾಧಿಕಾರಿಗಳ ಕಛೇರಿಯಲ್ಲಿ 21 ದಿನದೊಳಗೆ ನೋಂದಾಯಿಸಿ ಉಚಿತ ಪ್ರಮಾಣ ಪತ್ರಗಳನ್ನು ಪಡೆಯಬಹುದು. ತಡವಾಗಿ ನೋಂದಣಿ ಮಾಡಿದರೂ ನಿಗದಿತ ಶುಲ್ಕ ಪಾವತಿಸಿ ಪ್ರಮಾಣ ಪತ್ರ ಪಡೆಯಲು ಅವಕಾಶವಿದೆ.

ರಾಜ್ಯದಲ್ಲಿ ಸಂಭವಿಸುವ ಪ್ರತಿಯೊಂದು ಜನನ, ಮರಣ ಘಟನೆಗಳು ನೋಂದಣಿಯಾಗಬೇಕು, ನೋಂದಣಿಯು ಪ್ರತಿಶತ 100 ರಷ್ಟು ತಲುಪಬೇಕೆಂಬ ಉದ್ದೇಶದಿಂದ ಈ ಆನ್‍ಲೈನ್ ನೋಂದಣಿಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ.

English summary
Now birth or death online registration facility will available in rural areas of Karnataka. People can visit Nadakacheri and register death or birth within 21 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X