ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊನೆಗೂ ಮೌನ ಮುರಿದು ಕೇಂದ್ರದ ಎದುರು ಹಕ್ಕು ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ಆಗಸ್ಟ್ 27: ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ಆದರೆ ಉಪಯೋಗ ಏನು ಬಂತು? ಪ್ರಧಾನಿ ಮೋದಿ ಎದುರು ಮಾತನಾಡಲು ಭಯ ಪಡುತ್ತಾರೆ. ಹೀಗಾಗಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸೌಲಭ್ಯ, ಅನುದಾನ ಬರುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಬಿಜೆಪಿ ಸಂಸದರ ಮೇಲೆ ಆರೋಪ ಮಾಡುತ್ತಾರೆ. ಇನ್ನು ಕೇಂದ್ರದಿಂದ ಬರಬೇಕಾಗಿರುವ ಜಿಎಸ್‌ಟಿ ಬಾಕಿ, ಹಣಕಾಸು ಆಯೋಗದ ಅನುದಾನ ಹಂಚಿಕೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಯಾರೂ ಕೇಂದ್ರದ ಎದರು ಬೇಡಿಕೆಯನ್ನು ಇಡುವುದೇ ಇಲ್ಲ ಎಂಬ ಆರೋಪ ಕೂಡ ಸಾಮಾನ್ಯ.

ವಿಪಕ್ಷಗಳ ಆರೋಪದಂತೆಯೇ ಇನ್ನೂ ಜಿಎಸ್‌ಟಿ ಬಾಕಿ ಹಣವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ಜೊತೆಗೆ ನಮ್ಮ ರಾಜ್ಯದಿಂದ ಶೇಖರಿಸುವ ತೆರಿಗೆಯನ್ನು ಉತ್ತರದ ರಾಜ್ಯಗಳಿಗೆ ಹಂಚುತ್ತಾರೆ ಎಂದು ಹಿಂದೆ ಹಣಕಾಸು ಇಲಾಖೆಯನ್ನು ನಿರ್ವಹಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದೀಗ ಕೇಂದ್ರ ಸರ್ಕಾರದ ಎದುರು ಹಕ್ಕೊತ್ತಾಯ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ ಮುಕ್ತರಾಗಲು ಮುಂದಾಗಿದ್ದಾರೆ.

ಇಷ್ಟು ದಿನಗಳ ಕಾಲ ಎಲ್ಲದಕ್ಕೂ ಮನವಿ ಮಾಡುತ್ತಿದ್ದ ರಾಜ್ಯ ಸರ್ಕಾರ ಇದೇ ಮೊದಲ ಬಾರಿ ಕೇಂದ್ರದ ಎದುರು ಆಗ್ರಹ ಮಾಡಿದೆ. ತನಗೆ ಬರಬೇಕಾದ ಅನುದಾನದ ಬಗ್ಗೆ ಕೇಂದ್ರದ ಎದುರು ರಾಜ್ಯ ಬೇಡಿಕೆ ಇಟ್ಟಿದೆ. ಆ ಮೂಲಕ ವಿಪಕ್ಷಗಳಿಗೂ ಪ್ರತ್ಯುತ್ತರವನ್ನು ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ.

ನಮಗೆ ಸಾಲ ಬೇಡ ಪರಿಹಾರ ಕೊಡಿ!

ನಮಗೆ ಸಾಲ ಬೇಡ ಪರಿಹಾರ ಕೊಡಿ!

ಎರಡು ದಿನಗಳ ದೆಹಲಿ ಭೇಟಿಗೆ ತೆರಳಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಿ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಜೊತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದೆ ಜಿಎಸ್‌ಟಿ ಬೇಡಿಕೆ ಇಟ್ಟಿದ್ದಾರೆ. ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಕೇಂದ್ರ ಸರ್ಕಾರದಿಂದ ಜಿ.ಎಸ್.ಟಿ. ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಡಿಕೆ ಇಟ್ಟಿದ್ದಾರೆ.

ರಾಜ್ಯಕ್ಕೆ ಕೇಂದ್ರದ ನೆರವು ಅಗತ್ಯವಾಗಿದೆ!

ರಾಜ್ಯಕ್ಕೆ ಕೇಂದ್ರದ ನೆರವು ಅಗತ್ಯವಾಗಿದೆ!

ಕೊರೊನಾವೈರಸ್, ಲಾಕ್‌ಡೌನ್ ಸಂಕಷ್ಟದಿಂದ ರಾಜ್ಯದ ತೆರಿಗೆ ಸಂಗ್ರಹ ಕಡಿಮೆಯಾಗಿದೆ. ಸಾಮಾನ್ಯ ಸ್ಥಿತಿಗೆ ಬರಲು ಕೆಲವು ವರ್ಷಗಳೇ ಬೇಕಾಗಬಹುದು. ಕಳೆದ ವರ್ಷ ಜಿಎಸ್‌ಟಿ ಪರಿಹಾರದ ಬದಲು ಜಿಎಸ್‌ಟಿ ಪರಿಹಾರಕ್ಕೆ ಸಾಲ ಒದಗಿಸಲಾಗಿತ್ತು. ಈ ವರ್ಷವೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಆದರೆ ಅದು ನಮಗೆ ಬೇಡ. ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವ ವರೆಗೆ ಕೇಂದ್ರದ ನೆರವು ಅತಿ ಅಗತ್ಯವಾಗಿದೆ. ಹೀಗಾಗಿ ಸಾಲದ ಬದಲು ಮೂರು ವರ್ಷಗಳ ಅವಧಿಗೆ ಜಿ.ಎಸ್.ಟಿ. ಪರಿಹಾರ ಕೊಡಿ ಎಂದು ಬಸವರಾಜ ಬೊಮ್ಮಾಯಿ ನಿರ್ಮಲಾ ಸೀತಾರಾಮನ್ ಎದುರು ಬೇಡಿಕೆ ಇಟ್ಟಿದ್ದಾರೆ.

ತಕ್ಷಣ ಅನುದಾನದ ಮಾನದಂಡ ಬದಲಿಸಿ!

ತಕ್ಷಣ ಅನುದಾನದ ಮಾನದಂಡ ಬದಲಿಸಿ!

ಖಡಕ್ ಆಗಿ ಮತ್ತೊಂದು ವಿಬೇಡಿಕೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಕೇಂದ್ರ ಹಣಕಾಸು ಸಚಿವರ ಎದುರು ಇಟ್ಟಿದ್ದಾರೆ. 15ನೇ ಹಣಕಾಸು ಆಯೋಗವು 2021 ರಿಂದ 2026 ರ ಅವಧಿಗೆ ರಾಜ್ಯಗಳಿಗೆ ತೆರಿಗೆ ಹಂಚಿಕೆಗೆ ಶಿಫಾರಸು ಮಾಡಿದೆ. ಅದರಂತೆ ರಾಜ್ಯಕ್ಕೆ 14ನೇ ಹಣಕಾಸು ಆಯೋಗ ಶಿಫಾರಸು ಮಾಡಿದ ಶೇ. 4.71 ರಿಂದ ಶೇ. 3.64ಕ್ಕೆ ಇಳಿಕೆಯಾಗಿದೆ. ಇದರಿಂದ ಅನುದಾನ ಹಂಚಿಕೆಯಲ್ಲಿ ತೀವ್ರ ಇಳಿಕೆಯಾಗಿದೆ.

ಅನುದಾನ ಹಂಚಿಕೆ ಕುರಿತ ಮಾನದಂಡಗಳನ್ನು ಬದಲಿಸುವಂತೆ ರಾಜ್ಯ ಸರ್ಕಾರವು 15ನೇ ಹಣಕಾಸು ಆಯೋಗಕ್ಕೆ ಈಗಾಗಲೇ ಬೇಡಿಕೆ ಇಟ್ಟಿತ್ತು. ರಾಜ್ಯದ ಮನವಿಯನ್ನು ಆಯೋಗವು ಪರಿಗಣಿಸಿಲ್ಲ. ಇದರಿಂದಾಗಿ ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಮಲಾ ಸೀತಾರಾಮನ್ ಅವರಿಗೆ ವಿವರಿಸಿದ್ದಾರೆ. ತಕ್ಷಣ ಈ ತಾರತಮ್ಯ ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Recommended Video

ನಿಮ್ ಮಕ್ಳಿಗೆಲ್ಲಾ ಒಳ್ಳೆದಾಗಲ್ಲಾ ಎಂದು ಪೊಲೀಸರ ಮೇಲೆ ರಮೇಶ್ ಕುಮಾರ್ ಫುಲ್ ಗರಂ | Oneindia Kannada
ಕೇಂದ್ರದ ನಡೆಯಿಂದ ಬೆಂಗಳೂರು ಅಭಿವೃದ್ಧಿಗೆ ಹಿನ್ನಡೆ!

ಕೇಂದ್ರದ ನಡೆಯಿಂದ ಬೆಂಗಳೂರು ಅಭಿವೃದ್ಧಿಗೆ ಹಿನ್ನಡೆ!

15ನೇ ಹಣಕಾಸು ಆಯೋಗವು ತನ್ನ ಶಿಫಾರಸಿನಲ್ಲಿ ರಾಜ್ಯ ನಿರ್ದಿಷ್ಟ ಅನುದಾನದಡಿ ರಾಜ್ಯಕ್ಕೆ ಬೆಂಗಳೂರಿನ ಜಲಮೂಲಗಳು ಹಾಗೂ ಪೇರಿಫೆರಲ್ ರಿಂಗ್ ರಸ್ತೆಗೆ 6 ಸಾವಿರ ಕೋಟಿ ರೂ. ನಿಗದಿ ಪಡಿಸಿದೆ. ಆದರೆ ಕೇಂದ್ರ ಸರ್ಕಾರದ ಎಕ್ಸಪ್ಲೆನೇಟರಿ ಮೆಮೊರಂಡಂ ನಲ್ಲಿ ಹಣಕಾಸು ಆಯೋಗ ಈ ಶಿಫಾರಸನ್ನು ಪ್ರಸ್ತಾಪಿಸಿಲ್ಲ.

ಅದರಿಂದ ಮೊದಲೇ ತೆರಿಗೆ ಹಂಚಿಕೆಯಲ್ಲಿ ಇಳಿಕೆಯಾಗಿರುವ ರಾಜ್ಯಕ್ಕೆ ಇನ್ನಷ್ಟು ಹಿನ್ನಡೆಯಾಗಲಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಸ್ಟಾರ್ಟ್ ಅಪ್ ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರು ದೇಶದ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದೆ. ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಯಿಂದ ಹೆಚ್ಚಿನ ಹೂಡಿಕೆ ಆಕರ್ಷಿಸಲು ಸಾಧ್ಯವಾಗುವುದು. ಆದ್ದರಿಂದ 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬೆಂಗಳೂರು ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ನಿರ್ಮಲಾ ಸೀತಾರಾಮನ್ ಎದುರು ಸಿಎಂ ಬೊಮ್ಮಾಯಿ ಬೇಡಿಕೆ ಇಟ್ಟಿದ್ದಾರೆ.

English summary
For the first time, Chief Minister Basavaraj Bommai has demanded grant from the central government to the state. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X